ವಿದ್ಯಾರ್ಥಿಗಳ ಆಹಾರದಲ್ಲಿ ಮಲ | ನಾಲ್ಕು ತಿಂಗಳಾದರೂ ಕ್ರಮ ಕೈಗೊಳ್ಳದ ಲಜ್ಜೆಗೇಡಿ ಸರ್ಕಾರ: ಅಶೋಕ್ ಆಕ್ರೋಶ

Date:

Advertisements

ಚಿಂತಾಮಣಿಯ ಸರ್ಕಾರಿ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಆಹಾರದಲ್ಲಿ ಮಲ ಬೆರೆತಿರುವ ಪ್ರಕರಣ ನೆನೆಸಿಕೊಂಡರೆ ಕರುಳು ಕಿತ್ತು ಬರುತ್ತಿದೆ. ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಲಜ್ಜೆಗೇಡಿತನಕ್ಕೆ ಸಾಕ್ಷಿ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಲ್ಯಾಬ್‌ ರಿಪೋರ್ಟ್‌ ಹಂಚಿಕೊಂಡು ಪೋಸ್ಟ್‌ ಮಾಡಿರುವ ಅವರು, “ಪ್ರಕರಣದ ಲ್ಯಾಬ್ ವರದಿ ಆಗಸ್ಟ್ ತಿಂಗಳಿನಲ್ಲೇ ಬಂದಿದ್ದರು, 4 ತಿಂಗಳಿಂದ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಎಷ್ಟು ಲಜ್ಜೆಗೆಟ್ಟಿರಬಹುದು” ಎಂದು ವಾಗ್ದಾಳಿ ನಡೆಸಿದ್ದಾರೆ.

“ಬಾಬಾಸಾಹೇಬ್ ಅಂಬೇಡ್ಕರ್ ಅವರು ಇಂದು ಬದುಕಿದ್ದಿದ್ದರೆ ಈ ದಲಿತ ವಿರೋಧಿ ಸರ್ಕಾರವನ್ನು ನೋಡಿ ಬಹುಶಃ ಕಣ್ಣೀರಿಡುತ್ತಿದ್ದರು ಅಲ್ಲವೇ ಸಚಿವ ಹೆಚ್‌ ಸಿ ಮಹದೇವಪ್ಪ ಅವರೇ” ಎಂದು ಅಶೋಕ್ ಪ್ರಶ್ನಿಸಿದ್ದಾರೆ.

Advertisements

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X