ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿರುವವರೇ ದುಷ್ಟಶಕ್ತಿಗಳು: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಅನವಶ್ಯಕ ವಿಚಾರ ಇಟ್ಟುಕೊಂಡು ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಶುಕ್ರವಾರ ಪ್ರತಿಕೆಗಳಿಗೆ ನೀಡಿರುವ ಸರ್ಕಾರದ ಜಾಹೀರಾತಿನಲ್ಲಿ ದುಷ್ಟಶಕ್ತಿಗಳು ಎಂದು ಹೇಳಿದ್ದು ಆ ದುಷ್ಟಶಕ್ತಿಗಳು ಯಾರು ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು.

“ದುಃಖವನ್ನು ನಿವಾರಿಸುವ ದುರ್ಗಾ ದೇವಿ, ದುಷ್ಟರನ್ನು ದೂರಮಾಡಿ ಎಲ್ಲರಿಗೂ ಒಳ್ಳೆಯದನ್ನು ಮಾಡಿ ಹರಸಲಿ. ನಮ್ಮ ರಾಜ್ಯ ಶಾಂತಿಯ ತೋಟವಾಗಿ ಪರಿವರ್ತನೆ ಆಗಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು.

Advertisements

ಹುಬ್ಬಳ್ಳಿಯಲ್ಲಿ ಪ್ರಲ್ಹಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷವೇ ದುಷ್ಟಶಕ್ತಿಗೆ ಪ್ರಚೋದನೆ ನೀಡುತ್ತಿದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ವಿರೋಧ ಪಕ್ಷದವರಿಗೆ ಉತ್ತರ ನೀಡಲು ಬಯಸುವುದಿಲ್ಲ. ಸಕಾರಾತ್ಮಕ ವಿಚಾರದ ಬಗ್ಗೆ ಮಾತ್ರ ಮಾತನಾಡುತ್ತೇನೆ” ಎಂದು ತಿಳಿಸಿದರು.

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆದಿರುವ ಬಗ್ಗೆ ಕೇಳಿದಾಗ, “ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ನಾವು ಹಿಂದಕ್ಕೆ ಪಡೆದಿದ್ದೇವೆ. ಈ ಬಗ್ಗೆ ಗೃಹಸಚಿವರು ಹೆಚ್ಚಿನ ಮಾಹಿತಿ ನೀಡುತ್ತಾರೆ” ಎಂದರು.

ಬಿಜೆಪಿ ನಿಲುವೇನು?

ಜಾತಿ ಗಣತಿ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ಬ್ರಿಟೀಷರಂತೆ ಒಡೆದು ಆಳುವ ನೀತಿ ಅನುಸರಿಸುತ್ತಿದೆಯೇ ಎಂದು ಕೇಳಿದಾಗ, “ಜಾತಿ ಗಣತಿ ವಿಚಾರದಲ್ಲಿ ತಮ್ಮ ನಿಲುವೇನು ಎಂದು ಬಿಜೆಪಿ ತಿಳಿಸಲಿ. ಆನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

ಕಾಂಗ್ರೆಸ್ ನವರು ಸರ್ಕಾರವನ್ನು ಮೋಸದಿಂದ ಸ್ಥಿರಗೊಳಿಸಲು ಹೊರಟಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮುಂದೆ ಚರ್ಚೆ ಮಾಡೋಣ, ದುರ್ಗಾ ಮಾತೇ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ” ಎಂದು ತಿಳಿಸಿದರು.

ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಲಿ

“ನಮ್ಮ ಕೊಡಗಿನ ಸಂಸ್ಕೃತಿಯ ಸಂಕೇತ ಮಡಿಕೇರಿ ದಸರಾಕ್ಕೆ ಚಾಲನೆ ನೀಡಲು ಇಂದು ಮಡಿಕೇರಿಗೆ ಭೇಟಿ ನೀಡಿದ್ದೇನೆ. ಈ ವಿಶೇಷ ಸಂದರ್ಭ ಹಾಗೂ ನಮ್ಮ ಸಂಸ್ಕೃತಿಯ ಸಂಕೇತದ ಆಚರಣೆಗೆ ಪ್ರೋತ್ಸಾಹ ನೀಡಬೇಕು ಎಂದು ಬಂದಿದ್ದೇನೆ. ಜಿಲ್ಲಾ ನಾಯಕರು ಹಾಗೂ ಕಾರ್ಯಕರ್ತರು ನನಗೆ ಸ್ವಾಗತ ಕೋರಿದ್ದು, ಮೈಸೂರು ದಸರಾ ಮಾದರಿಯಲ್ಲೇ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಬೇಕು. ಇದಕ್ಕಾಗಿ ಈ ಭಾಗದ ಜನರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಮೈಸೂರು ದಸರಾ ಹಾಗೂ ಮಡಿಕೇರಿಗೆ ಮೂರುವರೆ ಲಕ್ಷ ವಾಹನಗಳು ಬಂದಿವೆ ಎಂಬ ಅಂಕಿಅಂಶಗಳು ನಮಗೆ ಲಭ್ಯವಾಗಿವೆ. ಬರಗಾಲ ಹೋಗಿ ಉತ್ತಮ ಮಳೆಯಾಗುತ್ತಿದೆ. ಈ ಬಾರಿ ಕಾಫಿಗೆ ಉತ್ತಮ ಬೆಲೆ ಬಂದಿದೆ. ಕಾವೇರಿ ತುಂಬಿ ಹರಿಯುತ್ತಿದ್ದು, ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ಆ ತಾಯಿಗೆ ಬಾಗಿನ ಅರ್ಪಿಸಿದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X