ಬರಗಾಲದ ನಷ್ಟ ಭರಿಸುವ ಶಕ್ತಿ ಸರ್ಕಾರಕ್ಕೆ ಇಲ್ಲ, ಕೇಂದ್ರ ಸ್ಪಂದಿಸಬೇಕು: ಸಿಎಂ ಸಿದ್ದರಾಮಯ್ಯ

Date:

  • ಕೃಷಿ ವಿದ್ಯಾಲಯ ಕೇವಲ ಕೃಷಿ ಪದವೀಧರರನ್ನು ತಯಾರು ಮಾಡುವ ಸಂಸ್ಥೆಯಲ್ಲ
  • ಹಸಿರು ಕ್ರಾಂತಿ ನಿರಂತರವಾಗಿ ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಸಿರು ಕ್ರಾಂತಿ ನಿರಂತರವಾಗಿ ಆಗಬೇಕು. ಇದಾಗಬೇಕಾದರೆ ಹೊಸ ತಳಿಗಳು, ಹೊಸ ಔಷಧ, ಮಣ್ಣಿನ ಫಲವತ್ತತೆ, ತಂತ್ರಜ್ಞಾನ, ರೈತರಿಗೆ ನ್ಯಾಯಯುತ ಬೆಲೆ, ಆಹಾರ ಸಂಗ್ರಹಣೆಗೆ ಗೋದಾಮುಗಳು ಆಗಬೇಕು ಇದ್ದಾಗ ಮಾತ್ರ ಸುಸ್ಥಿರವಾದ ಕೃಷಿ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಕೆವಿಕೆ ಆವರಣದಲ್ಲಿ ಕೃಷಿ ಮೇಳ ಉದ್ಘಾಟಿಸಿ ಮತ್ತು ಕೃಷಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, “ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ರಾಜ್ಯದಲ್ಲಿ ಸ್ಥಾಪನೆಗೊಂಡ ಮೊದಲ ಕೃಷಿ ವಿಶ್ವವಿದ್ಯಾಲಯ. 6 ದಶಕಗಳಿಂದ ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ರಾಜ್ಯದ ರೈತರಿಗೆ ಕೃಷಿಯಲ್ಲಿ ಆಗಿರುವ ಆವಿಷ್ಕಾರ ಹಾಗೂ ಬೆಳವಣಿಗೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಾ ಬಂದಿದೆ” ಎಂದರು.

“ಕೃಷಿಕರಿಗೆ ವಿಶ್ವವಿದ್ಯಾಲಯದಲ್ಲಿ ಆಗುವ ತಂತ್ರಜ್ಞಾನದ ಅಭಿವೃದ್ಧಿ, ಹೊಸ ತಳಿಗಳು, ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವುದು ಮುಂತಾದವನ್ನು ಜನರಿಗೆ ತಿಳಿಸುವ ಕೆಲಸವನ್ನು ಮಾಡಬೇಕು. ಕೃಷಿ ವಿದ್ಯಾಲಯ ಕೇವಲ ಕೃಷಿ ಪದವೀಧರರನ್ನು ತಯಾರು ಮಾಡುವ ಸಂಸ್ಥೆಯಲ್ಲ. ಕೃಷಿ ವಿದ್ಯಾರ್ಥಿಗಳನ್ನು ತಯಾರಿಸುವ ಜೊತೆಗೆ ಸಂಶೋಧನೆಗಳಿಗೆ ಒತ್ತು ನೀಡಬೇಕು” ಎಂದು ಹೇಳಿದರು.

ಕಡಿಮೆ ನೀರಿನಲ್ಲಿಯೂ ಬೆಳೆಯುವಂಥ ತಳಿಗಳು ಅಗತ್ಯ

“ಕೃಷಿ ವಿವಿ 5 ಹೊಸ ತಳಿಗಳನ್ನು ಬಿಡುಗಡೆ ಮಾಡಿರುವುದು ಸಂತೋಷ. ತಳಿಗಳು ನೀರು ಕಡಿಮೆಯಿದ್ದಾಗಲೂ ಬೆಳೆಯುವುದು ಸಾಧ್ಯವಿರಬೇಕು. ರೋಗ ನಿರೋಧಕ ಶಕ್ತಿ ಇರುವಂತೆ ಆಗಬೇಕು ಬಹಳಷ್ಟು ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಳೆ, ಬೆಳೆ ಇಲ್ಲದೇ, ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಕಷ್ಟದಲ್ಲಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಬರಗಾಲಕ್ಕೆ ತುತ್ತಾಗುವ ಸ್ಥಿತಿ ಇದೆ. ಕೃಷಿ ಇರುವ ಕಡೆ ಬರಗಾಲ ಉಂಟಾಗಿದೆ. ಮೊದಲು 4-5 ವರ್ಷಗಳಿಗೊಮ್ಮೆ ಬರಗಾಲ ಬರುತ್ತಿತ್ತು. ಕೆಲವೊಮ್ಮೆ ಭೀಕರ ಬರಗಾಲ ಬರುತ್ತದೆ. ಈ ಬಾರಿ 223 ತಾಲ್ಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಲಾಗಿದೆ” ಎಂದರು.

“ಬೆಳೆಯ ನಷ್ಟವನ್ನು ತುಂಬಿಕೊಡಲು ಸಾಧ್ಯವಾಗುವುದಿಲ್ಲ. ನಷ್ಟ ಭರಿಸುತ್ತೇವೆ ಎಂದರೆ ಅದು ರೈತರನ್ನು ತಪ್ಪು ದಾರಿಗೆ ಎಳೆದಂತಗುತ್ತದೆ. ಸುಮಾರು 33 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ. ಎನ್.ಡಿ.ಆರ್‌ ಎಫ್ ಮಾರ್ಗಸೂಚಿಯ ಪ್ರಕಾರ ಸರ್ಕಾರ 17900 ಕೋಟಿ ರೂ.ಗಳ ಪರಿಹಾರ ಕೇಳಿದೆ. ಕೇಂದ್ರ ಸರ್ಕಾರ ಸೂಕ್ತವಾಗಿ ಸ್ಪಂದಿಸಬೇಕು. 16 ಸಾವಿರ ಕೋಟಿ ರೂ.ಗಳಷ್ಟು ರೈತರಿಗೆ ನಷ್ಟವಾಗುತ್ತದೆ. ಬೆಳೆವಿಮೆ ಮಾಡಿದ್ದರೂ ಪೂರ್ಣ ನಷ್ಟ ಭರಿಸಲು ಸಾಧ್ಯವಿಲ್ಲ. ಇಂಥ ಪರಿಸ್ಥಿತಿಯಲ್ಲಿ ರೈತರನ್ನು ಕಾಪಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೀನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆ : ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ

ಈಗಷ್ಟೇ, ಕೊರೊನಾ ಸೋಂಕಿನ ಅಬ್ಬರದಿಂದ ನಿರಾಳರಾಗಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ...

ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಕಲಬುರಗಿ | ಸಕಾಲ ಅರ್ಜಿ ವಿಲೇವಾರಿ : ಕಲಬುರಗಿಗೆ ರಾಜ್ಯದಲ್ಲೇ ನಂಬರ್‌ 1 ಸ್ಥಾನ

ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್ ತಿಂಗಳ ಅರ್ಜಿ...