ಹೆದರುವ ಗುಣ ಸಿದ್ದರಾಮಯ್ಯ ಅವರ ರಕ್ತದಲ್ಲೇ ಇಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು ಬಂದಿರುವ ಅವರು ಹೆದರುವವರಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ಕಲಬುರಗಿಯಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಎಲ್ಲಿ ಹೆದರಿದ್ದಾರೆ? ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು. ನಾವು ಈ ನೆಲದ ಕಾನೂನಿಗೆ ಗೌರವ ನೀಡುತ್ತೇವೆ. ಸಿಎಂ ಅವರ ತಪ್ಪು ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ತನಿಖೆಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಐದು ವರ್ಷವೂ ಸಿದ್ದರಾಮಯ್ಯ ಐದು ವರ್ಷದ ಅವಧಿ ಪೂರ್ಣಗೊಳಿಸುತ್ತಾರೆಯೇ ಎಂದು ಪ್ರಶ್ನಿಸಿದಾಗ “ನಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ 10 ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತದೆ” ಎಂದರು.

ರಾಜ್ಯಪಾಲರು ದಲಿತ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಕೇಳಿದಾಗ “ಅವರನ್ನು ರಾಜ್ಯಪಾಲರ ಹುದ್ದೆಗೆ ಕೂರಿಸಿರುವುದು ಸಂವಿಧಾನವೇ ಹೊರತು ಜಾತಿಯಲ್ಲ” ಎಂದರು.

ರಾಜ್ಯಪಾಲರನ್ನು ನಿಂದಿಸಿದವರ ಮೇಲೆ ಪೊಲೀಸರು ಸ್ವಯಂಪ್ರೇರಿತರಾಗಿ ಎಸ್‌ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎನ್ನುವ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಕಲಬುರ್ಗಿಯಲ್ಲಿ ನಿರ್ಮಾಣವಾಗಿರುವ ಹೊಸ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಬಂದು ಸೇರಿಸಲು ಹೇಳಿ” ಎಂದು ವ್ಯಂಗ್ಯವಾಡಿದರು.

“2011ರಲ್ಲಿ ಯಡಿಯೂರಪ್ಪ ಅವರನ್ನು ಜೈಲಿಗೆ ಹಾಕಿಸಲಾಯಿತು ಈಗ ಅದೇ ಸನ್ನಿವೇಶ ಸೃಷ್ಟಿಯಾಗಿದೆ ಎನ್ನುವ ಬಿಜೆಪಿ ಸಾಮಾಜಿಕ ಜಾಲತಾಣದ ಪೋಸ್ಟಿನ ಬಗ್ಗೆ ಕೇಳಿದಾಗ, “ಅವರನ್ನು ಜೈಲಿಗೆ ಹಾಕಿಸಿದ್ದು ಕಾಂಗ್ರೆಸ್ ಅಲ್ಲ. ಇದೇ ದೇವೇಗೌಡರು, ಕುಮಾರಸ್ವಾಮಿ ನಾವಲ್ಲ” ಎಂದು ಹೇಳಿದರು.

ಕುಮಾರಸ್ವಾಮಿ ಅವರ ವಿರುದ್ದ ಲೋಕಾಯುಕ್ತ ದೋಷಾರೋಪ ಪಟ್ಟಿ ಸಲ್ಲಿಕೆಗೆ ರಾಜ್ಯಪಾಲರ ಅನುಮತಿ ಕೇಳಿರುವ ವಿಚಾರದ ಬಗ್ಗೆ ಪ್ರಶ್ನಿಸಿದಾಗ, “ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ಸ್ವತಃ ನನ್ನ ಕಣ್ಣಿನಿಂದ ನೋಡಬೇಕು. ಯಾವುದಾದರೂ ದಾಖಲೆ ಇದ್ದರೆ ನೀಡಿ. ನಾನು ಮಾಧ್ಯಮದವರನ್ನು ಆಶ್ರಯಿಸಲು ಆಗುವುದಿಲ್ಲ” ಎಂದರು.

ಸಿಎಂ ದೆಹಲಿ ಭೇಟಿಯ ಬಗ್ಗೆ ಕೇಳಿದಾಗ “ಹೈಕಮಾಂಡಿಗೆ ವಾಸ್ತವಾಂಶ ತಿಳಿಸಬೇಕು ಎಂದು ಇಬ್ಬರೂ ಮಾತನಾಡಿಕೊಂಡಿದ್ದೆವು. ಅದಕ್ಕೆ ದೆಹಲಿಗೆ ಇಬ್ಬರೂ ತೆರಳೋಣ ಎಂದು ಮಾತುಕತೆ ನಡೆಸಿದ್ದೇವೆ” ಎಂದರು.

ಬಿಜೆಪಿ ಹೊರತಾದ ಪಕ್ಷಗಳು ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪದ ವಿರುದ್ದ ಹೋರಾಟ ರೂಪಿಸಲು ಎಲ್ಲರನ್ನು ಒಗ್ಗೂಡಿಸಲು ದೆಹಲಿಗೆ ಸಿದ್ದರಾಮಯ್ಯ ಬೇಟಿ ನೀಡುತ್ತಿದ್ದಾರೆ ಎಂದಾಗ “ಮಾಧ್ಯಮಗಳಲ್ಲಿಯೇ ಎಲ್ಲವೂ ಬರುತ್ತಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಎಲ್ಲೆಲ್ಲಿ ಏನಾಗುತ್ತಿದೆ ಎಂಬುದು ನೀವು (ಮಾಧ್ಯಮಗಳು) ನೋಡಿದಲ್ಲವೇ?” ಎಂದು ಮರು ಪ್ರಶ್ನಿಸಿದರು.

ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು ಎನ್ನುವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಇಡೀ ಪಕ್ಷ, ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್ ಗಾಂಧಿ ಅವರು ಎಲ್ಲಾ ನಾಯಕರು ಅವರ ಪರವಾಗಿ ನಿಂತಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...