ಪುನೀತ್‌ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು

Date:

ರಾಷ್ಟ್ರ ರಕ್ಷಣಾ ಪಡೆ‌ ಎಂಬ ಸಂಘಟನೆ ಕಟ್ಟಿಕೊಂಡಿರುವ ಕೊಲೆ ಆರೋಪಿ, ಬಲಪಂಥೀಯ ಮುಖಂಡ ಪುನೀತ್‌ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ.

ಕ್ರಿಸ್‌ಮಸ್ ಹಬ್ಬದ ಅಲಂಕಾರದ ವಿಚಾರಕ್ಕೆ ಮಾಲ್‌ಗೆ ನುಗ್ಗಿ ಗಲಾಟೆ ಮಾಡಿರೋ ಆರೋಪ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ನಿನ್ನೆ(ಡಿ.23)ರಂದು ಬೆಂಗಳೂರಿನ ಹೆಬ್ಬಾಳದ ಸಮೀಪವಿರುವ ಮಾಲ್ ಆಫ್ ಏಷ್ಯಾ ಬಳಿ ಹೋಗಿದ್ದ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು, ಯಾಕೆ ಕ್ರಿಸ್ಮಸ್ ಟ್ರೀ ಗಳ ಅಲಂಕಾರ ಮಾಡಿದ್ದೀರಾ ಎಂದು ಮಾಲ್‌ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕ್ರಿಸ್‌ಮಸ್‌ ಟ್ರೀ ಅಲಂಕಾರ ಮಾಡಿದ್ದಲ್ಲದೇ 200 ರೂ ಎಂಟ್ರಿ ಫೀಸ್ ಬೇರೆ ಇಟ್ಟಿದ್ದೀರಾ? ಇದಕ್ಕೆ ಕಾನೂನು ಇದ್ಯಾ? ಹಿಂದೂ ಹಬ್ಬಗಳಿಗೆ ನೀವು ಇದೇ ರೀತಿಯ ಅಲಂಕಾರ ಮಾಡ್ತೀರ? 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದೆ. ಅವತ್ತೂ ಕೂಡ ಹೀಗೆ ಅಲಂಕಾರ ಮಾಡಬೇಕು. ಮಾಡದಿದ್ರೆ ಮಾಲ್ ಮುಂದೆ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದರು.

ಇದನ್ನು ಓದಿದ್ದೀರಾ? ನಮ್ಮನ್ನು ಟಿಪ್ಪು ಸುಲ್ತಾನ್ ಪರ ಎನ್ನುವವರು ಬ್ರಿಟೀಷರ ಬೂಟು ನೆಕ್ಕುತ್ತಿದ್ದರು: ಬಿಕೆ ಹರಿಪ್ರಸಾದ್

ಈ ಬಗ್ಗೆ ಮಾಲ್‌ನ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದಿದ್ದ ಪೊಲೀಸರು, ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನುಯ ವಶಕ್ಕೆ ಪಡೆದುಕೊಂಡಿದ್ದರು. ಆ ಬಳಿಕ ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ನೀಡಿದ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ...

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ | ಅಗತ್ಯ ಬಿದ್ದರೆ ತನಿಖೆ ಎನ್‌ಐಎಗೆ ವಹಿಸುತ್ತೇವೆ: ಸಿಎಂ ಸಿದ್ದರಾಮಯ್ಯ

"ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ...

ಮೋದಿಯ ‘ದ್ರೋಹದ ಗ್ಯಾರಂಟಿ’; ರೈಲ್ವೆ ಪಾಲಿಸಿ ವಿರುದ್ಧ ರಾಹುಲ್ ಕಿಡಿ

ಕೇಂದ್ರ ರೈಲ್ವೆ ಸಚಿವಾಲಯವು ಹಿರಿಯ ನಾಗರಿಕರಿಗಿದ್ದ ವಿನಾಯತಿಯನ್ನೂ ಕಿತ್ತುಕೊಂಡು 3,700 ಕೋಟಿ...