“ಫೇಕ್ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
“ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ” ಎಂದರು.
ಸಮಾಜಕ್ಕೆ ಮಾರಕವಾಗಿರುವ ಸುಳ್ಳು ಸುದ್ದಿಗಳ ನಿಯಂತ್ರಣಕ್ಕಾಗಿ ಪ್ರತಿ ಜಿಲ್ಲೆಗೊಂದರಂತೆ ವಿಶೇಷ ಘಟಕಗಳನ್ನು ಆರಂಭಿಸಲಾಗಿದೆ. ಇದರ ಜೊತೆಗೆ ಸುಳ್ಳು ಸುದ್ದಿಗಳನ್ನು ಪತ್ತೆಹಚ್ಚಿ ಸತ್ಯವನ್ನು ಜನರಿಗೆ ತಿಳಿಸಲು ಫ್ಯಾಕ್ಟ್ ಚೆಕ್ ಗಳನ್ನು ಕೂಡ ಆರಂಭಿಸಲಾಗಿದೆ. ಜನರಿಗೆ ಸತ್ಯವನ್ನು ಮಾತ್ರ ತಲುಪಿಸುವುದು ಸರ್ಕಾರ, ಮಾಧ್ಯಮಗಳು ಸೇರಿದಂತೆ… pic.twitter.com/FspUc1Pu1h
— Siddaramaiah (@siddaramaiah) July 1, 2024
“ಫೇಕ್ ನ್ಯೂಸ್‌ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ” ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.
ಇದನ್ನು ಓದಿದ್ದೀರಾ? ಮೊದಲ ಭಾಷಣದಲ್ಲೇ ಶಿವ ದೇವರ ಫೋಟೋ ತೋರಿಸಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ
ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

ವಿಕ್ರಂ ಟಿವಿ, ಸಂವಾದ, ಸುಕನ್ಯಾ ಗಾಂವ್ಕರ್, ರವೀಂದ್ರ ಜೋಶಿ, ಬಿ ಗಣಪತಿ,,ಮಸ್ತ ಮಗಾ ಇವುಗಳ ಪ್ರಸಾರ ನೋಡಿದ್ರೆ,, ವರ್ಷವಿಡೀ ರಾಹುಲ್ ಗಾಂಧಿ ಖರ್ಗೆ ಮಮತಾ ಬ್ಯಾನರ್ಜಿ ಕೇಜ್ರಿವಾಲ್ ಸಿದ್ದರಾಮಯ್ಯ, ಮುಸ್ಲಿಂ ಅಪಪ್ರಚಾರ ಮಾಡುವುದು ಬಿಟ್ಟರೆ,, ಬೇರೆ ಯಾವ ಸುದ್ದಿಯೂ ಇರೋದಿಲ್ಲ,,, ಇವರುಗಳು ಒಂಥರಾ ಪೇಯ್ಡ್ ಪ್ರೊಪಗ್ಯಾಂಡಾ ಫೇಕ್ ನ್ಯೂಸ್ ಫ್ಯಾಕ್ಟರಿ ತರಹ,,, ಇವುಗಳಿಗೆ ಸ್ವಲ್ಪವೂ ವೃತ್ತಿ ಗೌರವ ಸ್ವಾಭಿಮಾನ ಹುಡುಕಿದರೂ ಸಿಗುವುದಿಲ್ಲ,, ಇವರೊಂದಿಗೆ ಮೇನ್ ಸ್ಟ್ರೀಮ್ ಟೀವಿ ಚಾನಲ್ ಗಳಲ್ಲಿ ಸುವರ್ಣನ್ಯೂಸ್, ಪಬ್ಲಿಕ್ ಟಿವಿ, ರಿಪಬ್ಲಿಕ್ ಟಿವಿ ಇವರೂ ಸಹ ಅವರೊಂದಿಗೆ ಪೈಪೋಟಿಯಲ್ಲಿ ಇರುವರು
Why can’t the government take strict action against these fake news mongers? Either government does not have real intent Or government wants to wait for its turn to utilize the faka news. Either way voters.are losers.