ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ವಯೋ ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಬುಧವಾರ ಬೆಂಗಳೂರಿನ ಕುಮಾರಕೃಪ ಅತಿಥಿ ಗೃಹದಲ್ಲಿ ಬೀಳ್ಕೊಡುಗೆ ನೀಡಲಾಯಿತು.
ಬೀಳ್ಕೊಡುಗೆ ಸಮಾರಂಭದ ಆರಂಭದಲ್ಲಿ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಸಮೂಹ ಛಾಯಾಚಿತ್ರವನ್ನು ಸೆರೆ ಹಿಡಿದ ಬಳಿಕ, ಔತಣಕೂಟ ಆಯೋಜಿಸಲಾಗಿತ್ತು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೂತನವಾಗಿ ನೇಮಕಗೊಂಡಿರುವ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ ಶಾಲಿನಿ ರಜನೀಶ್, ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.