ಕಟಾವು ಯಂತ್ರ ಬಾಡಿಗೆ ಹೆಸರಿನಲ್ಲಿ ನಡೆಯುತ್ತಿದೆ ಸುಲಿಗೆ, ಸರ್ಕಾರ ಗಮನ ಕೊಡಲಿ: ಆರ್‌ ಅಶೋಕ್‌

Date:

ಅಕಾಲಿಕ ಮಳೆಯಿಂದಾಗಿ ಸಾವಿರಾರು ಎಕರೆ ಪ್ರದೇಶದಲ್ಲಿ ಭತ್ತ ಮತ್ತು ರಾಗಿ ಬೆಳೆ ನೆಲಕಚ್ಚಿ ಈಗಾಗಲೇ ಹೈರಾಣಾಗಿರುವ ರೈತರಿಗೆ, ಕಟಾವು ಯಂತ್ರ ಬಾಡಿಗೆ ಹೆಸರಿನಲ್ಲಿ ನಡೆಯುತ್ತಿರುವ ಸುಲಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಅವರೇ,
ಸ್ವಾಭಿಮಾನಿ ಸಮಾವೇಶ, ಜನಕಲ್ಯಾಣ ಸಮಾವೇಶದ ಸಂಭ್ರಮದಲ್ಲಿ ತಾವು ರಾಜ್ಯದ ಕೃಷಿ ಸಚಿವರು ಅನ್ನೋದನ್ನೇ ಮರೆತಿರುವಂತಿದೆ. ಕಟಾವು ಯಂತ್ರಗಳಿಗೆ ಜಿಲ್ಲಾಡಳಿತಗಳು ನಿಗದಿ ಪಡಿಸಿರುವ ದರವನ್ನ ಮೀರಿ ಹೆಚ್ಚು ದರ ವಸೂಲಿ ಮಾಡುವ ಮೂಲಕ ರೈತರನ್ನು ಸುಲಿಗೆ ಮಾಡಲಾಗುತ್ತಿದೆ. ನಿರರ್ಥಕ ಸಮಾವೇಶಗಳಲ್ಲಿ ತಮ್ಮ ಸಮಯ ವ್ಯರ್ಥ ಮಾಡುವ ಬದಲು ರೈತರಿಗೆ ಉಪಯೋಗ ಆಗುವ ಕೆಲಸ ಮಾಡಿ ಪುಣ್ಯ ಕಟ್ಟಿಕೊಳ್ಳಿ. ಕಟಾವು ಯಂತ್ರಗಳು ಕೈಗೆಟಕುವ ದರದಲ್ಲಿ ರೈತರಿಗೆ ಸಿಗುವಂತೆ ಯಾವುದಾದರೂ ಪರಿಹಾರ ಕಂಡುಕೊಳ್ಳುವ ಮಾರ್ಗ ಹುಡುಕಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಫೆಂಗಲ್ ಚಂಡಮಾರುತದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ 70,000 ಎಕರೆ ಪ್ರದೇಶದಲ್ಲಿ ಭತ್ತ, ರಾಗಿ ಬೆಳೆಗಳು ನೆಲಕಚ್ಚಿವೆ. ಹುಲ್ಲು ಕೊಳೆತು ಜಾನುವಾರುಗಳ ಮೇವಿಗೂ ಕೊರತೆಯಾಗಿದೆ. ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ, ನಿಮ್ಮ ಸ್ವಾಭಿಮಾನಿ, ಅಲ್ಲ ಜನಕಲ್ಯಾಣ ಸಮಾವೇಶದ ಕಿತ್ತಾಟದ ಮಧ್ಯದಲ್ಲಿ ಬಿಡುವು ಮಾಡಿಕೊಂಡು ಒಮ್ಮೆ ರಾಮನಗರ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ರೈತರ ಕಷ್ಟ ಕೇಳಿ. ಬೆಳೆ ನಷ್ಟ ಪರಿಹಾರ ಕೊಡಿಸುವ ಮೂಲಕ ಅನ್ನದಾತರ ನೆರವಿಗೆ ಬನ್ನಿ” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....