ರೈತರ ‘ದೆಹಲಿ ಚಲೋ’ಗೆ ಬೆದರಿದ ಹರಿಯಾಣ ಬಿಜೆಪಿ ಸರ್ಕಾರ: ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲು ಆದೇಶ

Date:

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ 13ರಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ದೆಹಲಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಈ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹರಿಯಾಣ ರಾಜ್ಯದ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಧ್ವನಿ ಕರೆಗಳನ್ನು ಹೊರತುಪಡಿಸಿ ಮೊಬೈಲ್ ಇಂಟರ್‌ನೆಟ್ ಸೇವೆ, ಬಲ್ಕ್ ಎಸ್‌ಎಂಎಸ್ ಮತ್ತು ಮೊಬೈಲ್ ನೆಟ್‌ವರ್ಕ್‌ ಕಂಪೆನಿಗಳು ಒದಗಿಸುವ ಎಲ್ಲಾ ಡಾಂಗಲ್ ಸೇವೆಗಳನ್ನು ಸ್ಥಗಿತಗೊಳಿಸಲು ಮುಂದಾಗಿದೆ.

ಈ ಬಗ್ಗೆ ಹರಿಯಾಣದ ಬಿಜೆಪಿ ಸರ್ಕಾರವು ಆದೇಶ ಹೊರಡಿಸಿದ್ದು, ಈ ಆದೇಶವು ಫೆಬ್ರವರಿ 11ರ ಬೆಳಗ್ಗೆ 6 ರಿಂದ ಫೆಬ್ರವರಿ 13ರ ರಾತ್ರಿ 12ರವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸೋಷಿಯಲ್ ಮೀಡಿಯಾಗಳ ಮೂಲಕ ತಪ್ಪು ಮಾಹಿತಿ ಮತ್ತು ವದಂತಿಗಳನ್ನು ಹರಡುವುದನ್ನು ತಡೆಯಲು ಈ ಕ್ರಮ ಕೈಗೊಂಡಿರುವುದಾಗಿ ಬಿಜೆಪಿ ಸರ್ಕಾರ ಆದೇಶದಲ್ಲಿ ಸಮಜಾಯಿಷಿ ನೀಡಿದೆ.

ಯಾಕೆ ದೆಹಲಿ ಚಲೋ ಅಂದೋಲನ?
ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನಿಗೆ ಮತ್ತು ಸ್ವಾಮಿನಾಥನ್ ಶಿಫಾರಸುಗಳ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ 13ರಂದು ದೆಹಲಿ ಚಲೋ ಅಂದೋಲನ ಹಮ್ಮಿಕೊಳ್ಳಲಾಗಿದೆ.

ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರವನ್ನು ಒತ್ತಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಈ ಚಳವಳಿಗೆ ಕರೆ ನೀಡಿದೆ. ದೆಹಲಿ ಚಲೋ ಆಂದೋಲನದಲ್ಲಿ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಭಾಗವಹಿಸುವ ಸಾಧ್ಯತೆಯಿದೆ.

ಹರಿಯಾಣ ಪೊಲೀಸರಿಂದ ಎಚ್ಚರಿಕೆ

ರೈತರ ಪ್ರತಿಭಟನೆಗೆ ಯಾರೂ ಅನುಮತಿ ಪಡೆದಿಲ್ಲ. ಅನುಮತಿಯಿಲ್ಲದೆ ಯಾವುದೇ ವ್ಯಕ್ತಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸಿದ್ದಲ್ಲಿ ಸಾರ್ವಜನಿಕ ಅಸ್ತಿ ಹಾನಿ ತಡೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅಂಬಾಲಾ ಎಸ್‌ಪಿ ಜಶನ್‌ದೀಪ್ ಸಿಂಗ್‌ ರಾಂಧವಾ ಎಚ್ಚರಿಕೆ ನೀಡಿದ್ದಾರೆ.

ಹರಿಯಾಣ ಪೊಲೀಸರು ರೈತರು ದೆಹಲಿಗೆ ಪ್ರವೇಶಿಸದಂತೆ ತಡೆಯಲು ಭಾರೀ ಕಸರತ್ತು ನಡೆಸುತ್ತಿದ್ದು, ರಸ್ತೆಗೆ ಅಡ್ಡಲಾಗಿ ಟ್ರಕ್‌ ಮತ್ತು ಕ್ರೇನ್‌ಗಳನ್ನು ಬಳಸಿಕೊಂಡು ಸಿಮೆಂಟ್‌ನ ಬ್ಯಾರಿಕೇಡ್‌ಗಳನ್ನು ಅಳವಡಿಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ...

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಪ್ರಕರಣ ಮುಚ್ಚಿಹಾಕಲು ಸರ್ಕಾರದಿಂದ ನಿರ್ದೇಶನ: ಆರ್‌ ಅಶೋಕ್‌ ಆರೋಪ

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ...

ಜೂ.15ರೊಳಗೆ ಮುಖ್ಯ ಕಚೇರಿಯಲ್ಲಿನ ಒತ್ತುವರಿ ಜಾಗ ಖಾಲಿ ಮಾಡಿ: ಎಎಪಿಗೆ ಸುಪ್ರೀಂ ಕೋರ್ಟ್ ಆದೇಶ

ಎಎಪಿ ಪಕ್ಷ ತನ್ನ ಮುಖ್ಯ ಕಚೇರಿಯಲ್ಲಿ ದೆಹಲಿ ಹೈಕೋರ್ಟ್‌ನ ಜಾಗವನ್ನು ಒತ್ತುವರಿ...

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ...