ಅಬಕಾರಿ ನೀತಿ ಪ್ರಕರಣ | ಕೇಜ್ರಿವಾಲ್ ಜಾಮೀನು ಅರ್ಜಿಗೆ ಸಿಬಿಐ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

Date:

ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಶುಕ್ರವಾರ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.

- Advertisement -

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಮುಂದಿನ ವಿಚಾರಣೆಯನ್ನು ಜುಲೈ 17ಕ್ಕೆ ನಿಗದಿಪಡಿಸಿದ್ದಾರೆ. ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ವಿಕ್ರಮ್ ಚೌಧರಿ ಮತ್ತು ಎನ್ ಹರಿಹರನ್ ಅವರು ಕೇಜ್ರಿವಾಲ್ ಪರವಾಗಿ ವಾದಿಸಿದ್ದಾರೆ. ವಿಶೇಷ ವಕೀಲ ಡಿಪಿ ಸಿಂಗ್ ಸಿಬಿಐ ಪರವಾಗಿ ವಾದ ಮಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ವಿಚಾರಣೆಯ ಸಂದರ್ಭದಲ್ಲಿ ವಾದಿಸಿದ ಸಿಂಘ್ವಿ, “ಕೇಜ್ರಿವಾಲ್ ವಿರುದ್ಧದ ಪ್ರಕರಣದಲ್ಲಿ ಯಾವುದೇ ಗಂಭೀರ ಆರೋಪಗಳಿಲ್ಲ. ಅವರ ವಿರುದ್ಧದ ಆರೋಪವು ಘೋಷಿತ ಅಪರಾಧ ಅಥವಾ ಭಯೋತ್ಪಾದನೆಯಂತಹ ಗಂಭೀರವಾದುದ್ದಲ್ಲ” ಎಂದು ಒತ್ತಿ ಹೇಳಿದರು.

“ಕೇಜ್ರಿವಾಲ್ ಅವರ ಬಂಧನದ ಸಮಯದಲ್ಲಿ CrPC ಸೆಕ್ಷನ್ 41Aಯ ಯಾವುದೇ ಉಲ್ಲಂಘನೆಯನ್ನು ನ್ಯಾಯಾಲಯವು ಗಮನಿಸಿದೆ. ಹೀಗಾಗಿ, ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಕೋರುವುದು ಅನಗತ್ಯವಾಗಿರುತ್ತದೆ” ಎಂದು ಚೌಧರಿ ಹೇಳಿದರು.

ಜೂನ್ 26ರಂದು ವಿಶೇಷ ನ್ಯಾಯಾಧೀಶರು ಅನುಮತಿ ನೀಡಿದ ನಂತರ ಸಿಬಿಐ ಕೇಜ್ರಿವಾಲ್ ಅವರನ್ನು ರೂಸ್ ಅವೆನ್ಯೂ ಕೋರ್ಟ್ ಆವರಣದಲ್ಲಿ ಬಂಧಿಸಿತು. ಇದೀಗ, ಜಾಮೀನಿಗಾಗಿ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...