ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ: ಪುನರುಚ್ಚರಿಸಿದ ಹೆಚ್.ಡಿ.ಕುಮಾರಸ್ವಾಮಿ

Date:

60% ಕಮಿಷನ್ ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿರುವ ಆರೋಪವಿದು. ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರಕಾರವೇ ವಾಸಿ ಇತ್ತು ಎಂದು ಅವರು ಅಲವತ್ತುಕೊಂಡಿದ್ದಾರೆ ನಿಮ್ಮ ಪಕ್ಷದ ಗುತ್ತಿಗೆದಾರರು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

- Advertisement -

ರಾಜ್ಯ ಕಾಂಗ್ರೆಸ್ ಸರಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಅವರು; ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿ, “ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಮಿಷನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40%ಕಮಿಷನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ, ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ” ಎಂದು ಪ್ರಶ್ನಿಸಿದರು.

“ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ನಿಮಗೆ ಮತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ? ಕಮೀಶನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರರನ್ನು ರಕ್ಷಿಸಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...