ಪ.ಬಂಗಾಳ | ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿದ್ದ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ

Date:

Advertisements

ಕೊಲ್ಕತ್ತಾ ಹೈಕೋರ್ಟ್‍ನ ನ್ಯಾಯಮೂರ್ತಿ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದ ಅಭಿಜಿತ್ ಗಂಗೋಪಾಧ್ಯಾಯ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಗೆ ಸೇರ್ಪಡೆಗೊಂಡಿದ್ದಾರೆ.

ಕೊಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಔಪಚಾರಿಕವಾಗಿ ಸೇರ್ಪಡೆಗೊಂಡರು.

ಈ ವೇಳೆ ಪಕ್ಷದ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್, ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಸೇರಿದಂತೆ ಹಲವರಿದ್ದರು.

ಪಕ್ಷ ಸೇರ್ಪಡೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಭಿಜಿತ್ ಗಂಗೋಪಾಧ್ಯಾಯ, “ಇಂದು ನಾನು ಹೊಸ ಕ್ಷೇತ್ರವನ್ನು ಆಯ್ದುಕೊಂಡಿದ್ದೇನೆ. ನಾನು ಬಿಜೆಪಿ ಪಕ್ಷಕ್ಕೆ ಸೇರುತ್ತಿರುವುದಕ್ಕೆ ಖುಷಿಯಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಲಿದ್ದೇನೆ.. ಭ್ರಷ್ಟ ಟಿಎಂಸಿ ಆಡಳಿತವನ್ನು ರಾಜ್ಯದಿಂದ ಕಿತ್ತೊಗೆಯುವುದು ನಮ್ಮ ಉದ್ದೇಶ. ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲವಾದರೂ, ತಮ್ಲುಕ್ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

 

ಅಭಿಜಿತ್ ಗಂಗೋಪಾಧ್ಯಾಯ ಕಳೆದ ಭಾನುವಾರ ಹೈಕೋರ್ಟಿನ ಜಡ್ಜ್ ಹುದ್ದೆಗೆ ತೊರೆಯುತ್ತಿರುವುದಾಗಿ ಹೇಳಿದ್ದರು. ಆ ಬಳಿಕ ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ ಗಂಟೆಗಳ ನಂತರ, ಅದರ ಪ್ರತಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಕೊಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಅವರಿಗೆ ಕಳುಹಿಸಿದ್ದರು. ಸಂವಿಧಾನದ 217 (1) (ಎ) ವಿಧಿಯ ಅಡಿಯಲ್ಲಿ ತಕ್ಷಣವೇ ರಾಜೀನಾಮೆ ಸ್ವೀಕೃತವಾಗಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದೇ ಮೊದಲ ಬಾರಿಗೆ ಭಾರತಕ್ಕೆ ತಾಲಿಬಾನ್ ಸಚಿವರ ಭೇಟಿ; ಐತಿಹಾಸಿಕ ಹೆಜ್ಜೆ

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಖಾನ್ ಮುತ್ತಖಿ...

ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ...

Download Eedina App Android / iOS

X