ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದ ವಿದ್ಯಾರ್ಥಿಗೆ ಆರ್ಥಿಕ ಸಂಕಷ್ಟ : ಸಚಿವ ಝಮೀರ್ ನೆರವು

Date:

  • ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುವ ಸ್ಪರ್ಧೆಗೆ ಆಯ್ಕೆಯಾಗಿದ್ದ ವಿದ್ಯಾರ್ಥಿ
  • ಕೆಪಿಸಿಸಿ ಕಚೇರಿಯಲ್ಲಿ ಸಚಿವ ಝಮೀರ್ ಅಹಮದ್ ಅಹವಾಲು ಸ್ವೀಕಾರ

ಇಂಡೋನೇಷ್ಯಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್‌ಗೆ ಆಯ್ಕೆಯಾಗಿದ್ದರೂ, ಆರ್ಥಿಕ ಸಂಕಷ್ಟದಿಂದ ತೆರಳಲು ಒದ್ದಾಡುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಖಾನ್ ಅವರು ನೆರವು ಒದಗಿಸಿದ್ದಾರೆ.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಅಹವಾಲು ಸ್ವೀಕರಿಸುತ್ತಿದ್ದ ವೇಳೆ ಹೆಬ್ಬಾಳದ ಕ್ರೆಸೆಂಟ್ ಇಂಗ್ಲಿಷ್ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ತಾಹೀರ್ ಅಮೀರ್ ಸೆ.19 ರಿಂದ 24ವರೆಗೆ ಜಕಾರ್ತದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಗೆ ಆಯ್ಕೆಯಾಗಿದ್ದೇನೆ. ಆರ್ಥಿಕ ಸಂಕಷ್ಟದಿಂದ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಸಚಿವರಲ್ಲಿ ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದಕ್ಕೆ ತಕ್ಷಣ ಸ್ಪಂದಿಸಿದ ಸಚಿವ ಝಮೀರ್, ತಮ್ಮ ವೈಯಕ್ತಿಕ ವೆಚ್ಚದಲ್ಲಿ ಸ್ಪರ್ಧೆಗೆ ಹೋಗಿ ಬರುವ ವಿಮಾನ ವೆಚ್ಚ 65 ಸಾವಿರ ರೂ. ಟಿಕೆಟ್ ಮಾಡಿಸಿ ಸ್ಥಳದಲ್ಲೇ ನೀಡಿ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ಸಚಿವರು, ‘ತಿಂಗಳಲ್ಲಿ ಒಮ್ಮೆ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಬೇಕು ಎಂಬ ಪಕ್ಷದ ಆದೇಶದಂತೆ ಇಂದು ಭೇಟಿ ನೀಡಿದ್ದೇನೆ. ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಉಸ್ತುವಾರಿ ಜಿಲ್ಲೆ ವಿಜಯನಗರ ಸೇರಿದಂತೆ ರಾಜ್ಯ ಪ್ರವಾಸ ಸಂದರ್ಭದಲ್ಲೂ ಜಿಲ್ಲಾ ಅಥವಾ ತಾಲ್ಲೂಕಿನಲ್ಲಿ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುತ್ತಿದ್ದೇನೆ’ ಎಂದು ತಿಳಿಸಿದರು.

ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿ ಸ್ವೀಕಾರ ಮಾಡಿದ ಸಚಿವರು, ಸಂಬಂಧ ಪಟ್ಟ ಇಲಾಖೆ ಗಳಿಗೆ ಕಳುಹಿಸಿ ಸೂಕ್ತ ದಾಖಲೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...