ರೈತರ ಸಾಲದ ಸಮಸ್ಯೆ: ಪರಿಹಾರ ಕಂಡುಕೊಳ್ಳಲು ವಿಶೇಷ ಸಭೆ ಕರೆಯುವುದಾಗಿ ಸಿಎಂ ಭರವಸೆ

Date:

Advertisements
  • ಶಾಸಕ ಬಿ ಆರ್ ಪಾಟೀಲ, ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಸಿಎಂ ಭೇಟಿಯಾದ ರೈತ ನಿಯೋಗ
  • ರೈತರ ಸಮಸ್ಯೆ ಬಗೆಹರಿಸಿ, ಅನುಕೂಲ ಮಾಡಿಕೊಡುವಂತೆ ಸಿಎಂ ಸಿದ್ದರಾಮಯ್ಯಗೆ ರೈತರ ಮನವಿ

ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್‌ ಹಾಗೂ ಪ್ರವರ್ತಕ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ ಮತ್ತು ದರ್ಶನ್‌ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರೈತ ಮುಖಂಡರ ನಿಯೋಗದೊಂದಿಗೆ ಈ ಸಮಸ್ಯೆ ಕುರಿತು ಚರ್ಚೆ ನಡೆಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆ ಸಾಲ ಪಡೆದ ರೈತರು, ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತದಂತಹ ಸಮಸ್ಯೆಗಳಿಂದಾಗಿ ಸಕಾಲದಲ್ಲಿ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬ್ಯಾಂಕಿನ ಸಿಬ್ಬಂದಿ ಸಾಲ ಮರುಪಾವತಿಗೆ ನೋಟಿಸ್, ಲೀಗಲ್‌ ನೋಟಿಸ್‌ಗಳನ್ನು ಕಳುಹಿಸಿ, ಅದರ ವೆಚ್ಚವನ್ನೂ ರೈತರ ಮೇಲೆಯೇ ಹಾಕುತ್ತಿದ್ದಾರೆ. ಇಂತಹ ಕ್ರಮಗಳಿಂದಾಗಿ 30,000 ರೂ. ಮೊತ್ತದ ಸಾಲಕ್ಕೆ 2.8 ಲಕ್ಷ ರೂ. ಪಾವತಿಸುವಂತೆ, 3 ಲಕ್ಷ ರೂ. ಸಾಲಕ್ಕೆ 3೦ ಲಕ್ಷ ರೂ. ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಪ್ರತಿಭಟಿಸಿ, 8 ತಿಂಗಳಿನಿಂದ ರೈತ ಹೋರಾಟಗಾರರು ಧರಣಿ ನಡೆಸುತ್ತಿದ್ದಾರೆ. ರೈತರು ಓ.ಟಿ.ಎಸ್. ಅಡಿ ಶೇ. 50 ರಷ್ಟು ಅಸಲು ಪಾವತಿಸಲು ಸಿದ್ಧರಿದ್ದಾರೆ. ರೈತರ ಸಮಸ್ಯೆ ಬಗೆಹರಿಸಿ, ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕ್‌ ಅಧಿಕಾರಿಗಳು, ಬ್ಯಾಂಕಿನ ಆಡಳಿತ ಮಂಡಳಿ ಇದಕ್ಕೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕಿನಲ್ಲಿ 6,500 ಕೋಟಿ ರೂ. ಸುಸ್ತಿ ಸಾಲವಿದ್ದು, ಅದರಲ್ಲಿ 5,000 ಕೋಟಿ ರೂ. ಬೆಳೆ ಸಾಲವಾಗಿದೆ ಎಂದರು. ಬ್ಯಾಂಕಿನ ಅಧ್ಯಕ್ಷರು ಗೈರು ಹಾಜರಾದ ಕುರಿತು ಮುಖ್ಯಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿಗಳು, ರೈತರ ಕುರಿತು ಮಾನವೀಯತೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರಲ್ಲದೆ, ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಂಬಂಧಿಸಿದ ಬ್ಯಾಂಕರುಗಳ ಸಭೆ ನಡೆಸಿದ ಪರಿಹಾರ ಸೂತ್ರ ಕಂಡುಕೊಂಡ ನಂತರ ಮತ್ತೊಮ್ಮೆ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.

ಸಭೆಯಲ್ಲಿ ಕೃಷಿ ತಜ್ಞ ಡಾ. ಪ್ರಕಾಶ್‌ ಕಮ್ಮರಡಿ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ, ಮಾಧವರೆಡ್ಡಿ, ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಝಾನ್ಸಿಲಕ್ಷ್ಮಿ, ಟಿ.ಯಶವಂತ್, ಅಲಿಬಾಬ ಸೇರಿ ಹಲವು ರೈತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X