7ನೇ ವೇತನ ಆಯೋಗದ ಅವಧಿ ವಿಸ್ತರಣೆ; ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಸದ್ಯಕ್ಕಿಲ್ಲ

Date:

  • ನಿವೃತ್ತ ಮುಖ್ಯಕಾರ್ಯದರ್ಶಿ ಸುಧಾಕರ್‌ ರಾವ್ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಆಯೋಗ
  • 7ನೇ ವೇತನ ಆಯೋಗದ ಅವಧಿ 2023 ನವೆಂಬರ್‌ 18ಕ್ಕೆ ಅವಧಿ ಮುಗಿಯಬೇಕಿತ್ತು

ವೇತನ ಪರಿಷ್ಕರಣೆಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರು ಇದಕ್ಕಾಗಿ ಇನ್ನೂ ಕೆಲವು ದಿನಗಳ ಕಾಲ ಕಾಯಬೇಕಾಗಿದೆ. ಇದಕ್ಕೆ ಪ್ರಮುಖ ಕಾರಣ ವೇತನ ಪರಿಷ್ಕರಣೆಗೆ ನೇಮಿಸಿದ್ದ 7ನೇ ವೇತನ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಿಸಿದೆ.

- Advertisement -

ನೌಕರರ ವೇತನ ಶ್ರೇಣಿಗಳ ಪರಿಷ್ಕರಣೆಗಾಗಿ ಹಿಂದಿನ ಸರ್ಕಾರ ನಿವೃತ್ತ ಮುಖ್ಯಕಾರ್ಯದರ್ಶಿ ಸುಧಾಕರ್‌ ರಾವ್ ಅವರ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು ಆಯೋಗ ರಚಿಸಿತ್ತು. ಈ ಆಯೋಗ ತನ್ನ ಶಿಫಾರಸುಗಳ ವರದಿ ಸಲ್ಲಿಸಲು 6 ತಿಂಗಳ ಗಡುವು ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಂತರ ಇದರ ಅವಧಿಯನ್ನು ಕಳೆದ ಮೇ 15 ರಂದು ಮತ್ತೆ 6 ತಿಂಗಳುಗಳ ಕಾಲ ವಿಸ್ತರಿಸಿತ್ತು. ಹೀಗಾಗಿ 2023 ನವೆಂಬರ್‌ 18ಕ್ಕೆ ಅವಧಿ ಮುಗಿಯಬೇಕಿತ್ತು. ಆದರೆ ಇದೀಗ ಇದರ ಅವಧಿಯನ್ನು ಮತ್ತೆ ಮುಂದಿನ ವರ್ಷ ಮಾರ್ಚ್ 15 ರವರೆಗೆ ವಿಸ್ತರಿಸಿದೆ. ಇದರಿಂದಾಗಿ, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಹಿರಿಯ ರಾಜಕಾರಣಿ ಡಿ.ಬಿ ಚಂದ್ರೇಗೌಡ ಇನ್ನಿಲ್ಲ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಾಣಿಕೆ ಮಾಡುವ ಸವಾಲು ಸರ್ಕಾರದ ಮುಂದಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ತಕ್ಷಣಕ್ಕೆ ನೌಕರರ ವೇತನ ಪರಿಷ್ಕರಣೆ ಮಾಡಿದರೆ ಆರ್ಥಿಕ ಹೊರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆಯೋಗದ ವರದಿಯನ್ನು ತಡವಾಗಿ ಪಡೆದುಕೊಂಡರೆ ಒಳಿತು ಎಂಬ ಲೆಕ್ಕಾಚಾರದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ.

7ನೇ ವೇತನ ಆಯೋಗ

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...