ರೈತ ಹೋರಾಟದ ಫಲ | ಎಲ್ಲ ಕೃಷಿ ಉತ್ಪನ್ನಗಳಿಗೆ ‘ಎಂಎಸ್‌ಪಿ’ ಘೋಷಿಸಿದ ಕೇಂದ್ರ ಸರ್ಕಾರ

Date:

ನಿರಂತರವಾಗಿ ನಡೆಯುತ್ತಿರುವ ರೈತ ಹೋರಾಟವು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡು ಬಗ್ಗುವಂತೆ ಮಾಡಿದೆ. ಇಂದು (ಶುಕ್ರವಾರ) ರೈತರು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿದ್ದ ಸಮಯದಲ್ಲೇ ಕೇಂದ್ರ ಸರ್ಕಾರವು ಎಲ್ಲ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಿ ಖರೀದಿಸುವುದಾಗಿ ಘೋಷಿಸಿದೆ.

- Advertisement -

ರಾಜ್ಯಸಭೆಯ ಕಲಾಪದಲ್ಲಿ ಪ್ರಶ್ನೋತ್ತರದ ವೇಳೆ ರೈತರು ಬೆಳೆದ ಬೆಳೆಗಳಿಗೆ ಎಂಎಸ್‌ಪಿ ನೀಡುವ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ”ರೈತರ ಎಲ್ಲ ಕೃಷಿ ಉತ್ಪನ್ನಗಳನ್ನು ಎಂಎಸ್‌ಪಿಯಲ್ಲಿ ಖರೀದಿಸಲಾಗುವುದು ಎಂದು ಸದನಕ್ಕೆ ನಾನು ಭರವಸೆ ನೀಡಲು ಬಯಸುತ್ತೇನೆ. ಇದು ಮೋದಿ ಸರ್ಕಾರ ಮತ್ತು ಮೋದಿಯವರ ಭರವಸೆಯನ್ನು ಈಡೇರಿಸುವ ಗ್ಯಾರಂಟಿಯಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

”2019ರಿಂದ ರೈತರಿಗೆ ಉತ್ಪಾದನಾ ವೆಚ್ಚದ ಮೇಲೆ ಶೇ.50ರಷ್ಟು ಲಾಭವನ್ನು ದೊರೆಯುವಂತೆ ಎಂಎಸ್‌ಪಿ ನಿಗದಿ ಮಾಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಮೋದಿ ಸರ್ಕಾರವು ರೈತರಿಗೆ ಲಾಭದಾಯಕ ಬೆಲೆಗಳನ್ನು ನೀಡುತ್ತಿದೆ. ಕಳೆದ ಮೂರು ವರ್ಷಗಳಿಂದ ಭತ್ತ, ಜೋಳ, ಗೋಧಿ ಮತ್ತು ಸೋಯಾಬೀನ್ಅನ್ನು ಉತ್ಪಾದನಾ ವೆಚ್ಚಕ್ಕಿಂತ 50%ರಷ್ಟು ಹೆಚ್ಚು ಬೆಲೆಗೆ ಖರೀದಿಸಲಾಗಿದೆ” ಎಂದು ಚೌಹಾಣ್‌ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ದೆಹಲಿ ಚಲೋ | ಪೊಲೀಸರ ತಡೆಗೋಡೆ ಬೇಧಿಸಲು ಯತ್ನಿಸಿದ ರೈತರ ಮೇಲೆ ಅಶ್ರುವಾಯು ಪ್ರಯೋಗ

ಇದೇ ವೇಳೆ, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಚೌಹಾಣ್, “ನಮ್ಮ ಸ್ನೇಹಿತರು ಅಧಿಕಾರದಲ್ಲಿದ್ದಾಗ, ಅವರು ಎಂಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದರು. ವಿಶೇಷವಾಗಿ, ಉತ್ಪನ್ನದ ವೆಚ್ಚಕ್ಕಿಂತ 50% ಹೆಚ್ಚು ಬೆಲೆಯೊಂದಿಗೆ ಎಂಎಸ್‌ಪಿ ನಿಗದಿ ಪಡಿಸಲಾಗದು ಎಂದಿದ್ದರು. ಆ ಬಗ್ಗೆ ನನ್ನ ಬಳಿ ದಾಖಲೆ ಇದೆ. ಅವರು ಎಂದಿಗೂ ರೈತರನ್ನು ಗೌರವಿಸಿಲ್ಲ” ಎಂದು ಆರೋಪಿಸಿದ್ದಾರೆ.

ಎಂಎಸ್‌ಪಿ, ಕೃಷಿ ಸಾಲ ಮನ್ನಾ ಸೇರಿದಂತೆ ಕೇಂದ್ರ ಸರ್ಕಾರವೇ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಂಜಾಬ್ ಮತ್ತು ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದರು. ಶುಕ್ರವಾರ ದೆಹಲಿಯತ್ತ ರೈತರು ಹೊರಟಿದ್ದರು. ಅವರನ್ನು ಅವರನ್ನು ಪಂಜಾಬ್-ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ. ರಸ್ತೆಗೆ ಬೃಹತ್ ಮುಳ್ಳು ತಂತಿ ಬೇಲಿಗಳನ್ನು ಹಾಕಿದ್ದಾರೆ. ಮುಳ್ಳು ತಂತಿಯ ತಡೆಗೋಡೆಯನ್ನು ಭೇದಿಸಿ ಮುನ್ನುಗ್ಗಲು ರೈತರು ಮುಂದಾಗಿದ್ದು, ಅವರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಶಂಭು ಗಡಿಯಲ್ಲಿಯೇ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...