ಅಧಿಕಾರ ಬರುತ್ತೆ ಹೋಗುತ್ತೆ, ಕುಮಾರಸ್ವಾಮಿಗೆ ಹೆದರಿ ಕೂರುವ ರಕ್ತ ನನ್ನದಲ್ಲ: ಡಿ ಕೆ ಶಿವಕುಮಾರ್

Date:

ಕಳೆದ ಎರಡು ಮೂರು ವರ್ಷಗಳಿಂದ ಕುಮಾರಸ್ವಾಮಿ ಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿ ಮೀರಿದೆ. ಅಧಿಕಾರ ಬರುತ್ತದೆ, ಅಧಿಕಾರ ಹೋಗುತ್ತದೆ. ನನ್ನದು ಹೆದರಿ ಕೂರುವ ರಕ್ತವಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಎಚ್ಚರಿಸಿದರು.

- Advertisement -

‘ನಪುಂಸಕ’ ಎಂದು ಟೀಕಿಸಿರುವ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರತಿಕ್ರಿಯೆಗೆ ಆಕ್ರೋಶ ವ್ಯಕ್ತಪಡಿಸಿ, ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಾನು ಎಷ್ಟು ದಿನ ಸಹಿಸಲಿ. ನನ್ನ ವಿರುದ್ಧ ಇರುವ ದಾಖಲೆಗಳನ್ನು ಬಿಡುಗಡೆ ಮಾಡಲಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ನಾನು ವಿಧವೆಯರಿಗೆ ಗನ್ ಪಾಯಿಂಟ್ ನಲ್ಲಿಟ್ಟು ಈ ಆಸ್ತಿ ಬರೆಸಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹಾಗಿದ್ದರೆ ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ದೂರು ನೀಡಿ ಎಫ್ಐಆರ್ ದಾಖಲಿಸಲಿ” ಎಂದು ಸವಾಲು ಹಾಕಿದರು.

ಕುಮಾರಸ್ವಾಮಿ ಒಬ್ಬರೇ ಗಂಡಸು

“ಕುಮಾರಸ್ವಾಮಿ ಒಬ್ಬರೇ ಗಂಡಸು. ಅವರು ಈ ಹಿಂದೆ ಏನು ಮಾತನಾಡಿದ್ದಾರೆ ಒಮ್ಮೆ ನೋಡಿ. ನನ್ನನ್ನು ಮಿಲಿಟರಿ ಬಂದು ಕರೆದುಕೊಂಡು ಹೋಗುತ್ತೆ ಎಂದು ಹೇಳಿದ್ದಾರೆ. ಅಂದರೆ ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ನಾನು ಜೈಲು ನೋಡಿರುವವನು. ನಾನು ಜೈಲಲ್ಲಿ ಇದ್ದಾಗ ಅವರು ಬಂದು ನನ್ನ ನೋಡಿದ್ದರು. ಜೈಲಿನ ಒಳಗೆ ನಾನು ಎಷ್ಟು ಶಕ್ತಿಯಲ್ಲಿದ್ದೆ ಎಂದು ನೋಡಿದ್ದಾರೆ” ಎಂದರು ತಿರುಗೇಟು ನೀಡಿದರು.

ಗಣಿ ಡಿನೋಟಿಫಿಕೇಶನ್ ಪ್ರಕರಣಲ್ಲಿ ವಿಚಾರಣೆಗೆ ಅವಕಾಶ ನೀಡಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಆ ಪ್ರಕರಣದ ಬಗ್ಗೆ ನನಗೆ ಗೊತ್ತಿಲ್ಲ. ಕುಮಾರಸ್ವಾಮಿ ನನ್ನ ಮೇಲೂ ಡಿನೋಟಿಫಿಕೇಶನ್ ಕೇಸು ದಾಖಲಿಸಿದ್ದರು. ಆ ಪ್ರಕರಣದಲ್ಲಿ ಯಡಿಯೂರಪ್ಪ ಶಿಫಾರಸ್ಸಿನ ಮೇಲೆ ಮಾಡಿದ್ದೆ. ಶಾಸಕ ಪತ್ರ ಬರೆದ ಕಾರಣ 16 (2) ಆಗಿರಲಿಲ್ಲ ಡಿನೋಟಿಫಿಕೇಶನ್ ಮಾಡಲಾಯಿತು. ನನ್ನ ಮೇಲೆ ಯಾಕೆ ಎಫ್ಐಆರ್ ಆಯಿತು? ಅದೇ ಆರ್.ಅಶೋಕ್ ಸೇರಿದಂತೆ ಬೇರೆ ಮಂತ್ರಿಗಳ ಮೇಲೆ ಕೇಸ್ ಆಗಲಿಲ್ಲ ಯಾಕೆ? ನಾನು ಕಾನೂನು ಸಮರದಲ್ಲಿ ಗೆದ್ದಿದ್ದೇನೆ. ಇದರಲ್ಲಿ ನಾನು ಅನುಭವಿಸಿರುವುದು ನನಗೆ ಮಾತ್ರ ಗೊತ್ತು” ಎಂದರು.

ಕುಮಾರಸ್ವಾಮಿ ಸರ್ಕಾರ ಬೀಳಿಸುವ ಮಾತು

ಈ ಸರ್ಕಾರ ತೆಗೆಯುವ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಕುಮಾರಸ್ವಾಮಿ ಯಾವ ಆಧಾರದ ಮೇಲೆ 10 ತಿಂಗಳಲ್ಲಿ ಸರ್ಕಾರ ಬೀಳಿಸುತ್ತೇವೆ ಎಂದಿದ್ದಾರೆ? ಕುಮಾರಸ್ವಾಮಿ ಅವರ ಸರ್ಕಾರವನ್ನೇ ಬಿಜೆಪಿಯವರು ಬೀಳಿಸಿದ್ದರಲ್ಲಾ ಅದರ ಬಗ್ಗೆ ಕುಮಾರಸ್ವಾಮಿ ಯಡಿಯೂರಪ್ಪ, ಅಶೋಕ್, ಅಶ್ವತ್ಥನಾರಾಯಣ, ಅಶೋಕ್ ಅವರ ಬಗ್ಗೆ ಮಾತನಾಡುತ್ತಿಲ್ಲ? ನಮ್ಮ ಸರ್ಕಾರವನ್ನು ಹೇಗೆ 10 ತಿಂಗಳಲ್ಲಿ ತೆಗೆಯುತ್ತಾರೆ. ನಮ್ಮ ಸರ್ಕಾರವನ್ನು ಮುಟ್ಟಲಿ ನೋಡೋಣ” ಎಂದು ಸವಾಲು ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...