ಕುಟುಂಬ ರಾಜಕಾರಣ ವಿರೋಧಿಸಿ ಮಾತನಾಡುವ ಮೋದಿ ಬೂಟಾಟಿಕೆ ಮನುಷ್ಯ : ಕಾಂಗ್ರೆಸ್‌ ಟೀಕೆ

Date:

ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಿ ದೇಶದ ಪ್ರಶ್ನೆಗಳಿಗೆ ಉತ್ತರಿಸುವುದಕ್ಕಿಂತ ದೇವೇಗೌಡರ ಕುಟುಂಬದೊಂದಿಗೆ ಸೇರಿ ರಾಜಕೀಯ ಲಾಭ ಹುಡುಕುವುದೇ ಪ್ರಾಶಸ್ತ್ಯದ ಕೆಲಸ ಎಂದು ಕಾಂಗ್ರೆಸ್‌ ಕುಟುಕಿದೆ.

ಈ ಕುರಿತು ಎಕ್ಸ್‌ನಲ್ಲಿ ಮೋದಿ ಅವರನ್ನು ಟೀಕಿಸಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, “ಭದ್ರತಾ ವೈಫಲ್ಯದಿಂದ ಸಂಸತ್ ಭವನ ಅಪಾಯದಲ್ಲಿದೆ, ವಿಪಕ್ಷ ಸಂಸದರ ಅನೈತಿಕ ಅಮಾನತಿನಿಂದ ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ಹರಿಹಾಯ್ದಿದೆ.

“ಕುಟುಂಬ ರಾಜಕಾರಣ ವಿರೋಧಿಸಿ ಬೂಟಾಟಿಕೆಯ ಮಾತಾಡುವ ಮೋದಿಯವರು ‘ದೇವೇಗೌಡರ ರಾಜಕೀಯ ಕುಟುಂಬ’ದೊಂದಿಗೆ ಪೋಸ್ ಕೊಡುವ ಮೂಲಕ ತಮ್ಮನ್ನು ತಾವೇ ವ್ಯಂಗ್ಯ ಮಾಡಿಕೊಳ್ಳುತ್ತಿದ್ದಾರೆ” ಎಂದು ಲೇವಡಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನರೇಂದ್ರ ಮೋದಿ ಅವರೇ, ಬಹಳ ದಿನಗಳ ಬೇಡಿಕೆಯ ನಂತರ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಕ್ಕೆ ಧನ್ಯವಾದಗಳು. ಮಾಜಿ ಪ್ರಧಾನಿ ದೇವೇಗೌಡರನ್ನು ಕರೆಸಿಕೊಂಡು ಭೇಟಿಯಾಗಿದ್ದಕ್ಕೂ ಧನ್ಯವಾದಗಳು. ನಿಮ್ಮ ಹೊಸ ಬ್ರದರ್ ಕುಮಾರಸ್ವಾಮಿಯವರನ್ನು ಕರೆಸಿಕೊಂಡು ಭೇಟಿಯಾಗಿದ್ದಕ್ಕೂ ಧನ್ಯವಾದಗಳು. ನಿಮ್ಮ ಹೊಸ ಬ್ರದರ್‌ನ ಬ್ರದರ್ ರೇವಣ್ಣನವರನ್ನು ಹಾಗೂ ಅವರ ಮಗನನ್ನು ಭೇಟಿಯಾಗಿದ್ದಕ್ಕೂ ಧನ್ಯವಾದಗಳು. ಹೀಗೆಯೇ ಕರ್ನಾಟಕದ ಮರ್ಯಾದೆ ತೆಗೆದಿರುವ ನಿಮ್ಮ ಸಂಸದ ಪ್ರತಾಪ್‌ ಸಿಂಹನನ್ನು ‘ಕರೆಸಿಕೊಂಡು ಯಾಕಪ್ಪಾ ಸಂಸತ್ತಿನ ಭದ್ರತೆಯನ್ನು ಪರೀಕ್ಷೆ ಮಾಡಿದೆ? ಯಾಕಪ್ಪಾ ದಾಳಿಕೋರರೊಂದಿಗೆ ಕೈಜೋಡಿಸಿದೆ?’ ಎಂದು ಕೇಳುವುದು ಯಾವಾಗ” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ

“ಅಮೃತ್ ಭಾರತ ನಿಲ್ದಾಣ ಯೋಜನೆಯಡಿ ₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275...

ಮಾನನಷ್ಟ ಪ್ರಕರಣಗಳಲ್ಲಿ ಪಕ್ಷವನ್ನೂ ಆರೋಪಿಯಾಗಿ ಮಾಡಬಹುದು: ಕರ್ನಾಟಕ ಹೈಕೋರ್ಟ್

ಮಾನನಷ್ಟ ಮೊಕದ್ದಮೆಗಳಲ್ಲಿ ಒಬ್ಬ ವ್ಯಕ್ತಿ ಮಾತ್ರವಲ್ಲ, ರಾಜಕೀಯ ಪಕ್ಷಗಳಂತಹ ಸಂಸ್ಥೆಗಳು ಸೇರಿದಂತೆ...

ಆನೇಕಲ್ | ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆ

ಬೆಂಗಳೂರಿನ ಆನೇಕಲ್‌ ಬಳಿಯ ಕಾಳನಾಯಕನಹಳ್ಳಿ ಸಮೀಪದ ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ...

ಬೆಂಗಳೂರು | ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಅಪಹರಣ: ಆರೋಪಿಗಳ ಬಂಧನ

ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಭಾವಿಸಿ...