ಸಂಸತ್‌ನಿಂದ ಉಚ್ಛಾಟನೆ | ನನ್ನ ಗೆಲುವು ಉತ್ತರ ನೀಡುತ್ತದೆ: ಮಹುವಾ ಮೊಯಿತ್ರಾ

Date:

ಪಶ್ಚಿಮ ಬಂಗಾಳದ ಕೃಷ್ಣಾನಗರ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ. ಆ ಗೆಲುವು ತಮ್ಮನ್ನು ಸಂಸತ್‌ನಿಂದ ಉದ್ಘಾಟನೆ ಮಾಡಿ, ಸಮನ್ಸ್‌ ಮೂಲಕ ತನ್ನ  ತೇಜೋವಧೆ ಮಾಡಿದವರ ಪಿತೂರಿಗೆ ಸೂಕ್ತ ಉತ್ತರ ನೀಡುತ್ತದೆ ಎಂದು ಮಹುವಾ ಮೊಯಿತ್ರಾ ಹೇಳಿದ್ದಾರೆ.

- Advertisement -

2023ರಲ್ಲಿ ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದ ಮೇಲೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಅಲ್ಲದೆ, ಜಾರಿ ನಿರ್ದೇಶನಾಲಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ಗಳನ್ನು ನೀಡಿದೆ. ಇದೀಗ, ಮತ್ತೆ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಮತ್ತೆ ಸ್ಪರ್ಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಬಿಜಪೆಇ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ, ಭಾರತವು ಫ್ಯಾಸಿಸ್ಟ್‌ಗಳಿಂದ ನಾಶವಾಗದಷ್ಟು ದೊಡ್ಡ ದೇಶವಾಗಿದೆ” ಎಂದು ಮೊಯಿತ್ರಾ ಹೇಳಿದ್ದಾರೆ.

“ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಲ್ಲಿ ಕೇಂದ್ರವು ಮೂರನೇ ಎರಡರಷ್ಟು ಬಹುಮತವನ್ನು ಹೊಂದಿದೆ. ಈ ಸಮಿತಿಯಿಂದ ಆಯುಕ್ತರನ್ನು ಆಯ್ಕೆ ಮಾಡುವುದರಿಂದ ಚುನಾವಣಾ ಆಯೋಗವು ತನ್ನ ‘ಸ್ವಾತಂತ್ರ್ಯ’ವನ್ನು ಕಳೆದುಕೊಂಡಿದೆ. ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಸರಿ ಪಾಳೆಯದ ರಾಜಕೀಯ ಏಜೆಂಟ್‌ಗಳಂತೆ ಕಾರ್ಯನಿರ್ವಹಿಸುತ್ತಿವೆ” ಎಂದು ಅವರು ಆರೋಪಿಸಿದ್ದಾರೆ.

“ನನ್ನ ಗೆಲುವಿನ ಬಗ್ಗೆ ಯಾವುದೇ ಸಂದೇಹವಿಲ್ಲ. ಗೆಲುವಿನ ಮತಗಳ ಅಂತರ ಎಷ್ಟು ಎಂಬುದು ಜೂನ್ 4 ರಂದು ನಿರ್ಧರವಾಗುತ್ತದೆ. ನಾನು ಕಳೆದ ಐದು ವರ್ಷಗಳಿಂದ ಸಂಸದೆಯಾಗಿ, ಅದಕ್ಕೂ ಮುನ್ನ ಶಾಸಕಿಯಾಗಿ ನನ್ನ ಜನರ ನಡುವೆ ಇದ್ದೇನೆ. ನನ್ನನ್ನು ಹೊರಹಾಕಲು ಮತ್ತು ನನ್ನ ಖ್ಯಾತಿಗೆ ಕಳಂಕ ತರುವ ಪಿತೂರಿ ಮಾಡಿದವರಿಗೆ ನನ್ನ ಗೆಲುವು ಸೂಕ್ತ ಉತ್ತರ ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

ಕೃಷ್ಣಾನಗರದಲ್ಲಿ ಮೊಯಿತ್ರಾ ವಿರುದ್ಧ ಬಿಜೆಪಿ ರಾಜಮನೆತನದ ಅಮೃತಾ ರಾಯ್ ಅವನ್ನು ಕಣಕ್ಕಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮೊಯಿತ್ರಾ, “ನನ್ನ ಹೋರಾಟವು ಬಿಜೆಪಿ ಚಿಹ್ನೆಯ ವಿರುದ್ಧ. ಅವರು ಯಾರನ್ನು ಕಣಕ್ಕಿಳಿಸಿದ್ದಾರೆ ಎಂಬುದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...