ಬೊಮ್ಮಾಯಿ ಮುಗಿಸಲು ಹೊಂದಾಣಿಕೆ ರಾಜಕಾರಣ ಅಸ್ತ್ರ ಪ್ರಯೋಗ: ಎಂ ಬಿ ಪಾಟೀಲ್

Date:

  • ಬಿ ಎಲ್ ಸಂತೋಷ್ ವಿರುದ್ದ ಗಂಭೀರ ಆರೋಪ ಮಾಡಿದ ಎಂ ಬಿ ಪಾಟೀಲ್
  • ಪ್ರತಾಪ್ ಸಿಂಹ, ಬಸನಗೌಡ ಪಾಟೀಲ್ ಸಂತೋಷ್ ಅವರ ಆಜ್ಞಾಪಾಲಕರು

ಮಾಜಿ ಮುಖ್ಯಮಂತ್ರಿ, ಲಿಂಗಾಯತ ನಾಯಕ ಬಸವರಾಜ ಬೊಮ್ಮಾಯಿ ಅವರನ್ನು ಮುಗಿಸಲು ಅವರ ವಿರುದ್ಧ ಹೊಂದಾಣಿಕೆ ರಾಜಕಾರಣ ಅಸ್ತ್ರ ಪ್ರಯೋಗ ಮಾಡಲಾಗಿದೆ. ಇದು ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ಕಾರ್ಯಾಚರಣೆಯ ಮುಂದುವರಿದ ಭಾಗ ಎಂದು ಸಚಿವ ಎಂ ಬಿ ಪಾಟೀಲ್‌ ಅಭಿಪ್ರಾಯಪಟ್ಟಿದ್ದಾರೆ.

- Advertisement -

ಇದೇ ವಿಚಾರವನ್ನಿಟ್ಟುಕೊಂಡು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ದ ಸಚಿವ ಎಂ ಬಿ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಮಾಜಿ ಮುಖ್ಯಮಂತ್ರಿ, ಲಿಂಗಾಯತ ನಾಯಕ ಬಸವರಾಜ ಬೊಮ್ಮಾಯಿ ಅವರನ್ನು ಮುಗಿಸುವ ಸಲುವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಪ್ರತಾಪ್ ಸಿಂಹ ಅವರ ಬಾಯಲ್ಲಿ ಹೊಂದಾಣಿಕೆ ರಾಜಕಾರಣದ ಬಾಣ ಬಿಡಿಸಿದ್ದೀರಾ ಎಂದು ಸಂತೋಷ್ ವಿರುದ್ದ ಎಂ ಬಿ ಪಾಟೀಲ್ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಎಂ ಬಿ ಪಾಟೀಲ್, ಬಿ ಎಲ್ ಸಂತೋಷ್ ನಡೆ ಖಂಡಿಸಿ, ಲೇವಡಿ ಮಾಡಿದ್ದಾರೆ. ಅವರ ಟ್ವೀಟ್ ಸಾರಾಂಶ ಹೀಗಿದೆ.

ಬಿ ಎಲ್ ಸಂತೋಷ್‌ ಅವರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಮರು ಮತಾಂತರಕ್ಕೆ ಸಾಮ, ದಾನ, ಭೇದ, ದಂಡ ಬಳಸಬೇಕಿದೆ: ಸಿ ಟಿ ರವಿ

ಇದೀಗ ಉಳಿದಿರುವ, ಏಕೈಕ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರನ್ನು ಮುಗಿಸಲು ಅವರ ವಿರುದ್ಧ ಬಸವನಗೌಡ ಪಾಟೀಲ್ ಅವರನ್ನು ಎತ್ತಿ ಕಟ್ಟಿ, ಜೊತೆಗೆ ನಿಮ್ಮ ಪಟ್ಟ ಶಿಷ್ಯ ಪ್ರತಾಪ್ ಸಿಂಹ ಅವರ ಹೆಗಲ ಮೇಲೆ ಬಂದೂಕು ಇಟ್ಟು ಗುರಿ ನೆಟ್ಟಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ.

ಕರ್ನಾಟಕದ ಇತ್ತೀಚಿನ ರಾಜಕಾರಣವನ್ನು ಒಂದೇ ವಾಕ್ಯದಲ್ಲಿ ಹೇಳುವುದಾದರೆ, ವಿಶ್ವೇಶ್ವರ ಭಟ್ ಹೇಳಿರುವ “ಅತಿಯಾದ ‘ಸಂತೋಷ’ವೇ ದುಃಖಕ್ಕೆ ಕಾರಣ” ಲಿಂಗಾಯತರ ನಂತರ ನಿಮ್ಮ ಗುರಿ ಒಕ್ಕಲಿಗರಾ, ದಲಿತರಾ? ಎಂದು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...