- ದಶಪಥದ ಟೋಲ್ ಏರಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ
- ದರ ಏರಿಕೆ ಅನ್ಯಾಯದ ಪರಮಾವಧಿ ಎಂದ ಜೆಡಿಎಸ್ ನಾಯಕ
ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಏಕಾಏಕಿ ದುಪ್ಪಟ್ಟು ಏರಿಕೆ ಮಾಡಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಇದು ಅನ್ಯಾಯದ ಪರಮಾವಧಿ ಎಂದಿದ್ದಾರೆ. ಅವರ ಟ್ವೀಟ್ ಸಾರಾಂಶ ಈ ಕೆಳಗಿನಂತಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ.
ಈ ಸುದ್ದಿ ಓದಿದ್ದೀರಾ?:ಮೈಸೂರು | ಎಕ್ಸ್‌ಪ್ರೆಸ್-ವೇ ಟೋಲ್ ದರ ಏರಿಕೆ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ
ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರಿಸಿವೆ. ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30ರಿಂದ 200 ರೂ.ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯೂ ಅಲ್ಲ ಸಮರ್ಥನಿಯವೂ ಅಲ್ಲ ಎಂದಿದ್ದಾರೆ.
ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು ‘ಹೆದ್ದಾರಿಯಲ್ಲಿ ಹಗಲು ದರೋಡೆ’ಯಷ್ಟೇ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಜೊತೆಗೆ ಹೆದ್ದಾರಿ ಪ್ರಾಧಿಕಾರವು ಹೆಚ್ಚಳ ಮಾಡಿರುವ ಟೋಲ್ ದರವನ್ನು ಕೂಡಲೇ ಹಿಂಪಡೆಯಬೇಕು. ಹೆದ್ದಾರಿ ಪ್ರಾಧಿಕಾರದ ಮೇಲೆ ರಾಜ್ಯ ಸರಕಾರ ಒತ್ತಡ ಹಾಕಬೇಕು. ಬೆಲೆ ಬರೆ ಬವಣೆಯಿಂದ ಬಸವಳಿದಿರುವ ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು ಎಂದು ಆಗ್ರಹಿಸಿದ್ದಾರೆ.
No problem bus free, don’t mind.