Fact Check | BJP ನಾಯಕನ ಅಶ್ಲೀಲ ಚಿತ್ರವನ್ನು ಡಿಕೆಶಿ ಅವರದ್ದೆಂದು ತಪ್ಪಾಗಿ ಹಂಚಿಕೊಂಡ ಜೆಡಿಎಸ್‌ ಹೆಸರಿನ ಪೇಜ್

Date:

ಅಶ್ಲೀಲ ಚಿತ್ರವೊಂದನ್ನು ಹಂಚಿಕೊಂಡಿರುವ ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್‌ – ಆ ಚಿತ್ರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರದ್ದು ಎಂದು ಆರೋಪಿಸಿದೆ. ಚಿತ್ರವನ್ನು ಹಂಚಿಕೊಂಡು, “ಯಾರಿರಬಹುದು ಕಾಮೆಂಟ್ ಬಾಕ್ಸ್ ನಿಮ್ಮದೇ..! ಸಿಡಿ ಶಿ….ಕುಮಾರನ ಸಂತತಿಗಳೇ ಹು ಶುರು ಮಾಡಿ ನೀವು HD ವಿಡಿಯೋ ರಿಲೀಸ್ ಮಾಡಿ ನಾವು FullHD ರಿಲೀಸ್ ಮಾಡ್ತೀವಿ … ಅಬ್ಬಬಾ ರುಚಿಕರ ಸಂಭಾಷಣೆ.. ವಿಡಿಯೋ ತುಂಬಾ ಕಾಸ್ಟ್ಲಿ ಯಾರು ಕೇಳಬೇಡಿ ಅವರು ಬಿಟ್ಟರೆ ನಾವು ಬಿಡೋಣ. ಈಗಲೇ ಬಿಟ್ಟರೆ ಏನು ಮಜ…ಬಿಡ್ರೋ ಬಿಡ್ರಿ ನೋಡೋಣ…” ಎಂಬ ಹೇಳಿಕೆಯನ್ನು ಪೋಸ್ಟ್‌ ಮಾಡಿಲಾಗಿದೆ.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಪೋಸ್ಟ್‌ಗೆ ಕಮೆಂಟ್‌ ಮಾಡಿರುವ ಹಲವರು, ಅದು ಡಿಕೆ ಶಿವಕುಮಾರ್ ಅವರದ್ದು ಎಂದು ಸಾಬೀತು ಮಾಡಿ ನೋಡಣ ಎಂದು ಸವಾಲು ಹಾಕಿದ್ದಾರೆ. ಇನ್ನೂ, ಕೆಲವರು ಅದು ಶಿವಕುಮಾರ್ ಅವರದ್ದೇ ಇರಬಹುದು ಎಂದೂ ಹೇಳುತ್ತಿದ್ದಾರೆ.  ಫೋಟೊದಲ್ಲಿ ಕಂಡುಬರುವ ವ್ಯಕ್ತಿ ನಿಜವಾಗಿಯೂ ಡಿ.ಕೆ.ಶಿವಕುಮಾರ್ ಅವರೇ? ಸತ್ಯವೇನು ಪರಿಶೀಲಿಸೊಣ.

ಪ್ರತಿಪಾದನೆ: ಅಶ್ಲೀಲ ಚಿತ್ರ ಡಿಕೆ ಶಿವಕುಮಾರ್ ಅವರದ್ದು
ಸತ್ಯ: ಅದು ಡಿಕೆ ಶಿವಕುಮಾರ್ ಅವರದ್ದಲ್ಲ, ದಿಯು-ದಮನ್‌ನ ಬಿಜೆಪಿ ಅಧ್ಯಕ್ಷನ ಚಿತ್ರ

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೊವನ್ನು ಗೂಗಲ್ ಲೆನ್ಸ್‌ನಲ್ಲಿ ಸರ್ಚ್ ಮಾಡಿದಾಗ ಇದೇ ಚಿತ್ರವನ್ನು ಹೋಲುವ ಹಲವು ಪೋಸ್ಟ್‌ಗಳು ಲಭ್ಯವಾದವು.

ಮತ್ತಷ್ಟು ಗೂಗಲ್ ಸರ್ಚ್ ಮಾಡಿದಾಗ, 3 ನವೆಂಬರ್ 2019ರಲ್ಲಿ democraticaccent.com ಎಂಬ ಸುದ್ದಿ ತಾಣ ಮಾಡಿದ ವರದಿಯೊಂದು ಲಭ್ಯವಾಗಿದೆ. ವರದಿಯ ಪ್ರಕಾರ, ದಮನ್ ಮತ್ತು ದಿಯು – ಕೇಂದ್ರಾಡಳಿತ ಪ್ರದೇಶ – ಬಿಜೆಪಿ ಘಟಕದ ಅಧ್ಯಕ್ಷ ಗೋಪಾಲ್ ತಾಂಡೇಲ್ ಅವರು ಮಹಿಳೆಯೊಬ್ಬರೊಂದಿಗೆ ಇರುವ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

WhatsApp Image 2024 04 29 at 17.17.37

ಅಸಲಿಗೆ ಇದು ಡಿ.ಕೆ ಶಿವಕುಮಾರ್‌ಗೆ ಸಂಬಂಧಿಸಿದ ಫೋಟೋಗಳಲ್ಲ. ಬದಲಿಗೆ ಇದು ಬಿಜೆಪಿ ನಾಯಕ ಗೋಪಾಲ್‌ ತಂಡೇಲ್‌ ಫೋಟೋಗಳಾಗಿವೆ. ದ ಫೋಟೋಗಳು ಹೊರಬಿದ್ದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನೂ ಸಹ ನೀಡಿದ್ದರು. ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

WhatsApp Image 2024 04 29 at 17.11.14

ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾರವರೇ ಖುದ್ದು ಗೋಪಾಲ್‌ರವರ ರಾಜಿನಾಮೆಯನ್ನು ಸ್ವೀಕರಿಸಿದ್ದರು ಈಗ ಆ ಫೋಟೋಗಳನ್ನು ಡಿ.ಕೆ. ಶಿವಕುಮಾರ್‌ ಅವರದ್ದೇ ಎಂಬಂತೆ ಬಿಂಬಿಸಿ ಹರಿಬಿಡಲಾಗುತಿದ್ದು, ಇದೊಂದು ಸುಳ್ಳು ಸುದ್ದಿಯಾಗಿದೆ. ಈ ನಕಲಿ ಫೋಟೋಗಳನ್ನು ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹವೂ ಕೇಳಿಬರುತ್ತಿದೆ.

ಅಂತಿಮವಾಗಿ ಹೇಳುವುದಾದರೆ, ಡಿ.ಕೆ.ಶಿವಕುಮಾರ್ ಗೆ ಟಾಂಗ್ ಕೊಡಲು ಹೋಗಿ, ತಮ್ಮದೇ ಮೈತ್ರಿ ಪಕ್ಷದ(BJP) ನಾಯಕನ ಅಶ್ಲೀಲ ಫೋಟೋವನ್ನು ಹಂಚಿಕೊಂಡು ಜೆಡಿಎಸ್‌ ಯುವ ಘಟಕ ಮುಜುಗರಕ್ಕೆ ಒಳಗಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...