ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯ ಚಾಣಕ್ಯ’ ಆಗಿದ್ದ ಮುಕುಲ್ ರಾಯ್ ನಿಧನ

Date:

ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ ನಾಯಕ ಎನಿಸಿಕೊಂಡಿದ್ದ, ಈ ಹಿಂದೆ ಪಶ್ಚಿಮ ಬಂಗಾಳದ ‘ರಾಜಕೀಯ ಚಾಣಕ್ಯ’ ಎಂದೇ ಖ್ಯಾತಿ ಪಡೆದಿದ್ದ ಮುಕುಲ್ ರಾಯ್ ನಿಧನರಾಗಿದ್ದಾರೆ.

- Advertisement -

71 ವರ್ಷದ ಮುಕುಲ್ ರಾಯ್ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಗಿನ ಜಾವ 1.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಇದನ್ನು ಓದಿದ್ದೀರಾ? ಕೋಟಿ ಕೋಟಿ ಲೂಟಿ ಮಾಡಿದ ಸ್ಕ್ಯಾಮರ್‌ಗಳನ್ನು ಮೋದಿ ಸರ್ಕಾರ ಮಟ್ಟ ಹಾಕಿದ್ದು ಹೀಗೆ!

“ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಸುಮಾರು 1.30ರ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತ ಉಂಟಾಗಿದೆ. ವೈದ್ಯರು ಎಷ್ಟು ಪ್ರಯತ್ನ ಪಟ್ಟರೂ ಅವರನ್ನು ಬದುಕುಳಿಸಲು ಸಾಧ್ಯವಾಗಲಿಲ್ಲ” ಎಂದು ಮುಕುಲ್ ಮಗ ಸುಭ್ರಂಗ್ಶು ರಾಯ್ ಹೇಳಿದ್ದಾರೆ.

ಮುಕುಲ್ ರಾಯ್ ಮೂತ್ರಪಿಂಡದ ಸಮಸ್ಯೆಗಳು ಸೇರಿದಂತೆ ಬಹು ದೈಹಿಕ ಸಮಸ್ಯೆಗಳಿಂದಾಗಿ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಕಾಲಕಾಲಕ್ಕೆ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ರಾಯ್ ತೃಣಮೂಲ ಕಾಂಗ್ರೆಸ್ ಪಕ್ಷದ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಮಮತಾ ಬ್ಯಾನರ್ಜಿ ಅವರ ಆಪ್ತರು ಆಗಿದ್ದ ರಾಯ್, ಅದಕ್ಕೂ ಮೊದಲು ಕಾಂಗ್ರೆಸ್ ಸದಸ್ಯರಾಗಿದ್ದರು.

ಇದನ್ನು ಓದಿದ್ದೀರಾ? ಬಿಜೆಪಿ ವಾಷಿಂಗ್ ಮಷೀನ್‌ನ ಈ ಸ್ವಾರಸ್ಯಕರ ಕಥೆಗಳನ್ನು ಕೇಳಿದ್ದೀರಾ?

2017-2021ರ ಅವಧಿಯಲ್ಲಿ ಬಿಜೆಪಿಗೆ ಸೇರಿದ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಬಂಗಾಳದಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2021ರ ಚುನಾವಣೆಯ ನಂತರ ಬಿಜೆಪಿ ತೊರೆದು ಮತ್ತೆ ತೃಣಮೂಲ ಕಾಂಗ್ರೆಸ್‌ಗೆ ಮರಳಿದ್ದರು.

ಎರಡನೇ ಯುಪಿಎ ಸರ್ಕಾರದ ಅವಧಿಯಲ್ಲಿ ಹಡಗು ಸಚಿವಾಲಯ ಮತ್ತು ನಂತರ ರೈಲ್ವೆ ಸಚಿವಾಲಯದಲ್ಲಿ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮುಕುಲ್ 2021ರಲ್ಲಿ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಬಳಿಕ ಮತ್ತೆ ಟಿಎಂಸಿಗೆ ಸೇರಿದರು. ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಸದ್ಯ ದೀರ್ಘಕಾಲದ ಅನಾರೋಗ್ಯದಿಂದ ರಾಜಕೀಯದಿಂದ ದೂರವಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...