ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ; ಐವರು ಆಸ್ಪತ್ರೆಗೆ ದಾಖಲು

Date:

  • ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ
  • ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆದ ಘಟನೆ

ಚುನಾವಣಾ ಕಣ ರಂಗೇರುತ್ತಿರುವ ಹೊತ್ತಿನಲ್ಲಿ ಪಕ್ಷಗಳ ನಾಯಕರ ವಾಕ್ಸಮರ ಒಂದು ಕಡೆಯಾದರೆ, ಕಾರ್ಯಕರ್ತರ ನಡುವಿನ ಘರ್ಷಣೆ ತಾರಕಕ್ಕೇರಿದೆ.

ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಗ್ಗೆರೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದಾರೆಂಬ ಕಾರಣಕ್ಕೆ ಜೆಡಿಎಸ್‌ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಎರಡು ಪಕ್ಷದ ಕಾರ್ಯಕರ್ತರು ಪರಸ್ಪರ ಬಾಟಲ್ ಮತ್ತು ಚಾಕುವಿನಿಂದ ಹೊಡೆದಾಡಿಕೊಂಡಿದ್ದಾರೆ. ಬಿಜೆಪಿಯ ಮುಬಾರಕ್ ಪಾಷಾ ಮತ್ತು ನಜೀರ್ ಎಂಬುವವರಿಗೆ ಹಾಗೂ ಜೆಡಿಎಸ್ನ ಮುನ್ನಾ, ಸೌಕತ್ ಮತ್ತು ರಿಯಾಜ್ ಎಂಬವರಿಗೆ ಗಾಯಗಳಾಗಿವೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? : ಧಾರವಾಡ | ಎಸ್‌ಯುಸಿಐ ಕಾರ್ಯಕರ್ತರ ಸಭೆ; ಮಧುಲತಾ ಗೌಡ ಬೆಂಬಲಿಸುವಂತೆ ಮನವಿ

ಗಾಯಗೊಂಡಿರುವ ಮುಬಾರಕ್ ಪಾಷಾ ಅವರ ತಾಯಿ ಹಸಿನಾ ಎಂಬುವವರು ಹೆಗ್ಗೆರೆ ಗ್ರಾಮ ಪಂಚಾಯತಿಯಲ್ಲಿ ಜೆಡಿಎಸ್ ಬೆಂಬಲಿತ ಸದಸ್ಯೆಯಾಗಿದ್ದರು. ಅವರು ಜೆಡಿಎಸ್ ಶಾಸಕರ ನೆರವಿನಿಂದ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದರು ಎನ್ನಲಾಗಿದೆ.

ಈ ಮಧ್ಯೆ, ಹಸಿನಾ ಕುಟುಂಬದವರು ಜೆಡಿಎಸ್ ತೊರೆದು ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ಇದರಿಂದ ಸಿಟ್ಟಾಗಿದ್ದ ಜೆಡಿಎಸ್‌ ಕಾರ್ಯಕರ್ತರು ಇವರ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾವ ಟ್ಯಾಕ್ಸ್ಯೂ ಇಲ್ಲ; ಪಿತ್ರೋಡಾ ಹೇಳಿಕೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ: ಡಿ ಕೆ ಶಿವಕುಮಾರ್

"ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್...

ಮೋದಿ ದ್ವೇಷ ಭಾಷಣ: ಭಯ, ಹತಾಶೆಯ ಅಸಹ್ಯಕರ ಪ್ರತಿರೂಪ

ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಮುಸ್ಲಿಮರ...

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ...