ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ ಶ್ರೀನಿವಾಸ್ ಕೊಲೆ

Date:

  • ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಕೊಲೆ
  • ರಾಜಕೀಯ ದ್ವೇಷದಿಂದ ಶ್ರೀನಿವಾಸ್ ಕೊಲೆ; ಪೊಲೀಸರಿಂದ ಪರಿಶೀಲನೆ

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿರುವ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೌನ್ಸಿಲರ್ ಸೀನಪ್ಪ ಅಲಿಯಾಸ್ ಎಂ ಶ್ರೀನಿವಾಸ್ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

- Advertisement -

ಆರು ಜನ ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಕೊಲೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಹೊಗಳಗೆರೆ ಬಳಿ ಬಾರ್ ಕಟ್ಟಡ ಕಾಮಗಾರಿಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

ಪುರಸಭೆ ಮಾಜಿ ಅಧ್ಯಕ್ಷರಾಗಿ, ಎಪಿಎಂಸಿ ಮಾಜಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ಶ್ರೀನಿವಾಸ್ ಅವರು ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು ಎನ್ನಲಾಗಿದೆ. ರಾಜಕೀಯ ದ್ವೇಷದಿಂದ ಶ್ರೀನಿವಾಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎನ್ನುವ ಅನುಮಾನದ ಮಾತುಗಳು ಕೇಳಿಬರುತ್ತಿವೆ.

ಕೋಲಾರ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್‌ ಬಳಿ ಅನಿಲ್‌ ಕುಮಾರ್ ಅನ್ನುವ ಗ್ರಾಮ ಪಂಚಾಯ್ತಿ ಸದಸ್ಯನನ್ನ ಕೊಲೆ ಮಾಡಿ ಹಂತಕರು ಎಸ್ಕೇಪ್‌ ಆಗಿದ್ದರು. ಈ ಘಟನೆ ಮಾಸುವ ಮುನ್ನವೇ ಕಾಂಗ್ರೆಸ್ ಮುಖಂಡನ‌ ಮೇಲೆ ಹಲ್ಲೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...