ತೋಟಗಾರಿಕೆ ಪಿತಾಮಹ ಡಾ. ಎಂ ಎಚ್ ಮರೀಗೌಡ ಅವರ ಕಾಲದಲ್ಲಿ ಕರ್ನಾಟಕದಲ್ಲಿ ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಇತ್ತು. ಸರ್ಕಾರಿ ಅಧಿಕಾರಿಯಾಗಿ ನಿಷ್ಠೆ ಹಾಗೂ ಬದ್ಧತೆಯಿಂದ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಅವರು ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್.ಮರೀಗೌಡ ಪ್ರತಿಮೆಯನ್ನು ಮೈಸೂರಿನಲ್ಲಿ ಬುಧವಾರ ಅನಾವರಣಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೈಸೂರಿನ ಕೇಂದ್ರಸ್ಥಳದಲ್ಲಿರುವ ಕರ್ಜನ್ ಪಾರ್ಕ್‌ನಲ್ಲಿ ಡಾ.ಎಂ.ಎಚ್.ಮರೀಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಡಾ.ಎಂ.ಎಚ್.ಮರೀಗೌಡರ ಸಾಧನೆಗಳು ಎಲ್ಲರಿಗೂ ಸ್ಪೂರ್ತಿ ತರಲಿದೆ” ಎಂದರು
ಮಾಹಿತಿ ಪಡೆದು ಪರಿಶೀಲನೆ
ಹುಲಿ ಉಗುರು ಧರಿಸಿದ ಬಗ್ಗೆ ನಟರಾದ ದರ್ಶನ್ ಹಾಗೂ ಜಗ್ಗೇಶ್ ಅವರ ಪ್ರಕರಣ ದಾಖಲಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆದು ಪರಿಶೀಲಿಸಲಾಗುವುದು ಎಂದು ತಿಳಿಸಿದರು.