ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು ಆರೋಪ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಸಿಎಂ, ಡಿಸಿಎಂ

Date:

Advertisements

ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಶನಿವಾರ ಬೆಳಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾದರು.

ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ  ಆರೋಪದಡಿ ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ ಎಸ್‌ ಕೇಶವಪ್ರಸಾದ್‌ ಅವರು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಹಾಗೂ ರಾಹುಲ್‌ ಗಾಂಧಿ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ದೂರನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ‘ದ 42ನೇ ಎಸಿಎಂಎಂ ಕೋರ್ಟ್‌ ವಿಚಾರಣೆಗೆ ಅಂಗೀಕರಿಸಿತ್ತು.

ಈ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಹೀಗಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ನ್ಯಾಯಾಧೀಶರ ಮುಂದೆ ಹಾಜರಾದರು. ಆರೋಪಿಗಳ ಹಾಜರಿಯನ್ನು ದಾಖಲಿಸಿಕೊಂಡ ನ್ಯಾಯಾಧೀಶರು ಮುಂದಿನ ವಿಚಾರಣೆಯ ದಿನಾಂಕ‌ ತಿಳಿಸುವುದಾಗಿ ಹೇಳಿದರು. ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕೆಲ ಹೊತ್ತು ಕೋರ್ಟ್ ಹಾಲ್‌ ಹೊರಗಡೆಯ ಬೆಂಚ್‌ನಲ್ಲಿ ಕುಳಿತು ಸ್ನೇಹಿತರನ್ನು ಮಾತನಾಡಿಸಿ ಅಲ್ಲಿಂದ ತೆರಳಿದರು.

Advertisements

ಈ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರೂ ಆರೋಪಿಯಾಗಿದ್ದು, ಅವರ ಪರ ವಕೀಲರು ಹಾಜರಾಗಿ ವಿನಾಯ್ತಿ ಕೋರಿದರು.

ನಾವು ಕಾನೂನು ಪಾಲಕರು: ಸಿದ್ದರಾಮಯ್ಯ

ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ, “ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ” ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

“ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ” ಎಂದು ಹೇಳಿದರು.

ಏನಿದು ಪ್ರಕರಣ

2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಹಾಗೂ ರಾಹುಲ್‌ ಗಾಂಧಿ ಅವರು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿ, “ರಾಜ್ಯದಲ್ಲಿ ಬಿಜೆಪಿ ಸರ್ಕಾರವು 2019 ರಿಂದ 2023 ರವರೆಗೆ ಭ್ರಷ್ಟ ಆಡಳಿತವನ್ನು ನೀಡಿದೆ. ಅಂದರೆ ಸಿಎಂ ಹುದ್ದೆ- ರೂ.2500 ಕೋಟಿ, ಮಂತ್ರಿಗಳ ಹುದ್ದೆ- ರೂ. 500 ಕೋಟಿ ರೂಗಳನ್ನು ಬಿಜೆಪಿ ಹೈಕಮಾಂಡ್ ಗೆ ನೀಡಿ ಹುದ್ದೆ ಸ್ವೀಕಾರ ಮಾಡಿರುತ್ತಾರೆ. ಭ್ರಷ್ಟಾಚಾರ ಅಡಳಿತವನ್ನು ನೀಡಿರುತ್ತಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್ ನ ಡೀಲ್ ಗಳಲ್ಲಿ ಶೇಕಡಾ 75%, ಪಿಡಬ್ಲ್ಯೂಡಿ ಗುತ್ತಿಗೆ ಟೆಂಡ‌ರ್ ನ ಡೀಲ್ ಗಳಲ್ಲಿ ಶೇ. 40 ಮಠಕ್ಕೆ ನೀಡುವ ಅನುದಾನದ ಡೀಲ್ ಗಳಲ್ಲಿ ಶೇ.30 ಉವಕರಣಗಳ ಪೂರೈಕೆ ಡೀಲ್ ಗಳಲ್ಲಿ ಶೇ.40 ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್ ನ ಡೀಲ್ ಗಳಲ್ಲಿ ಶೇ.30 ಮತ್ತು ರಸ್ತೆ ಕಾಮಗಾರಿಗಳ ಟೆಂಡರ್ ನ ಡೀಲ್ ಗಳಲ್ಲಿ ಶೇ. 40 ಮೊತ್ತದ ಕಮಿಷನ್ ಅನ್ನು ಟೆಂಡರ್ ದಾರರಿಂದ ಪಡೆದು ಭ್ರಷ್ಟ ಆಡಳಿತವನ್ನು ನೀಡಿದೆ‌ ಎಂದು ಆರೋಪಿಸಿದ್ದಾರೆ.

ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವಗ್ರಹ ಪೀಡಿತ ಮತ್ತು ಮಾನಹಾನಿಕರ ಆರೋಪವಾಗಿದೆ. ಚುನಾವಣಾ ಸಮಯದಲ್ಲಿ ಬಿಜೆಪಿ ಪಕ್ಷಕ್ಕೆ ಮಾಡಿರುವ ಅಪಮಾನವಾಗಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಕಲಂ 499, 500 ಐಪಿಸಿ ರೀತ್ಯಾ ಮಾನನಷ್ಟ ಮೊಕದ್ದಮೆಯ ಖಾಸಗಿ ದೂರನ್ನು ದಾಖಲು ಮಾಡಿಕೊಳ್ಳಬೇಕು” ಎಂದು ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಕೇಶವ ಪ್ರಸಾದ್ 08.05.2023 ರಂದು 42ನೇ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X