ನಿರ್ಮಲಾ ಸೀತಾರಾಮನ್‌ ವಿರುದ್ಧ ದೂರು ದಾಖಲು; ಚುನಾವಣಾ ಬಾಂಡ್‌, ಐಟಿ, ಇಡಿ ದುರುಪಯೋಗದ ಆರೋಪ

Date:

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಕ್ರಿಮಿನಲ್‌ ದೂರು ನೀಡಿದ್ದಾರೆ.

ಐಟಿ, ಇಡಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಗಳನ್ನು ಬೆದರಿಸಿ ಎಲೆಕ್ಟೋರಲ್‌ ಬಾಂಡ್‌ ಹೆಸರಿನಲ್ಲಿ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್‌, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ, ಡಾ ಅಂಬೇಡ್ಕರ್‌ ದಂಡು, ಫ್ಯೂಚರ್‌ ಇಂಡಿಯಾ ಆರ್ಗನೈಸೇಷನ್‌ ಒಂದಾಗಿ ದೂರು ನೀಡಿವೆ.

“ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಮೂಲಕವೇ ಈ ಪಿತೂರಿ ನಡೆದಿದೆ. ಒಟ್ಟು 477 ಇಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ಅದರಲ್ಲಿ 20 ಪ್ರಕರಣಗಳಲ್ಲಿ ಐಟಿ, ಇಡಿ ದಾಳಿಯಾದ ನಂತರ ಎಲೆಕ್ಟೋರಲ್‌ ಬಾಂಡ್‌ ಖರೀದಿಸಲಾಗಿದೆ. ಆ ಹಣ ಬಿಜೆಪಿಯ ಖಾತೆಗೆ ಸಂದಾಯವಾಗಿದೆ. ಇದು IPC 384/ 120B ಅಡಿ ಕ್ರಿಮಿನಲ್‌ ಅಪರಾಧವಾಗಿದೆ” ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ್‌ ಐಯ್ಯರ್‌ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇದೊಂದು ಹೈ ಪ್ರೊಫೈಲ್‌ ಪ್ರಕರಣ ಎಂದ ತಿಲಕನಗರ ಪೊಲೀಸರು ದೂರು ಪಡೆಯಲು ಹಿಂದೇಟು ಹಾಕಿದ್ದಾರೆ. ನಂತರ ದೂರು ಸ್ವೀಕರಿಸಿದ್ದಾರೆ. ಚುನಾವಣೆಯ ಸಮಯ ಆಗಿರುವ ಕಾರಣ ಎಆರ್‌ಒ (Assistant Review Officer)ಗೆ ವರ್ಗಾಯಿಸುತ್ತೇವೆ ಎಂದಿದ್ದಾರೆ. ಸೋಮವಾರ ನಾವು ಡಿಸಿಪಿಯವರಿಗೆ ಮತ್ತೊಂದು ದೂರು ಕೊಡುತ್ತೇವೆ. ಎಫ್‌ಐಆರ್‌ ದಾಖಲಿಸದಿದ್ದರೆ ಕೋರ್ಟ್‌ ಮೊರೆ ಹೋಗುತ್ತೇವೆ” ಎಂದು ಆದರ್ಶ್‌ ಅಯ್ಯರ್‌ ಸ್ಪಷ್ಟಪಡಿಸಿದ್ದಾರೆ.

ಸಂಘಟನೆಗಳ ಮುಖಂಡರಾದ ಪ್ರಕಾಶ್‌ ಬಾಬು, ವಿಶ್ವನಾಥ್‌, ಕಪಾಲಿ ಎಸ್‌, ಡಿ ಶಿವಣ್ಣ, ವಿ ಆರ್‌ ಮರಾಠೆ ಮತ್ತುಇತರ ಸದಸ್ಯರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ; ಡಿಕೆ ಶಿವಕುಮಾರ್‌ಗೆ ಕುಮಾರಸ್ವಾಮಿ ಪ್ರತಿ ಸವಾಲು

"ಮಿಸ್ಟರ್​ ಕುಮಾರಸ್ವಾಮಿ, ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ...

ಯಾರಿಗೂ ಮುಖ ತೋರಿಸದ ಸನ್ನಿವೇಶ ಕುಮಾರಸ್ವಾಮಿಗೆ ನಿರ್ಮಾಣವಾಗಲಿದೆ: ಡಿಕೆ ಶಿವಕುಮಾರ್‌

ಕುಮಾರಸ್ವಾಮಿ ಅವರು ನನ್ನ ಮೇಲೆ ಮನಬಂದಂತೆ ಆರೋಪಿಸುವುದನ್ನು ನೋಡಿಯೂ ನಮ್ಮ ಸಮುದಾಯಕ್ಕಾಗಿ...

ಇಂಫಾಲ| ಮಣಿಪುರವನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ ಎಂದ ಅಮಿತ್ ಶಾ!

ಮಣಿಪುರದ ಜನರನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ, ಆದರೆ ಬಿಜೆಪಿ ರಾಜ್ಯದ ವಿಭಜನೆಗೆ...

ರೇಟ್ ಫಿಕ್ಸ್, ಬ್ಲ್ಯಾಕ್‌ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿಸಿಎಂ ಡಿ.ಕೆ.ಶಿವಕುಮಾರ್

"ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ,...