ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

Date:

Advertisements

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಟೊಂಕಕಟ್ಟಿ ನಿಂತಿರುವ ದೇಶದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ, ಕನ್ನಡ ಸೇರಿ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸುವ ಮೂಲಕ ಠಕ್ಕರ್ ನೀಡಲು ಮುಂದಾಗಿದ್ದಾರೆ.

ಧ್ರುವ್ ರಾಠಿಯವರು ಇತ್ತೀಚೆಗೆ ಬಿಡುಗಡೆಗೊಳಿಸಿದ್ದ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಾಗೂ ವಿಪಕ್ಷಗಳ ನಡುವಿನ ಹಲವು ವಿಚಾರಗಳಿಗೆ ಸ್ಪಷ್ಟ ರೂಪವನ್ನು ಈ ವೀಡಿಯೊ ನೀಡಿತ್ತು. ವಿಡಿಯೋದಲ್ಲಿ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆ ಗೆಲ್ಲಲು ವಿಪಕ್ಷಗಳನ್ನು ಹೇಗೆ ಕಟ್ಟಿ ಹಾಕಿದೆ? ಉನ್ನತ ತನಿಖಾ ಸಂಸ್ಥೆಗಳನ್ನು ಹೇಗೆ ದುರ್ಬಳಕೆ ಮಾಡಿದೆ ಎನ್ನುವ ಬಗ್ಗೆ ದಾಖಲೆ ಸಹಿತವಾಗಿ ವಿವರಿಸಿದ್ದರು.

ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಬ್ಲಾಕ್ ಮಾಡಿರುವುದು, ರಾಹುಲ್ ಗಾಂಧಿ ಅವರನ್ನು ತಡೆಯಲು ಬಿಜೆಪಿ ಏನೇನು ಮಾಡಿದೆ. ಎಲೆಕ್ಷನ್ ಬಾಂಡ್‌ಗಳು ರಾಜಕೀಯ ನಾಯಕರ ಬಂಧನಕ್ಕೆ ಹೇಗೆ ಕಾರಣವಾಗಿದೆ ಎನ್ನುವುದನ್ನು ಸಾಕಷ್ಟು ಆಧಾರಗಳೊಂದಿಗೆ ತಮ್ಮ ಪ್ರಮುಖ ಹಿಂದಿ ಚಾನೆಲ್‌ನಲ್ಲಿ ವಿವರಿಸಿದ್ದರು.

Advertisements

ಆ ಬಳಿಕ ಬಲಪಂಥೀಯರು ಹಾಗೂ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗರು ಇವರನ್ನು ಗುರಿಯಾಗಿರಿಸಿದ್ದರು. ಹೀಗಾಗಿ, ತನ್ನ ಸಂದೇಶಗಳು ದೇಶದ ಪ್ರತಿಯೊಬ್ಬ ಮತದಾರನಿಗೂ ತಲುಪಬೇಕು ಎನ್ನುವ ನಿಟ್ಟಿನಲ್ಲಿ ‘ಮಿಷನ್ 100 ಕೋಟಿ’ ಎಂಬ ಯೋಜನೆಯನ್ನು ಘೋಷಿಸಿದ್ದರು. ಇದರ ಬೆನ್ನಲ್ಲೇ ಎಐ ತಂತ್ರಜ್ಞಾನ ಬಳಸಿಕೊಂಡು ಇಂದು ಕನ್ನಡ ಸೇರಿ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ್ ರಾಠಿ, “ತಮಿಳು, ತೆಲುಗು, ಬೆಂಗಾಳಿ, ಕನ್ನಡ, ಮರಾಠಿ ಸೇರಿ ಇಂದು 5 ಭಾರತೀಯ ಭಾಷೆಗಳಲ್ಲಿ ನನ್ನ ವಿಡಿಯೋ ಬಿಡುಗಡೆಯಾಗಿದೆ. ಈ ರಾಜ್ಯಗಳ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಪ್ರಮುಖ ವೀಡಿಯೊ ಈಗಾಗಲೇ ಈ ಚಾನಲ್‌ಗಳಲ್ಲಿ ಲೈವ್ ಆಗಿದೆ” ಎಂದು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಟ್ವೀಟ್ ಸದ್ಯ ವೈರಲಾಗುತ್ತಿದ್ದು, ಜನರು ತಮ್ಮ ಇಷ್ಟದ ಭಾಷೆಗಳನ್ನು ಆಯ್ಕೆ ಮಾಡಿಕೊಂಡು Subscribers ಆಗುತ್ತಿದ್ದಾರೆ. ಧ್ರುವ್ ರಾಠಿಯವರ ಪ್ರಮುಖ ಹಿಂದಿ ಚಾನೆಲ್ ಈಗಾಗಲೇ ಒಂದು ಕೋಟಿ 78 ಲಕ್ಷ(17.8M) Subcribers ಹೊಂದಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸದ್ಯ ಜರ್ಮನಿಯಿಂದ ವಾಪಸ್ ಭಾರತಕ್ಕೆ ಆಗಮಿಸಿರುವ ಧ್ರುವ್ ರಾಠಿ, ಬಿಜೆಪಿ ಹರಡುತ್ತಿರುವ ನಿರಂತರ ಸುಳ್ಳುಗಳ ವಿರುದ್ಧ ಬಹಿರಂಗವಾಗಿಯೇ ಸಮರ ಸಾರಿದ್ದಾರೆ. ಇತ್ತೀಚೆಗೆ ಬಿಜೆಪಿ ಬಿಡುಗಡೆಗೊಳಿಸಿದ್ದಂತಹಾ ಚುನಾವಣಾ ಪ್ರಣಾಳಿಕೆಯು ಎಷ್ಟು ಸುಳ್ಳಿನಿಂದ ಕೂಡಿದೆ ಎಂಬುದನ್ನು ಜನರಿಗೆ ಮನಮುಟ್ಟುವಂತೆ ತಿಳಿಸಿದ್ದಾರೆ.

ದೇಶದ ಪ್ರಮುಖ ಟಿವಿ ಚಾನೆಲ್‌ಗಳು ಜನರ ಸಮಸ್ಯೆಗಳಿಗೆ ಕಿವಿಗೊಡದ ಹಿನ್ನೆಲೆಯಲ್ಲಿ ಜನರು ಧ್ರುವ್ ರಾಠಿಯಂತಹ ಹಲವಾರು ಯೂಟ್ಯೂಬರ್ಸ್‌ಗಳನ್ನು ನೆಚ್ಚಿಕೊಂಡು, ಅವರನ್ನು ಫಾಲೋ ಮಾಡುತ್ತಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X