ರೈತರ ಸಾಲ ಮನ್ನಾ ಮಾಡಿ ಪ್ರಾಣ ಉಳಿಸಿದ್ದೆ, ಈಗ ಕಾಂಗ್ರೆಸ್‌ ಕೂಡ ಮನ್ನಾ ಮಾಡಲಿ: ಎಚ್‌ಡಿಕೆ ಆಗ್ರಹ

Date:

Advertisements

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್‌ ನೇತೃತ್ವದಲ್ಲಿ ದೇಶದ ವಿರೋಧ ಪಕ್ಷಗಳು ಸಭೆ ಕರೆದಿರುವ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ಕಾಂಗ್ರೆಸ್‌ಗೆ ಅಧಿಕಾರದ್ದೇ ಚಿಂತೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಎಚ್‌ ಡಿ ಕುಮಾರಸ್ವಾಮಿ, “ನಾನು ಮುಖ್ಯಮಂತ್ರಿ ಆಗಿದ್ದಾಗ, ಆ ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆಗಳು ಆಗಿದ್ದವು. ನನ್ನ ಸರ್ಕಾರ ಬಂದ ಕೂಡಲೇ ರೈತರ ಸಾಲ ಮನ್ನಾ ಮಾಡಿ ಅವರ ಜೀವ ಉಳಿಸುವ ಕೆಲಸ ಮಾಡಿದೆ. ಅದನ್ನೇ ಕಾಂಗ್ರೆಸ್ ಸರ್ಕಾರ ಈಗ ಮಾಡಲಿ. ಕೃಷಿ ಅನುದಾನಕ್ಕೆ ಕತ್ತರಿ ಹಾಕುವ ಬದಲು ರೈತರಿಗೆ ಆರ್ಥಿಕ ನಿರಾಳತೆ ನೀಡಲಿ” ಎಂದು ಹೇಳಿದ್ದಾರೆ.

“ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಚೆಲ್ಲಾಟ, ರೈತರಿಗೆ ಮರಣ ಸಂಕಟ; ಒಂದೆಡೆ ಅನ್ನದಾತರು ಆತ್ಮಹತ್ಯೆಗಳಿಗೆ ಶರಣಾಗುತ್ತಿದ್ದರೆ, ಈ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರದ್ದೇ ಆಟ. ಘಟಬಂಧನ್ ಕಟ್ಟುವುದರಲ್ಲಿ ಇರುವ ಆತುರ, ಅನ್ನ ಕೊಡುವ ರೈತನ ಬದುಕು ಕಟ್ಟುವುದರಲ್ಲಿ ಇಲ್ಲ. ಹೀಗಿದೆ ಇವರ ಗ್ಯಾರಂಟಿ ವರಸೆ” ಎಂದು ಟೀಕಿಸಿದ್ದಾರೆ.

Advertisements

“ಗ್ಯಾರಂಟಿ ಹಾಗೂ ಭಾಗ್ಯಗಳಿಂದ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಮಾಡುತ್ತೇವೆ ಎಂದು ಬೂಸಿ ಬಿಟ್ಟ ಕಾಂಗ್ರೆಸ್, ಅಧಿಕಾರಕ್ಕೆ ಬಂದು ಎರಡೇ ತಿಂಗಳು ಕಳೆಯುವ ಮುನ್ನವೇ ರಾಜ್ಯದಲ್ಲಿ ‘ರೈತರ ಮರಣಮೃದಂಗ’ ಶುರುವಾಗಿದೆ. ಸುಭೀಕ್ಷೆಯ ನಾಡು ಕರ್ನಾಟಕದಲ್ಲಿ ಅನ್ನದಾತರು ಆತ್ಮಹತ್ಯೆಗೆ ಶರಣಾಗುತ್ತಾರೆ ಎಂದರೆ ಇವರು ನಾಚಿಕೆಯಿಂದ ತಲೆ ತಗ್ಗಿಸಬೇಕು” ಎಂದು ವಾಗ್ದಾಳಿ ನಡೆಸಿದ್ದಾರೆ.

“ಹಾವೇರಿ ಜಿಲ್ಲೆ ಒಂದರಲ್ಲಿಯೇ 18 ಮಂದಿ ಅನ್ನದಾತರು ಸಾವಿಗೆ ಶರಣಾಗಿರುವುದು, ಇನ್ನಿತರೆ ಜಿಲ್ಲೆಗಳಲ್ಲಿ ಅದೇ ಸರಣಿ ಶುರುವಾಗಿರುವುದು ತೀವ್ರ ಆಘಾತ ಉಂಟು ಮಾಡಿದೆ. ಈ ಸಾವುಗಳು ಕಳವಳಕಾರಿ. ರೈತರ ಬದುಕಿಗೇ ಗ್ಯಾರಂಟಿ ಕೊಡದ ಈ ಸರ್ಕಾರ ಘೋರ ಪಾಪ ಎಸಗಿ, ಘಟಬಂಧನ್ ಎಂದು ಚೆಲ್ಲಾಟ ಆಡುತ್ತಿದೆ” ಎಂದು ಆರೋಪಿಸಿದ್ದಾರೆ.

“ಗ್ಯಾರಂಟಿ ಎಂದು ಬೀಗಿದ ಕಾಂಗ್ರೆಸ್‌ ಸರ್ಕಾರ, ಆ ಗ್ಯಾರಂಟಿಗಳಲ್ಲಿ ರೈತನ ಪಾಲೇನು? ರಾಜ್ಯಪಾಲರ ಭಾಷಣ, ಬಜೆಟ್ಟಿನಲ್ಲಿ ಈ ಬಗ್ಗೆ ಒಂದು ಪದವನ್ನಾದರೂ ಉಲ್ಲೇಖಿಸಬೇಕಿತ್ತು. ಬಡವರ ಬದುಕಿಗೆ ಗ್ಯಾರಂಟಿ ಕೊಡುತ್ತೇವೆ ಎಂದವರು ಮಾಡಿದ್ದೇನು? ಬಜೆಟ್ಟಿನಲ್ಲಿ ಕೃಷಿ ಅನುದಾನಕ್ಕೆ ಖೋತಾ ಹಾಕಿದ್ದು. ಇವರಾ ರೈತೋದ್ಧಾರಕರು? ನಾಚಿಕೆಗೇಡು” ಎಂದು ವ್ಯಂಗ್ಯವಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಲಿತರಿಗೆ ಭೂಮಿ ಪರಬಾರೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

“ಅನ್ನದಾತ ಬಂಧುಗಳಲ್ಲಿ ಹೃದಯಪೂರ್ವಕ ಮನವಿ. ದಯಮಾಡಿ ಯಾರೂ ಆತುರದ ನಿರ್ಧಾರ ಕೈಗೊಳ್ಳುವುದು ಬೇಡ. ಒಂದು ಜೀವಹಾನಿ ಆ ಕುಟುಂಬವನ್ನು ಬೀದಿಗೆ ತಂದು ನಿಲ್ಲಿಸುತ್ತದೆ. ಹೋರಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ.
ನಿಮ್ಮ ಜತೆ ನಾನಿದ್ದೇನೆ. ದಯವಿಟ್ಟು ಯಾರೂ ಜೀವಕ್ಕೆ ಕುತ್ತು ತಂದುಕೊಳ್ಳುವುದು ಬೇಡ. ಸರ್ಕಾರ ತಕ್ಷಣ ಇತ್ತ ಗಮನ ಹರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X