ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷ ಟರ್ಕಿಯಲ್ಲಿ ನೋಂದಾಯಿತ ಕಚೇರಿ ಹೊಂದಿದೆ ಎಂದು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಹಾಗೂ ಸುದ್ದಿ ನಿರೂಪಕ ಅರ್ನಬ್ ಗೋಸ್ವಾಮಿ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಯುವ ಕಾಂಗ್ರೆಸ್ ಘಟಕ ಕ್ರಿಮಿನಲ್ ಮೊಕದ್ದಮೆ ಹೂಡಿದೆ.
ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟು ಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವುದು) ಅಡಿಯಲ್ಲಿ ಬೆಂಗಳೂರಿನ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಾಳವಿಯಾ ಹಾಗೂ ಗೋಸ್ವಾಮಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಆಗ್ರಹಿಸಿದೆ.
ಆರ್ನಬ್ ಗೋಸ್ವಾಮಿ ತಮ್ಮ ರಿಪಬ್ಲಿಕ್ ಟಿವಿಯಲ್ಲಿ ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ಕಾಂಗ್ರೆಸ್ ಸೆಂಟರ್ ಅನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಚೇರಿ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಅದನ್ನು ಅಮಿತ್ ಮಾಳವೀಯ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾನು-ಭಾಸ್ತಿ ಜೋಡಿ- ಕನ್ನಡಕ್ಕೆ ಬೂಕರ್ ಗೆದ್ದ ಮೋಡಿ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಕೆಣಕುವ, ಅಶಾಂತಿಯನ್ನು ಪ್ರಚೋದಿಸುವ ಮತ್ತು ರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸುವ ಈ ದುರುದ್ದೇಶಪೂರಿತ ಪ್ರಯತ್ನವು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ. ನಾವು ಮೌನವಾಗಿರುವುದಿಲ್ಲ, ನಮ್ಮ ಪಕ್ಷ ಅಥವಾ ಅದರ ನಾಯಕತ್ವದ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುವ ಯಾವುದೇ ಪ್ರಯತ್ನಕ್ಕೆ ನಾವು ಶಕ್ತವಾದ ಕಾನೂನು ಮತ್ತು ರಾಜಕೀಯ ಪ್ರತಿಕ್ರಿಯೆಯನ್ನು ನೀಡುತ್ತೇವೆ. ಇದು ನಮ್ಮ ಸ್ಪಷ್ಟ ಸಂದೇಶ” ಎಂದು ಭಾರತೀಯ ಯುವ ಕಾಂಗ್ರೆಸ್ ಲೀಗಲ್ ಸೆಲ್ ತನ್ನ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದೆ.
ದೆಹಲಿ ಹಾಗೂ ಕರ್ನಾಟಕ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಮಾಳವಿಯಾ ಹಾಗೂ ಗೋಸ್ವಾಮಿ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
Under the direction of @IYC In-charge Shri @Allavaru Ji, National President @UdayBhanuIYC Ji, and Our Chairman @RoopeshINC Ji, an FIR has been registered under non-bailable sections against @amitmalviya and Arnab Goswami Editor-in-Chief, @republic for defaming the constitutional… pic.twitter.com/nlTxoPO8RD
— IYC Legal Cell (@IYCLegalCell) May 20, 2025