ಸತ್ಯಶೋಧ | ಬಿಜೆಪಿಗೆ ಸ್ಟಾರ್‌ ಕ್ರಿಕೆಟಿಗ ಎಂ.ಎಸ್‌ ಧೋನಿ ಸೇರಿಲ್ಲ

Date:

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ, ಸ್ಟಾರ್‌ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು ಬಿಜೆಪಿ ಸೇರಿದ್ದಾರೆ ಎಂಬ ಹೇಳಿಯೊಂದಿಗೆ ಪ್ರಧಾನಿ ಮೋದಿ ಮತ್ತು ಧೋನಿ ಇರುವ ಚಿತ್ರವೊಂದು ಹರಿದಾಡುತ್ತಿದೆ. ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹಲವಾರು ನೆಟ್ಟಿಗರು ಧೋನಿ ಬಿಜೆಪಿ ಸೇರಿದ್ದಾರೆಂದು ನಂಬಿಸಿದ್ದು, ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ, ಧೋನಿ ಬಿಜೆಪಿ ಸೇರಿಲ್ಲ. ವೈರಲ್ ಆಗುತ್ತಿರುವ ಚಿತ್ರವು ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಿರುವ ಚಿತ್ರವಾಗಿದೆ ಎಂದು ಕಂಡುಬಂದಿದೆ.

- Advertisement -

ವೈರಲ್ ಪೋಸ್ಟ್‌ ಮತ್ತು ಚಿತ್ರ ಹೇಳುವುದೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಪ್ರಧಾನಿ ಮೋದಿ ಜೊತೆ ಧೋನಿ ಇರುವ ಫೋಟೋವನ್ನು ಹಲವಾರು ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲಿ ಧೋನಿ ಮತ್ತು ಮೋದಿ ಬಿಜೆಪಿಯ ಚಿಹ್ನೆ ಇರುವ ಕೇಸರಿ ಶಾಲನ್ನು ಧರಿಸಿದ್ದಾರೆ. ಚಿತ್ರ ‘ಬ್ಯಾಕ್‌ಗ್ರೌಂಡ್‌’ನಲ್ಲಿ ಬಿಜೆಪಿಯ ಬ್ಯಾನರ್ ಕೂಡ ಇದೆ.

ಆಚಿತ್ರವನ್ನು ಹಂಚಿಕೊಂಡಿರುವ ಹಲವರು, ‘ಸಿಎಸ್‌ಕೆ ಆಟಗಾರ ಧೋನಿ ಬಿಜೆಪಿ ಸೇರಿದ್ದಾರೆ’, ‘ಎಂ.ಎಸ್‌ ಧೋನಿ ಬಿಜೆಪಿ ಸೇರಿದ್ದಾರೆ’ ಎಂದು ಹೇಳುತ್ತಿದ್ದಾರೆ.

image 48 2

ಸತ್ಯವೇನು?

ಫೋಟೋ ವೈರಲ್ ಆಗುತ್ತಿದ್ದಂತೆ, ಚಿತ್ರಕ್ಕೆ ಸಂಬಂಧಿದ ಕೀವರ್ಡ್‌ಗಳನ್ನು ಬಳಸಿ, ಅಂತರ್ಜಾಲದಲ್ಲಿ ಹುಡುಕಲಾಗಿದ್ದು, ಧೋನಿ ಬಿಜೆಪಿ ಸೇರಿದ್ದಾರೆ ಎಂದು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ವರದಿಗಳು ಕಂಡುಬಂದಿಲ್ಲ. ಅಲ್ಲದೆ, ಪ್ರಧಾನಿ ಮೋದಿ ಅವರನ್ನು ಇತ್ತೀಚೆಗೆ ಧೋನಿಯನ್ನು ಭೇಟಿ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು, ವರದಿಗಳು ದೊರೆತಿಲ್ಲ.

ಈ ವರದಿ ಓದಿದ್ದೀರಾ?: ಪ್ರಧಾನಿ ಮೋದಿ ನಿವೃತ್ತರಾಗುತ್ತಾರೆಯೇ? RSS ಕೇಂದ್ರ ಕಚೇರಿ ಭೇಟಿಯ ಉದ್ದೇಶವೇನು?

ಇನ್ನು, ಚಿತ್ರವನ್ನು ತೀಕ್ಷ್ಣವಾಗಿ ಪರಿಶೀಲಿಸಿದರೆ, ಫೋಟೋದಲ್ಲಿ ಪ್ರಧಾನಿ ಮೋದಿ ಅವರ ಕನ್ನಡಕ ಸಂಪೂರ್ಣವಾಗಿ ಚಿತ್ರಣಗೊಂಡಿಲ್ಲ. ಮೋದಿ ಅವರ ಭುಜದ ಮೇಲಿನ ಕಮಲದ ಚಿಹ್ನೆಯು ಕೃತಕ ರೀತಿಯಲ್ಲಿದ್ದು, ಎಐ ತಂತ್ರಜ್ಞಾನದಿಂದ ರಚಿಸಲ್ಪಟ್ಟಿದೆ ಎಂಬುದನ್ನು ಸೂಚಿಸುತ್ತದೆ. ಹೀಗಾಗಿ, ಅದು ಎಐ ಬಳಸಿ, ಚಿತ್ರಸಲಾಗಿರುವ ಫೋಟೋ ಎಂಬುದು ದೃಢಪಟ್ಟಿದೆ.

ಸಾರಾಂಶ;

ಚಿತ್ರವನ್ನು ಕೃತಕ ಬುದ್ದಿಮತ್ತೆ ಬಳಸಿ ರಚಿಸಲಾಗಿದೆ. ಧೋನಿ ಬಿಜೆಪಿಗೆ ಸೇರಿಲ್ಲ ಅಥವಾ ಪ್ರಧಾನಿ ಮೋದಿಯವರನ್ನು ಇತ್ತೀಚೆಗೆ ಭೇಟಿ ಮಾಡಿಲ್ಲ ಎಂಬುದು ದೃಢ. ಇಂತಹ ಸುದ್ದಿಗಳನ್ನು ನಂಬುವುದಕ್ಕೂ ಮುನ್ನ ಜನರು ಎಚ್ಚರಿಕೆಯಿಂದ ಇರಬೇಕು. ಅಧಿಕೃತ ಮಾಹಿತಿಗಳನ್ನು ಪರಿಶೀಲಿಸಿ, ಸತ್ಯಾಸತ್ಯತೆಯನ್ನು ಗಮನಿಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...