ಪಿಎಸ್‌ಐ ನೇಮಕಾತಿ ಹಗರಣ | ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಜಾಮೀನು ಅರ್ಜಿ ತಿರಸ್ಕಾರ

Date:

  • ಸತತ 5ನೇ ಬಾರಿ ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ
  • ಪಿಎಸ್ಐ ನೇಮಕಾತಿ ಹಗರಣದ 35ನೇ ಆರೋಪಿಯಾಗಿದ್ದ ಪೌಲ್‌

ಪಿಎಸ್‌ಐ ನೇಮಕಾತಿ (ಪೊಲೀಸ್ ಸಬ್ ಇನ್‌ಸ್ಪೆಕ್ಟರ್) ಹಗರಣದಲ್ಲಿ ಪ್ರಮುಖ ಆರೋಪಿ, ಬಂಧಿತ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಪಿಎಸ್ಐ ನೇಮಕಾತಿ ಹಗರಣದ 35ನೇ ಆರೋಪಿಯಾಗಿದ್ದ ಅಮೃತ್‌ ಪೌಲ್‌ ಜಾಮೀನು ನೀಡುವಂತೆ ಸತತ ಐದು ಬಾರಿ ಅರ್ಜಿ ಸಲ್ಲಿಸಿದ್ದರು. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ಲಕ್ಷ್ಮಿನಾರಾಯಣ ಭಟ್‌ ಅರ್ಜಿ ವಿಚಾರಣೆ ನಡೆಸಿದ್ದು, ಅರ್ಜಿಯನ್ನು ತಿಸ್ಕರಿಸಿದ್ದಾರೆ.

ಬಂಧನವಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಈ ನ್ಯಾಯಾಲಯವು ಅಮೃತ್‌ ಪೌಲ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. 2ನೇ ಬಾರಿ ಬೆಂಗಳೂರಿನ 51ನೇ ಹೆಚ್ಚುವರಿ ನಗರ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಯಶವಂತ ಅವರು ಜಾಮೀನು ನೀಡಲು ನಿರಾಕರಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಕಿರಣ್‌ ರಿಜಿಜು ಹೇಳಿಕೆ ವಿರುದ್ಧ ಸುಪ್ರೀಂಕೋರ್ಟ್‌, ಹೈಕೋರ್ಟ್ ವಕೀಲರಿಂದ ಖಂಡನೆ

ಈ ಪ್ರಕರಣವು ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡ ನಂತರ, “ನನ್ನ ಮೇಲೆ ದಾಖಲಾಗಿರುವ ಆರೋಪ ಪಟ್ಟಿಯು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವುದರಿಂದ ನನಗೆ ಡಿಫಾಲ್ಟ್‌ ಜಾಮೀನು ಮಂಜೂರು ಮಾಡಬೇಕು” ಎಂದು 2022ರ ನ. 23, ಹಾಗೂ 2023ರ ಜ.4ರಂದು ಅರ್ಜಿ ಸಲ್ಲಿಸಿದ್ದರು. ಆಗಲೂ ಕೂಡ ಜಾಮೀನು ಅರ್ಜಿ ರದ್ದುಗೊಂಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಕಲಬುರಗಿ | ಸಕಾಲ ಅರ್ಜಿ ವಿಲೇವಾರಿ : ಕಲಬುರಗಿಗೆ ರಾಜ್ಯದಲ್ಲೇ ನಂಬರ್‌ 1 ಸ್ಥಾನ

ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್ ತಿಂಗಳ ಅರ್ಜಿ...

3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲ: ಸಿ ಟಿ ರವಿ ಆರೋಪ

ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನದಲ್ಲಿ ...