ಸಂವಿಧಾನವನ್ನು ಗೌರವಿಸುವುದಾದರೆ ಜಗದೀಶ್‌ ಗುಡಗಂಟಿಯನ್ನು ಪಕ್ಷದಿಂದ ಉಚ್ಚಾಟಿಸಿ: ಬಿಜೆಪಿಗೆ ಎಎಪಿ ಸವಾಲು

Date:

Advertisements

ಮೀಸಲಾತಿಯನ್ನು ತೆಗೆದು ಒಗೆಯಿರಿ ಎಂದಿರುವ ಜಮಖಂಡಿ ಬಿಜೆಪಿ ಶಾಸಕ ಜಗದೀಶ್‌ ಗುಡಗುಂಟಿ ಅವರ ಹೇಳಿಕೆಗೆ ಆಮ್‌ ಆದ್ಮಿ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿರುವ ಜಗದೀಶ್‌ ಗುಡಗಂಟಿ ಅವರು ಮೀಸಲಾತಿ ತೆಗೆಯಿರಿ, ಎಲ್ಲರೂ ಟಾಪ್ ಕ್ಲಾಸ್​ನಲ್ಲಿ ಬಂದುಬಿಡುತ್ತಾರೆ ಎಂದು ಹೇಳಿರುವ ವಿಡಿಯೋ ವೈರಲ್‌ ಆಗಿದೆ. ಈ ಸಂಬಂಧ ಕಿಡಿಕಾರಿದ ಎಎಪಿ ಮುಖಂಡ ಜಗದೀಶ್‌ ವಿ ಸದಂ ಅವರು ಬಿಜೆಪಿಗರು ಸಂವಿಧಾನ ವಿರೋಧಿಗಳು ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು.

ಸೋಮವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ಸದಂ ಅವರು, “ಬಡವರು ಮತ್ತು ಹಿಂದುಳಿದವರು ಎಲ್ಲರಂತೆ ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವುದನ್ನು ಬಿಜೆಪಿಗರು ಸಹಿಸುವುದಿಲ್ಲ. ಎಸ್‌ಸಿ/ಎಸ್‌ಟಿ ಸೇರಿದಂತೆ ಇತರೆ ಹಿಂದುಳಿದ ವರ್ಗದವರು ಹಿಂದಿನಂತೆ ಕೂಲಿಗಳಾಗಿ, ಜೀತದಾಳುಗಳಾಗಿ ಬದುಕಬೇಕೆಂದು ಬಯಸುತ್ತಾರೆ. ಇವರು ಪ್ರಜಾಪ್ರಭುತ್ವ ವಿರೋಧಿಗಳು. ಬಿಜೆಪಿ ವಾಸ್ತವದಲ್ಲಿ ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವಕ್ಕೆ ಗೌರವ ಕೊಡುವುದಿದ್ದರೆ ತಕ್ಷಣ ಜಗದೀಶ್‌ ಗುಡಗಂಟಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೆಣ್ಣು ಭ್ರೂಣ ಲಿಂಗ ಪತ್ತೆ; ನಾಲ್ವರ ಬಂಧನ

“ಮೀಸಲಾತಿ ಹಕ್ಕು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಕೊಟ್ಟಿರುವ ಅತ್ಯಮೂಲ್ಯ ಕೊಡುಗೆಯಾಗಿದೆ. ಮೀಸಲಾತಿಯು ನಮ್ಮ ದೇಶದ ದೃಢೀಕರಣದ ಒಂದು ವ್ಯವಸ್ಥೆಯಾಗಿದ್ದು ಅದು ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಐತಿಹಾಸಿಕವಾಗಿ ಅನುಕೂಲಕರ ಗುಂಪುಗಳಿಗೆ ಪ್ರಾತಿನಿಧ್ಯವನ್ನು ಒದಗಿಸುತ್ತದೆ. ಭಾರತೀಯ ಸಂವಿಧಾನದಲ್ಲಿನ ನಿಬಂಧನೆಗಳ ಆಧಾರದ ಮೇಲೆ, ಇದು ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಮತ್ತು ಪ್ರಾಂತ್ಯಗಳಿಗೆ ಮೀಸಲು ಕೋಟಾಗಳು ಅಥವಾ ಸೀಟುಗಳನ್ನು ಹೊಂದಿಸಲು ಅನುಮತಿಸುತ್ತದೆ. ಮೀಸಲಾತಿಯು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ನಾಗರಿಕರಿಗೆ ಪರೀಕ್ಷೆಗಳು, ಉದ್ಯೋಗಾವಕಾಶಗಳು ಇತ್ಯಾದಿಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X