ಕೆಪಿಸಿಸಿ ಹೆಸರಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿ : ಮೂವರ ಬಂಧನ

Date:

  • ಮೊಬೈಲ್, ಲ್ಯಾಪ್‌ಟಾಪ್ ವಶಕ್ಕೆ; ಜಾಮೀನಿನ ಮೇಲೆ ಬಿಡುಗಡೆ
  • ಪೊಲೀಸರಿಗೆ ದೂರು ನೀಡಿದ್ದ ಕೆಪಿಸಿಸಿ ಘಟಕದ ಸದಸ್ಯ ಶತಬೀಶ್‌ ಶಿವಣ್ಣ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿದ್ದ ಜಾಲ ಪತ್ತೆ ಮಾಡಿರುವ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ.

- Advertisement -

ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಕಾಂಗ್ರೆಸ್ ನಾಯಕರ ವಿರುದ್ಧವೇ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಾಸನದಲ್ಲಿ ನೋಂದಣಿಯಾಗಿದ್ದ ವೆಬ್‌ಸೈಟ್‌ ಬೆಂಗಳೂರಿನಲ್ಲಿ ಬ್ರಾಂಚ್ ಹೊಂದಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸದ್ಯ ಬಂಧಿತರಿಂದ ಮೂರು ಮೊಬೈಲ್, ಒಂದು ಲ್ಯಾಪ್‌ಟಾಪ್, ಕ್ರೆಡಿಟ್ ಕಾರ್ಡ್ ಸೇರಿ ಹಲವು ದಾಖಲೆಗಳ ವಶಕ್ಕೆ ಪಡೆದಿದ್ದು, ಬಂಧಿತರನ್ನು ವೆಂಕಟೇಶ್, ಧರಣೇಶ್ ಮತ್ತು ಸಿದ್ದಾರ್ಥ್ ಎಂದು ಗುರುತಿಸಲಾಗಿದೆ.

ಕಳೆದ ಫೆಬ್ರವರಿ 3ರಂದು ಕೆಪಿಸಿಸಿ ಘಟಕದ ಸದಸ್ಯ ಶತಬೀಶ್‌ ಶಿವಣ್ಣ ನೀಡಿದ್ದ ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದ ಸೈಬರ್ ಪೊಲೀಸರು, ಹಾಸನ ಹಾಗೂ ಬೆಂಗಳೂರಲ್ಲಿ ಸ್ಥಾಪನೆಯಾಗಿದ್ದ ನಕಲಿ ವೆಬ್‌ಸೈಟ್ ಜಾಲವನ್ನು ಕೊನೆಗೂ ಪತ್ತೆ ಮಾಡಿದ್ದರು.

ಇದನ್ನು ಓದಿದ್ದೀರಾ? ನಟ ಅಕ್ಷಯ್ ಕುಮಾರ್ ಕೆನ್ನೆಗೆ ಬಾರಿಸಿದರೆ 10 ಲಕ್ಷ ಬಹುಮಾನ ಘೋಷಿಸಿದ ಬಲಪಂಥೀಯ ಮುಖಂಡ

ಈ ನಕಲಿ ವೆಬ್‌ಸೈಟ್‌ ಮೂಲಕ ಕಾಂಗ್ರೆಸ್ ವಿರುದ್ಧವೇ ಅವಹೇಳನಕಾರಿ ಬರಹಗಳ ಪೋಸ್ಟ್ ಮಾಡಲಾಗಿತ್ತು. ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಅವಹೇಳನ ಮಾಡಿ ಪೋಸ್ಟ್​​ಗಳನ್ನು ಹಾಕಲಾಗಿತ್ತು. ಬಳಿಕ ಕೆಪಿಸಿಸಿ ಕಾನೂನು ಘಟಕದಿಂದ ಸೈಬರ್‌ ಠಾಣೆಗೆ ದೂರು ನೀಡಲಾಗಿತ್ತು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಡಾ. ಎಸ್ ಡಿ ಶರಣಪ್ಪ, ‘ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಅದರ ಮೂಲಕ ಪಕ್ಷದ ನಾಯಕರಿಗೆ ಅಗೌರವ ತರುವಂತಹ ಹೇಳಿಕೆಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಕಳೆದ ಫೆಬ್ರವರಿಯಲ್ಲಿ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ಬಂದಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಐಟಿ ಕಾಯಿದೆ ಹಾಗೂ ಐಪಿಸಿ ಸೆಕ್ಷನ್‌ನಡಿ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದರು’ ಎಂದು ತಿಳಿಸಿದ್ದಾರೆ.

‘ವಶಕ್ಕೆ ಪಡೆದಿದ್ದ ನಾಲ್ವರಲ್ಲಿ ಮೂವರ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಜಾಮೀನು ನೀಡಬಹುದಾದ ಅಪರಾಧವಾಗಿ ಪ್ರಕರಣ ದಾಖಲಾಗಿದ್ದರಿಂದ ಸದ್ಯ ಠಾಣಾ ಜಾಮೀನಿನ ಆಧಾರದಲ್ಲಿ ನೋಟಿಸ್ ನೀಡಿ ಕಳುಹಿಸಲಾಗಿದೆ’ ಎಂದು ಶರಣಪ್ಪ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...