ಖಾಸಗಿ ಆಸ್ಪತ್ರೆಗಳಿಂದ ಸುಲಿಗೆ | ಶುಲ್ಕ ಕಡಿವಾಣಕ್ಕೆ ರಾಜ್ಯ ಸರ್ಕಾರಗಳೇ ನೀತಿ ರೂಪಿಸಲಿ: ಸುಪ್ರೀಂ ಸಲಹೆ

Date:

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳ ಮೇಲೆ ವಿಧಿಸುವ ಮಿತಿಮೀರಿದ ಶುಲ್ಕ ಮತ್ತು ಶೋಷಣೆ ತಡೆಗೆ ನೀತಿ ರೂಪಿಸುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ತಿಳಿಸಿದೆ.

- Advertisement -

ಸಿದ್ಧಾರ್ಥ್ ದಾಲ್ಮಿಯಾ ಮತ್ತಿತರರು ಹಾಗೂ ಭಾರತ ಒಕ್ಕೂಟ ಇನ್ನಿತರರ ನಡುವಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡುವಾಗ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರಿದ್ದ ಪೀಠ ಇತ್ತೀಚೆಗೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ರೋಗಿಗಳು ತಮ್ಮಲ್ಲಿರುವ ಔಷಧಾಲಯಗಳಿಂದಲೇ ಹೆಚ್ಚಿನ ಬೆಲೆಗೆ ಔಷಧ ಮತ್ತು ವೈದ್ಯಕೀಯ ಸಾಮಗ್ರಿ ಖರೀದಿಸುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಒತ್ತಾಯಿಸುವುದನ್ನು ತಡೆಯುವುದಕ್ಕಾಗಿ ನಿರ್ದೇಶನ ನೀಡಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಕೆಯಾಗಿತ್ತು.

ಅರ್ಜಿದಾರರ ಕುಟುಂಬ ಸದಸ್ಯರು ಕ್ಯಾನ್ಸರ್‌ ಚಿಕಿತ್ಸೆಗೆ ಒಳಗಾಗಿದ್ದರು. ಈ ಸಂದರ್ಭದಲ್ಲಿ ಅತಿಯಾದ ಶುಲ್ಕ ಪಾವತಿಸಬೇಕಾದ್ದರಿಂದ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದು ಆರ್ಥಿಕ ಶೋಷನೆಗೆ ಸಮ ಮತ್ತು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಆರೋಗ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅವರು ವಾದಿಸಿದ್ದರು.

ಖಾಸಗಿ ಆಸ್ಪತ್ರೆಗಳಿಗೆ ಯಾವುದೇ ನಿಯಂತ್ರಣ ಇಲ್ಲದಿರುವುದರಿಂದ ಮನಸೋಇಚ್ಛೆಯಾಗಿ ಶುಲ್ಕ ವಿಧಿಸುತ್ತಿದ್ದು, ಅವುಗಳ ಬಲವಂತದ ಕ್ರಮ ತಡೆಯಲು ನ್ಯಾಯಾಂಗ ಮಧ್ಯಪ್ರವೇಶಿಸಬೇಕು ಕೋರಿದ್ದರು.

ಮಾರ್ಚ್ 4ರಂದು ವಿಚಾರರಣೆ ನಡೆಸಿದ ನ್ಯಾಯಾಲಯ, “ಖಾಸಗಿ ಆಸ್ಪತ್ರೆಗಳಿಗೆ ಕಡ್ಡಾಯ ನಿರ್ದೇಶನ ನೀಡುವ ಮೂಲಕ ಸುಪ್ರೀಂ ಕೋರ್ಟ್‌ ತಾನಾಗಿಯೇ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವುದು ಸೂಕ್ತವಲ್ಲ. ಹಾಗೆ ನಿರ್ದೇಶನ ನೀಡಿದರೆ, ಖಾಸಗಿ ವಲಯದಲ್ಲಿ ಆಸ್ಪತ್ರೆಗಳ ಬೆಳವಣಿಗೆಗೆ ಅಡ್ಡಿಯಾಗಬಹುದು ಎಂದ ನ್ಯಾಯಾಲಯ ಸಮಸ್ಯೆಯನ್ನು ರಾಜ್ಯ ನೀತಿಗಳ ಮೂಲಕ ನಿಭಾಯಿಸುವುದು ಸೂಕ್ತ” ಎಂದಿದೆ,

“ರೋಗಿಗಳು ಅಥವಾ ಅವರನ್ನು ಆರೈಕೆ ಮಾಡುತ್ತಿರುವವನ್ನು ಶೋಷಣೆಯಿಂದ ರಕ್ಷಿಸಲು ಅಂತೆಯೇ ಖಾಸಗಿ ಸಂಸ್ಥೆಗಳು ಆರೋಗ್ಯ ವಲಯಕ್ಕೆ ಪ್ರವೇಶಿಸುವುದನ್ನು ನಿರುತ್ಸಾಹಗೊಳಿಸುವಂತೆ ಮತ್ತು ಅಸಮಂಜಸ ನಿರ್ಬಂಧ ಹೇರದಂತೆ ನೋಡಿಕೊಳ್ಳುವುದಕ್ಕಾಗಿ ಸಮಗ್ರ ದೃಷ್ಟಿಕೂನ ಮತ್ತು ಅಗತ್ಯ ಮಾರ್ಗಸೂಚಿ ರೂಪಿಸಲು ನೀತಿ ನಿರೂಪಕರೇ ಸೂಕ್ತ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಎಲ್ಲರಿಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಜೀವಿಸುವ ಹಕ್ಕಿನ ಮೂಲಭೂತ ಅಂಶ. ಆದರೆ ದೇಶದ ಅಗಾಧ ಜನಸಂಖ್ಯೆ ಹಿನ್ನೆಲೆಯಲ್ಲಿ ಸರ್ಕಾರ ವೈದ್ಯಕೀಯ ಮೂಲಸೌಕರ್ಯ ಕಲ್ಪಿಸಲು ಹೆಣಗಿದ ಪರಿಣಾಮ ಖಾಸಗಿ ಆಸ್ಪತ್ರೆಗಳ ಸೇವೆ ಆರಂಭವಾಗಿದೆ. ಖಾಸಗಿ ಆರೋಗ್ಯ ಸಂಸ್ಥೆಗಳ ಬೆಳವಣಿಗೆಗೆ ಅಡ್ಡಿಯಾಗಬಹುದಾದ ನಿರ್ದೇಶನ ನೀಡದಂತೆ ನೀತಿ ರೂಪಿಸಬೇಕಾಗಿರುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ” ಎಂದು ಸಲಹೆ ನೀಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...