ಭ್ರೂಣ ಹತ್ಯೆ ಪ್ರಕರಣ | ರಾಜ್ಯದಲ್ಲಿ ದೊಡ್ಡ ಜಾಲವೇ ಇದ್ದು, ಎಸ್‌ಐಟಿ ತನಿಖೆಗೆ ನೀಡಬೇಕು: ಆರ್‌ ಅಶೋಕ್

Date:

ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಒಬ್ಬೊಬ್ಬ ವೈದ್ಯರಿಂದ 300 ಭ್ರೂಣ ಹತ್ಯೆ ನಡೆದಿದೆ. 27 ವರ್ಷಗಳಲ್ಲಿ ಆರೋಗ್ಯ ಇಲಾಖೆ ಕೇವಲ 87 ಪ್ರಕರಣ ದಾಖಲಿಸಿದೆ. ಇದೊಂದು ರೀತಿಯಲ್ಲಿ ನನ್ನ ಪ್ರಕಾರ ಕೊಲೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಎಸ್‌ಐಟಿ ತನಿಖೆಗೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಆಗ್ರಹಿಸಿದರು.

- Advertisement -

ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಭ್ರೂಣ ಹತ್ಯೆ ವಿಚಾರವಾಗಿ ಮಾತನಾಡಿದ ಅವರು, “ಗಂಡು ಮಗ ಬೇಕು ಆಸೆಯಿಂದ ಹೆಣ್ಣು ಭ್ರೂಣ ಹತ್ತೆ ಮಾಡಲಾಗುತ್ತಿದೆ. ವರದಕ್ಷಿಣೆ ಕೂಡಾ ಇದಕ್ಕೆ ಕಾರಣವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಈಗಾಗಲೇ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ‌ ನೀಡಲಾಗಿದೆ. ಆದರೆ‌ ಸಿಐಡಿಗಿಂತ ಎಸ್ ಐಟಿಗೆ ನೀಡಿ. ಅಲ್ಲದೆ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು” ಎಂದು ಆರ್‌ ಅಶೋಕ ಒತ್ತಾಯಿಸಿದರು.

“ಭ್ರೂಣ ಹತ್ಯೆ ವಿಚಾರ ಬಗ್ಗೆ ಇಷ್ಟೆಲ್ಲಾ ಚರ್ಚೆಯಾದರೂ ಹೊಸಕೋಟೆಯಲ್ಲಿ 16 ವಾರಗಳ ಭ್ರೂಣ ಹತ್ಯೆ ಮಾಡಲಾಗಿದೆ. ಕಾನೂನಿಗೆ ಎಷ್ಟು ಗೌರವ ಕೊಡುತ್ತಾರೆ, ಎಷ್ಟು ಬಲಾಢ್ಯರಿದ್ದಾರೆ ಎಂದು ಅರ್ಥವಾಗುತ್ತದೆ. ಎಲ್ಲ ರಂಗದಲ್ಲೂ ಹೆಣ್ಣು ಗುರುತಿಸಿಕೊಂಡಿರುವ ಈ ಕಾಲದಲ್ಲಿ ಭ್ರೂಣ ಹತ್ಯೆ ತಲೆ ತಗ್ಗಿಸುವ ಘಟನೆ. ಎರಡ್ಮೂರು ಜಿಲ್ಲೆಯಲ್ಲಿ ಇದು ಕಂಡಿದೆ. ನನ್ನ ಪ್ರಕಾರ ಇಡೀ ರಾಜ್ಯದಲ್ಲಿ ಇದೆ” ಎಂದು ಆರೋಪಿಸಿದರು.

“ಗರ್ಭಿಣಿ ತಾಯಿಗೆ ತೀರ್ಮಾನದ ಅಧಿಕಾರ ಇರಲ್ಲ, ಬದಲಾಗಿ ಕುಟುಂಬ ಮಾಡುತ್ತಿದೆ. ‌ಮನೆ ಹಾಳು ಕೆಲಸ ಮಾಡುವ ಆಸ್ಪತ್ರೆಗೆ ನಮ್ಮ ‘ಮನೆ ಕ್ಲಿನಿಕ್’ ಎಂದು‌ ಹೆಸರು ಇಡಲಾಗಿದೆ. ಇವರೆಲ್ಲರದ್ದು ಒಂದು ದೊಡ್ಡ ಗ್ಯಾಂಗ್‌ ಇದೆ. ಮನೆಯ ಸದಸ್ಯರ ಕಿರಕುಳ ಕೂಡ ಭ್ರೂಣ ಹತ್ಯೆಗೆ ಕಾರಣವಾಗುತ್ತಿದೆ. ಇಂತಹ ಘಟನೆಗಳನ್ನು ಹುಡುಕುವ ಏಜೆಂಟರು ಇದ್ದಾರೆ. ಈ ಕೃತ್ಯದಲ್ಲಿ ವೈದ್ಯರೂ ಸೇರಿರುವುದು ಖೇದಕರ, ಅವರಿಗೆ ನಾಚಿಕೆ ಆಗಬೇಕು” ಎಂದು ಹರಿಹಾಯ್ದರು.

“ಭ್ರೂಣ ಹತ್ಯೆ ಮಾಡುವ ಒಂದು ದೊಡ್ಡ ಜಾಲವೇ ರಾಜ್ಯದಲ್ಲಿದೆ. ಹೆಜ್ಜೆ ಹೆಜ್ಜೆಗೂ ಬದಲಾಯಿಸಲಾಗುತ್ತದೆ. ಆಸ್ಪತ್ರೆಗಳ ಜೊತೆ ಈ ಜಾಲ ಒಪ್ಪಂದ ಮಾಡಿಕೊಂಡಿದೆ. ಯಾರು ಇಂದು ನಾವು ದೇವರನ್ನು ಎಂದುಕೊಂಡಿದ್ದೇವೆಯೋ ಅವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ” ಎಂದು ಹೇಳಿದರು.

“ಎಸ್ ಎಂ ಕೃಷ್ಣ ಸಿಎಂ ಆಗಿದ್ದಾಗಲೇ ಇಂತಹ ಘಟನೆ ಚರ್ಚೆ ಆಗಿತ್ತು. ಈವರೆಗೂ ಇದು ಕಡಿಮೆಯಾಗಿಲ್ಲ. 2015-16ರಲ್ಲಿ 1000 ಕ್ಕೆ 1029 ಹೆಣ್ಣುಮಕ್ಕಳು ‌ಇದ್ದರು. 2019-20 ರಲ್ಲಿ 1000 ಕ್ಕೆ 797 ಹೆಣ್ಣು ಮಕ್ಕಳ ಅನುಪಾತ ಇದೆ ದಾವಣಗೆರೆಯಲ್ಲಿ. ಹಾಸನದಲ್ಲಿ 1000 ಗಂಡು ಮಕ್ಕಳಿಗೆ 870 ಹೆಣ್ಣು ಮಕ್ಕಳ ಅನುಪಾತ ಆಗಿದೆ” ಎಂದು ಮಾಹಿತಿ ಹಂಚಿಕೊಂಡರು.

ಸಚಿವ ಚಲುವರಾಯಸ್ವಾಮಿ ಮಧ್ಯ ಪ್ರವೇಶಿಸಿ, “ಭ್ರೂಣ ಹತ್ಯೆ ಪ್ರಕರಣದಲ್ಲಿ ದೊಡ್ಡ ಜಾಲವೇ ಇದೆ. ಅವರು ಹಂತ ಹಂತವಾಗಿ ಇದನ್ನು ರಾಜ್ಯದಲ್ಲಿ ವಿಸ್ತರಿಸಿದ್ದಾರೆ. ನಮ್ಮ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ದಿನೇಶ್‌ ಗುಂಡೂರಾವ್‌ ಅವರು ಈ ಬಗ್ಗೆ ಅಧಿಕೃತ ಹೇಳಿಕೆ ನೀಡಲಿದ್ದಾರೆ” ಎಂದರು.

ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರತಿಕ್ರಿಯಿಸಿ, “ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗೆ ಜಾರಿಯಲ್ಲಿರುವ ಕಾನೂನು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ಇದಕ್ಕೆ ಹೊಸ ನೀತಿಯನ್ನು ಜಾರಿಗೆ ತರಲು ನಮ್ಮ ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ ಸಾಂವಿಧಾನಿಕ ವಿರೋಧಾಭಾಸ!

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ಕೈಲೊಂದು ಕ್ಯಾಮೆರಾ, ಜೀವಂತ ಬದುಕಿಗೆ ಮುಖಾಮುಖಿ

ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...