ಕೊಲ್ಕತ್ತಾ ಹೈಕೋರ್ಟ್ನ ನ್ಯಾಯಮೂರ್ತಿ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದ ಅಭಿಜಿತ್ ಗಂಗೋಪಾಧ್ಯಾಯ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಗೆ ಸೇರ್ಪಡೆಗೊಂಡಿದ್ದಾರೆ.
ಕೊಲ್ಕತ್ತಾದ ಸಾಲ್ಟ್ ಲೇಕ್ನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಔಪಚಾರಿಕವಾಗಿ ಸೇರ್ಪಡೆಗೊಂಡರು.
ಈ ವೇಳೆ ಪಕ್ಷದ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್, ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಸೇರಿದಂತೆ ಹಲವರಿದ್ದರು.
#NarendraModi …. Zindabad#JPNadda …Zindabad
Fomer Cal High Court Judge Justice #AbhijitGanguly after formally joining #BJP, in less than 48 hours after resigning from the chair of the judge.
“I will work as a dedicated and committed BJP worker”, he said pic.twitter.com/S3P938FaZG
— Tamal Saha (@Tamal0401) March 7, 2024
ಪಕ್ಷ ಸೇರ್ಪಡೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಭಿಜಿತ್ ಗಂಗೋಪಾಧ್ಯಾಯ, “ಇಂದು ನಾನು ಹೊಸ ಕ್ಷೇತ್ರವನ್ನು ಆಯ್ದುಕೊಂಡಿದ್ದೇನೆ. ನಾನು ಬಿಜೆಪಿ ಪಕ್ಷಕ್ಕೆ ಸೇರುತ್ತಿರುವುದಕ್ಕೆ ಖುಷಿಯಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಲಿದ್ದೇನೆ.. ಭ್ರಷ್ಟ ಟಿಎಂಸಿ ಆಡಳಿತವನ್ನು ರಾಜ್ಯದಿಂದ ಕಿತ್ತೊಗೆಯುವುದು ನಮ್ಮ ಉದ್ದೇಶ. ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲವಾದರೂ, ತಮ್ಲುಕ್ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.
ಅಭಿಜಿತ್ ಗಂಗೋಪಾಧ್ಯಾಯ ಕಳೆದ ಭಾನುವಾರ ಹೈಕೋರ್ಟಿನ ಜಡ್ಜ್ ಹುದ್ದೆಗೆ ತೊರೆಯುತ್ತಿರುವುದಾಗಿ ಹೇಳಿದ್ದರು. ಆ ಬಳಿಕ ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ ಗಂಟೆಗಳ ನಂತರ, ಅದರ ಪ್ರತಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಕೊಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಅವರಿಗೆ ಕಳುಹಿಸಿದ್ದರು. ಸಂವಿಧಾನದ 217 (1) (ಎ) ವಿಧಿಯ ಅಡಿಯಲ್ಲಿ ತಕ್ಷಣವೇ ರಾಜೀನಾಮೆ ಸ್ವೀಕೃತವಾಗಿತ್ತು.
