ರೈತರ ಉತ್ಪಾದನೆಗೆ ಅವರೇ ಬೆಲೆ ನಿಗದಿ ಮಾಡುವಂತಾಗಬೇಕು: ಸಿಎಂ ಸಿದ್ದರಾಮಯ್ಯ

Date:

Advertisements

ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗದಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿ, “ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.
ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ ಅಷ್ಟೆ” ಎಂದರು.

“GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು. ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ‘ಬೆಳೆ ಪರಿಹಾರ’ ಪರಿಕಲ್ಪನೆಯೇ ಸರ್ಕಾರದಲ್ಲಿ ಇಲ್ಲ, ರಾಜ್ಯಕ್ಕೆ ಬೇಕಿದೆ ಹೊಸ ಕಾಯ್ದೆ – ಕಾನೂನು

ಕೆ.ಆರ್.ಪೇಟೆ ರಸ್ತೆ, ಕೆರೆ, ಸೇತುವೆಗೆ ಹಣ ಕೊಡ್ತೀನಿ

“ಕೆ.ಆರ್.ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀನಿ. ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ” ಎಂದರು.

“ನಾವು ಒಂದು ಕಡೆ ರೈತರಿಗೆ ಶಕ್ತಿ ತುಂಬುತ್ತಿದ್ದೇವೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗುತ್ತಿದೆ. ರಾಜ್ಯದ ರೈತರಿಗೆ ನಬಾರ್ಡ್ ನಿಂದ ಕೊಡುವ ಸಬ್ಸಿಡಿ ಸಾಲದ ಪ್ರಮಾಣವನ್ನು ಶೇ58 ರಷ್ಟು ಕಡಿತಗೊಳಿಸಿದೆ. ಬರೀ ಭಾಷಣ ಮಾಡಿದರೆ ರೈತರ ಬದುಕು ಉದ್ದಾರ ಆಗಲ್ಲ” ಎಂದು ಬಿಜೆಪಿಯ ಭಾಷಣದ ನೀತಿಯನ್ನು ಟೀಕಿಸಿದರು‌.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X