5ನೇ ದಿನಕ್ಕೆ ಕಾಲಿಟ್ಟ ರೈತರ ‘ದೆಹಲಿ ಚಲೋ’; ಬಿಜೆಪಿ ನಾಯಕರ ಮನೆಗಳ ಎದುರು ಬಿಕೆಯು ಪ್ರತಿಭಟನೆ

Date:

Advertisements

ಎಂಎಸ್‌ಪಿ ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ರೈತರು ನಡೆಸುತ್ತಿರುವ ‘ದೆಹಲಿ ಚಲೋ’ ಪ್ರತಿಭಟನೆ ಮತ್ತು ಟ್ರ್ಯಾಕ್ಟರ್‌ ರ್‍ಯಾಲಿ 5ನೇ ದಿನಕ್ಕೆ ಕಾಲಿಟ್ಟಿದೆ. ರೈತರು ದೆಹಲಿಗೆ ತೆರಳದಂತೆ ತಡೆಯಲು ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರಗಳು ರೈತರ ಮೇಲೆ ದೌರ್ಜನ್ಯ ನಡೆಸುತ್ತಿದೆ. ಬಿಜೆಪಿ ಸರ್ಕಾರಗಳ ವಿರುದ್ಧ ಶುಕ್ರವಾರ ಗ್ರಾಮೀಣ್‌ ಬಂದ್‌ ಮಾಡಲಾಗಿದ್ದು, ಶನಿವಾರ ಬಿಜೆಪಿ ನಾಯಕರ ನಿವಾಸದ ಎದುರು ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ಮುಂದಾಗಿವೆ.

ಭಾರತಿ ಕಿಸಾನ್ ಯೂನಿಯನ್ (ಏಕ್ತಾ ಉಗ್ರನ್) ಶನಿವಾರ ಪಂಜಾಬ್‌ನಲ್ಲಿ ಮೂವರು ಹಿರಿಯ ಬಿಜೆಪಿ ನಾಯಕರ ನಿವಾಸಗಳ ಎದುರು ಧರಣಿ ನಡೆಸಲಿದೆ. ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಬಿಜೆಪಿಯ ಪಂಜಾಬ್ ಘಟಕದ ಮುಖ್ಯಸ್ಥ ಸುನೀಲ್ ಜಾಖರ್ ಮತ್ತು ಬಿಜೆಪಿ ಹಿರಿಯ ನಾಯಕ ಕೇವಲ್ ಸಿಂಗ್ ಧಿಲ್ಲೋನ್ ಅವರ ಮನೆಗಳ ಹೊರಗೆ ಧರಣಿ ನಡೆಸಲಿದೆ. ಜೊತೆಗೆ, ರಾಜ್ಯದ ಟೋಲ್ ಪ್ಲಾಜಾಗಳಲ್ಲಿಯೂ  ಪ್ರತಿಭಟನೆ ನಡೆಸಲು ಸಂಘಟನೆ ಮುಂದಾಗಿದೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕರೆ ನೀಡಿದ್ದ ‘ದೆಹಲಿ ಚಲೋ’ ಅಡಿಯಲ್ಲಿ ಫೆಬ್ರವರಿ 13ರಿಂದ ಸಾವಿರಾರು ರೈತರು ದೆಹಲಿಯತ್ತ ಹೊರಟ್ಟಿದ್ದಾರೆ. ಅವರನ್ನು ತಡೆಯಲು ಹರಿಯಾಣ ಪೊಲೀಸರು ರೈತರ ಮೇಲೆ ಜಲ ಫಿರಂಗಿ, ಅಶ್ರುವಾಯು ಸಿಡಿಸಿದ್ದಾರೆ. ರಸ್ತೆಗಳಿಗೆ ಬ್ಯಾರಿಕೇಡ್‌ಗಳು, ಕಬ್ಬಿಣದ ದೊಡ್ಡ ಮೊಳೆಗಳು, ಸಿಮೆಂಟ್‌ ಬ್ಲಾಕ್‌ಗಳನ್ನು ಹಾಕಿದ್ದಾರೆ. ರೈತರು ಹರಿಯಾಣ ಗಡಿಯಲ್ಲಿಯೇ ಎರಡು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ದೆಹಲಿಯತ್ತ ಸಾಗಲು ಯತ್ನಿಸುತ್ತಿದ್ದಾರೆ.

Advertisements

ರೈತರೊಂದಿಗೆ ಕೇಂದ್ರ ಸಚಿವ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ ರೈ ಅವರು ನಾಲ್ಕನೇ ಸುತ್ತಿನ ಮಾತುಕತೆಗೆ ಭಾನುವಾರ ಸಭೆ ನಿಗದಿ ಮಾಡಿದ್ದಾರೆ. ಈ ಹಿಂದೆ, ಫೆಬ್ರವರಿ 8, 12 ಮತ್ತು 15 ರಂದು ಸಭೆಗಳು ನಡೆದಿವೆ. ಆದರೆ, ರೈತರ ಬೇಡಿಕೆಗಳನ್ನು ಈಡೇರಿಸುವ ಯಾವುದೇ ಕ್ರಮಕ್ಕೆ ಸರ್ಕಾರ ಮುಂದಾಗದ ಕಾರಣ, ಸಭೆಗಳು ವಿಫಲವಾಗಿವೆ.

ಈ ಸುದ್ದಿ ಓದಿದ್ದೀರಾ?: ತೆಲಂಗಾಣದಲ್ಲಿ ಜಾತಿ ಗಣತಿ; ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಹರಿಯಾಣದ ಶಂಭು ಗಡಿಯಲ್ಲಿ ರೈತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 63 ವರ್ಷದ ರೈತ ಜಿಯಾನ್ ಸಿಂಗ್‌ ಶುಕ್ರವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ ಪ್ರತಿಭಟನಾನಿರತ ರೈತರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಎಂಎಸ್‌ಪಿಗೆ ಕಾನೂನು ಖಾತರಿಯ ಜೊತೆಗೆ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ, ವಿದ್ಯುತ್ ದರ ಹೆಚ್ಚಳಕ್ಕೆ ಕಡಿವಾಣ, ರೈತರ ವಿರುದ್ಧ ದಾಖಲಾಗಿರುವ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು, ಭೂಸ್ವಾಧೀನ ಕಾಯಿದೆ-2013ರ ಮರುಸ್ಥಾಪನೆ ಹಾಗೂ 2021ರ ಲಖೀಂಪುರ ಖೇರಿ ಹಿಂಸಾಚಾರ ಸಂತ್ರಸ್ತರಿಗೆ ‘ನ್ಯಾಯ’ ಮತ್ತು ‘ಪರಿಹಾರ’ ನೀಡಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X