ಮಧ್ಯಪ್ರದೇಶ | ಹಿರಿಯ ಕಾಂಗ್ರೆಸ್‌ ಮುಖಂಡ ಕಮಲ್‌ನಾಥ್ ಹಾಗೂ ಪುತ್ರ ಬಿಜೆಪಿ ಸೇರುವ ಸಾಧ್ಯತೆ

Date:

Advertisements

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇಂಡಿಯಾ ಮೈತ್ರಿ ಜೊತೆಗೆ ಕಾಂಗ್ರೆಸ್‌ ಪಕ್ಷಕ್ಕೆ ಒಂದೊಂದು ರಾಜ್ಯಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಂಕಷ್ಟ ತಂದೊಡ್ಡುತ್ತಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕರು ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಮಧ್ಯಪ್ರದೇಶದಲ್ಲೂ ಕೂಡ ಹೊಸ ಬೆಳವಣಿಗೆ ನಡೆಯುತ್ತಿದ್ದು, ಹಿರಿಯ ಕಾಂಗ್ರೆಸ್‌ ಮುಖಂಡ ಕಮಲ್‌ನಾಥ್ ಹಾಗೂ ಪುತ್ರ ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಿಷ್ಠಾವಂತ ನಾಯಕ ಕಮಲ್‌ನಾಥ್ ಪುತ್ರ ಸಂಸದ ನಕುಲ್ ಕಮಲ್ ನಾಥ್ ಬಿಜೆಪಿ ಸೇರ್ಪಡೆ ಸಾಧ್ಯತೆ ಇದೆ. ಬಿಜೆಪಿಯ ಮುಖಂಡರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಚಿಂದ್ವಾರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದನಾಗಿರುವ ನಕುಲ್ ಕಮಲ್ ನಾಥ್ ಇದೀಗ ಬಿಜೆಪಿ ಸೇರಲು ಆಸಕ್ತಿ ತೋರಿರುವುದಾಗಿ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ನಕುಲ್ ಕಮಲ್ ನಾಥ್ ಸಾಮಾಜಿಕ ಮಾಧ್ಯಮಗಳ ಖಾತೆಯಿಂದ ಕಾಂಗ್ರೆಸ್ ಪಕ್ಷದ ಚಿಹ್ನೆ, ಹೆಸರು ಮಾಯವಾಗಿದೆ. ಚಿಂದ್ವಾರ ಸಂಸದ ಅನ್ನುವ ಮಾಹಿತಿ ಮಾತ್ರ ಹಾಕಿದ್ದಾರೆ.

Advertisements

ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆ ಮಧ್ಯಪ್ರದೇಶ ಪ್ರವೇಶ ಪಡೆಯುತ್ತಿದ್ದಂತೆ ನಕುಲ್ ಕಮಲ್ ನಾಥ್ ಬಿಜೆಪಿ ಸೇರಿಕೊಳ್ಳಲಿದ್ದಾರೆ. ಆ ಮೂಲಕ ಕಾಂಗ್ರೆಸ್‌ಗೆ ಶಾಕ್ ನೀಡಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಮಲ್‌ನಾಥ್ ಸಂಪರ್ಕಿಸದೆ ಗ್ವಾಲಿಯರ್ ಚಂಪಾಲ್ ನಾಯಕ ಅಶೋಕ್ ಸಿಂಗ್‌ಗೆ ಟಿಕೆಟ್ ನೀಡಿದ್ದಾರೆ. ಇದರಿಂದ ಕಮಲನಾಥ್ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಕಮಲ್ ನಾಥ್ ಕೂಡ ಬಿಜೆಪಿ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ಸೇರುವ ಊಹಾಪೋಹಗಳ ನಡುವೆ ಕಮಲ್‌ನಾಥ್ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನೀವು(ಮಾಧ್ಯಮದವರು) ಯಾಕೆ ಇಷ್ಟೊಂದು ಭಾವೋದ್ವೇಗಕ್ಕೆ ಒಳಗಾಗುತ್ತೀರಾ? ಒಂದು ವೇಳೆ ಅಂಥದ್ದೇನಾದರೂ ಇದ್ದರೆ ಮೊದಲು ನಾನೇ ನಿಮಗೆ ಹೇಳುತ್ತೇನ” ಎಂದು ಹೇಳಿದ್ದಾರೆ.

ಈ ನಡುವೆ ಮಧ್ಯಪ್ರದೇಶದ ಬಿಜೆಪಿ ಮುಖಂಡ ನರೇಂದ್ರ ಸಲುಜಾ ಟ್ವಿಟರ್‌ನಲ್ಲಿ ಕಮಲ್‌ನಾಥ್ ಹಾಗೂ ನಕುಲ್ ಕಮಲ್‌ನಾಥ್ ಅವರ ಫೋಟೋ ಹಂಚಿಕೊಂಡು, ಜೈ ಶ್ರೀರಾಮ್ ಎಂದು ಬರೆದುಕೊಂಡಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಧ್ಯಪ್ರದೇಶದಲ್ಲಿ ಬಿಜೆಪಿ 28 ಸ್ಥಾನಗಳನ್ನು ಗೆದ್ದಿತ್ತು. ಛಿಂದವಾಡ ಕ್ಷೇತ್ರದಿಂದ ಪ್ರಭಾವ ಬೀರಿದ್ದ ನಕುಲ್ ಅವರು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ಏಕೈಕ ಸಂಸದರಾಗಿದ್ದಾರೆ.

ಕಮಲ ನಾಥ್ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಬಗ್ಗೆ ಕೇಳಲಾದ ಪ್ರಶ್ನೆಗೆ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು “ನಾನು ನಿನ್ನೆ ರಾತ್ರಿ 10.30 ಕ್ಕೆ ಕಮಲ್ ನಾಥ್ ಅವರೊಂದಿಗೆ ಮಾತನಾಡಿದ್ದೇನೆ, ಅವರು ಭಿಂದ್ವಾರಾದಲ್ಲಿದ್ದಾರೆ. ಗಾಂಧಿ ನೆಹರೂ ಕುಟುಂಬಕ್ಕೆ ನಿಷ್ಠೆ ಹೊಂದಿರುವ ಅವರು ಪಕ್ಷ ತೊರೆಯುವುದಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X