ಅಬಕಾರಿ ಪ್ರಕರಣ | ಇಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ; ಏ.15ರಂದು ವಿಚಾರಣೆ

Date:

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಇಡಿ ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.15) ವಿಚಾರಣೆ ನಡೆಸಲಿದೆ.

- Advertisement -

ದೆಹಲಿ ಅಬಕಾರಿ ನೀತಿ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದೆ. ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 9ರಂದು (ಮಂಗಳವಾರ) ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸ್ವರಣಾ ಕಾಂತ ಶರ್ಮಾ ಅವರು ಇಡಿ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು. ಅಲ್ಲದೇ, ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಹೈಕೋರ್ಟ್ ಆದೇಶದ ವಿರುದ್ಧ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಬುಧವಾರ ಮೇಲ್ಮನವಿ ಸಲ್ಲಿಸಿದ್ದಾರೆ. ಅಲ್ಲದೆ, ತಮ್ಮ ಮೇಲ್ಮನವಿಯನ್ನು ಆದಷ್ಟು ಬೇಗ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಅರ್ಜಿಯನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಏಪ್ರಿಲ್ 15ರಂದು ವಿಚಾರಣೆ ನಡೆಸಲಿದೆ.

ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದ್ದು, ವಿಚಾರಣೆ ಬಳಿಕ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ. ಏಪ್ರಿಲ್ 15 ರವರೆಗೆ ಕೇಜ್ರಿವಾಲ್‌ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪರಿಚಿತ ವಾಹನ ಡಿಕ್ಕಿ: ಫ್ಲೈ ಓವರ್‌ನಿಂದ ಬಿದ್ದು ಯುವಕ ಸಾವು

“ಸಾರ್ವತ್ರಿಕ ಲೋಕಸಭಾ ಚುನಾವಣೆ ಮುನ್ನ ಇಡಿ ನನ್ನನ್ನು ಬಂಧಿಸಿದೆ. ಇದು ಪ್ರಜಾಪ್ರಭುತ್ವದ ತತ್ವದ ಮೇಲಿನ ದಾಳಿ. ನನ್ನ ವಿರುದ್ಧ ಹಾಕಲಾಗಿರುವ ಪ್ರಕರಣ ಕಾನೂನುಬಾಹಿರವಾಗಿದೆ. ಹಾಗಾಗಿ, ನನ್ನನ್ನು ಬಿಡುಗಡೆ ಮಾಡಬೇಕು” ಎಂದು ಸುಪ್ರೀಂಕೋರ್ಟ್‌ಗೆ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾರ್ಚ್ 21ರ ರಾತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಮಾರ್ಚ್ 22 ರಂದು ವಿಚಾರಣಾ ನ್ಯಾಯಾಲಯವು ಅವರನ್ನು ಆರು ದಿನ ಇಡಿ ಕಸ್ಟಡಿಗೆ ನೀಡಿತು. ಅದನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಯಿತು. ಏಪ್ರಿಲ್ 1 ರಂದು ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...