ಸಂಸದ ತೇಜಸ್ವಿ ಸೂರ್ಯ ಸೇರಿ ಕನ್ನಡ ದುನಿಯಾ, ಕನ್ನಡ ನ್ಯೂಸ್‌ ಸಂಪಾದಕರ ಮೇಲೆ ಎಫ್‌ಐಆರ್‌

Date:

Advertisements

“ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಂಚಿಕೊಂಡ ಆರೋಪ ಮೇಲೆ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕನ್ನಡ ನ್ಯೂಸ್ ನೌ, ಕನ್ನಡ ದುನಿಯಾ, ಪಬ್ಲಿಕ್ ಟಿವಿ ಸೇರಿದಂತೆ ಕೆಲವು ಮಾಧ್ಯಮಗಳು ಹಾವೇರಿಯಲ್ಲಿ ರೈತರೊಬ್ಬರು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ಮಾಡಿದ್ದವು. ಕೆಲವು ಮಾಧ್ಯಮಗಳು ಸಂಸದ ತೇಜಸ್ವಿ ಸೂರ್ಯ ಅವರ ಟ್ವೀಟ್ ಆಧರಿಸಿ ಸುದ್ದಿ ಮಾಡಿದ್ದವು.

ಸಂಸದ ತೇಜಸ್ವಿ ಸೂರ್ಯ, ಕನ್ನಡ ದುನಿಯಾ ಸಂಪಾದಕ ಹಾಗೂ ಕನ್ನಡ ನ್ಯೂಸ್‌ ಪತ್ರಿಕೆಯ ಸಂಪಾದಕರ ಮೇಲೆ ಹಾವೇರಿಯ ಸಿಇಎನ್‌ (ಸೈಬರ್‌ ಎಕನಾಮಿಕ್‌ ಮತ್ತು ನಾರೋಟಿಕ್ಸ್ )‌ ಠಾಣೆಯಲ್ಲಿ ಸುನಿಲ್‌ ಹುಚ್ಚಣ್ಣನವರ ದೂರು ದಾಖಲಿಸಿದ್ದಾರೆ.

Advertisements

“ಕನ್ನಡ ದುನಿಯಾ, ಕನ್ನಡ ನ್ಯೂಸ್‌ ಇ-ಪೇಪರ್‌ನಲ್ಲಿ ಬಂದಿರುವ ಸುದ್ದಿಯನ್ನು ಫ್ಯಾಕ್ಟ್‌ಚೆಕ್‌ ಮಾಡಿದಾಗ ಪ್ರಸ್ತುತದಲ್ಲಿ ಹಾವೇರಿ ಜಿಲ್ಲೆಯಲ್ಲಿ ಈ ರೀತಿ ವಕ್ಷ ವಿಷಯಕ್ಕೆ ಸಂಬಂಧಿಸಿದಂತೆ ರೈತ ಆತ್ಮಹತ್ಯೆ ಪ್ರಕರಣ ನಡೆದಿರುವುದಿಲ್ಲ. ದಿನಾಂಕ: 06/01/2022 ರಂದು ಆಡೂರ ಪೊಲೀಸ್ ಠಾಣೆಯ ವ್ಯಾಪ್ತಿಯ ಹರನಗಿರಿ ಗ್ರಾಮದ ರೈತ ಸಾಲದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿಷಯವಾಗಿದ್ದು, ಈ ಕುರಿತು ಈಗಾಗಲೆ ಆಡೂರ ಪೊಲೀಸ್ ಠಾಣೆ ಯುಡಿಆರ್ ನಂ. 3/2022 ಕಲಂ 174 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿ ಅಂತಿಮ ವರದಿಯನ್ನು ತಹಶೀಲ್ದಾರ ಹಾನಗಲ್ ಅವರಿಗೆ ಸಲ್ಲಿಸಲಾಗಿದೆ. ಸದರಿ ಪ್ರಕರಣ ಮುಕ್ತಾಯವಾಗಿರುತ್ತದೆ. ಇದೇ ಸುದ್ದಿಯನ್ನು ಪ್ರಸ್ತುತ ವಕ್ಷ ವಿಚಾರಕ್ಕೆ ನಡೆದಿದೆ ಅಂತಾ ಬಿಂಬಿಸಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಲಾಗಿದೆ. ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸದೆ ಸಂಸದ ತೇಜಸ್ವಿ ಸೂರ್ಯ, ‘X’ ಖಾತೆಯಲ್ಲಿ ಸುಳ್ಳು ಸುದ್ದಿಯನ್ನು ಪೋಸ್ಟ್ ಮಾಡಿದ್ದಾರೆ. ಜೊತೆಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಕನ್ನಡ ದುನಿಯಾ, ಕನ್ನಡ ನ್ಯೂಸ್‌ ಸಂಪಾದಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಸುನಿಲ್‌ ಹುಚ್ಚಣ್ಣನವರ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತೇಜಸ್ವಿ 458x1024 1

ಈ ಸುದ್ದಿ ಓದಿದ್ದೀರಾ? ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು; ರೈತ ಆತ್ಮಹತ್ಯೆ: ಸುಳ್ಳು ಸುದ್ದಿ ಹಂಚಿಕೊಂಡ ತೇಜಸ್ವಿ ಸೂರ್ಯ

ಸುಳ್ಳು ಸುದ್ದಿ ಹರಡಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸಂಸದರಾಗಿ ಜನರಿಗೆ ಸುಳ್ಳು ಸುದ್ದಿ ಹಂಚಿ ದಾರಿ ತಪ್ಪಿಸುತ್ತಿದ್ದಾರೆ ಎಂದು ನೆಟ್ಟಿಗರು ಟೀಕಿಸಿದ್ದರು. ಮಾಧ್ಯಮಗಳು ಈ ಸುದ್ದಿ ಪ್ರಕಟಿಸುತ್ತಿದ್ದಂತೆ ಸ್ಪಷ್ಟನೆ ನೀಡಿದ ಹಾವೇರಿ ಪೊಲೀಸರು “ಕನ್ನಡ ನ್ಯೂಸ್ ನೌ ಎಂಬ ಹೆಸರಿನ ಡಿಜಿಟಲ್ ನ್ಯೂಸ್‌ನಲ್ಲಿ ಹಾವೇರಿ ಜಿಲ್ಲೆಯ ಹರಣಗಿ ಗ್ರಾಮದ ರೈತ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬ ರೈತ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹಾವೇರಿ ರೈತರು ಆರೋಪಿಸಿದ್ದಾರೆಂದು ವರದಿ ಪ್ರಕಟಿಸಿದೆ. ಆದರೆ ಈ ಸುದ್ದಿ ಸುಳ್ಳು, ಈ ರೀತಿ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

ಯಾವಾಗ ಈ ಸುದ್ದಿ ಸುಳ್ಳು, ಈ ರೀತಿ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ ಎಂದು ಹಾವೇರಿ ಪೊಲೀಸರು ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಹಾಗೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೆಯೇಂದ್ರ ಕೂಡ ಎಕ್ಸ್‌ ಖಾತೆಯಲ್ಲಿ ಈ ಸುಳ್ಳು ಸುದ್ದಿ ಹಂಚಿಕೊಂಡು ನಂತರ ಡಿಲೀಟ್‌ ಮಾಡಿದ್ದಾರೆ.

WhatsApp Image 2024 11 07 at 10.16.19 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇವುಗಳು ಹುಟ್ಟಿರುವುದೇ ಸಮಾಜದ ಸ್ವಾಸ್ಥ್ಯ ಹಾಳುಮಾಡುವ ಅದರಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಮಾಜಕಂಟಕ ಮತಾಂಧ ವಿಕೃತ ಮನಸ್ಥಿತಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X