ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

Date:

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ಪ್ರದೇಶದಲ್ಲಿ ಮೆಹಬೂಬಾ ಮುಫ್ತಿ ಮತ್ತು ಅವರ ಪಕ್ಷದ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿದ್ದು ಸೆಕ್ಷನ್ 144 ಅನ್ನು ಉಲ್ಲಂಘಿಸಿದ ಕಾರಣ ಮೆಹಬೂಬಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಮೆಹಬೂಬಾ ಮುಫ್ತಿ ಅವರು ‘ತಮಾಷೆ’ ಎಂದು ಬಣ್ಣಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ತಮಾಷೆಯಾಗಿದೆ. ಸತ್ಯವನ್ನು ಮಾತನಾಡಿದ್ದಕ್ಕಾಗಿ ಪಿಡಿಪಿ ತೆರಬೇಕಾದ ಬೆಲೆ ಇದಾಗಿದೆ. ಮತದಾನ ನಡೆಯುವುದಕ್ಕೂ ಕೆಲವೇ ಗಂಟೆಗಳ ಮುನ್ನ ನೂರಾರು ಪಿಡಿಪಿ ಪೋಲಿಂಗ್ ಏಜೆಂಟ್‌ಗಳನ್ನು ಮತ್ತು ಕಾರ್ಯಕರ್ತರನ್ನು ಬಂಧನ ಮಾಡಿರುವುದರ ವಿರುದ್ಧವಾಗಿ ನಾವು ಪ್ರತಿಭಟನೆ ನಡೆಸಿದ್ದೆವು” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಅದಾನಿ, ಅಂಬಾನಿಗೆ ಸಹಾಯ ಮಾಡಲು ಮೋದಿಯವರನ್ನು ಆ ಪರಮಾತ್ಮನೇ ಕಳುಹಿಸಿದ್ದು: ರಾಹುಲ್ ಲೇವಡಿ

“ನಮ್ಮ ಕಾರ್ಯಕರ್ತರನ್ನು ಬಂಧನ ಮಾಡಿ ತೃಪ್ತರಾಗದ ಆಡಳಿತವು ನಮ್ಮ ಮತದಾರರಲ್ಲಿ ಭಯ ಹುಟ್ಟಿಸಲು ಮತ್ತು ಮತದಾನ ಮಾಡುವುದನ್ನು ತಡೆಯಲು ಪಿಡಿಪಿಯ ಭದ್ರಕೋಟೆ ಕಾರ್ಡನ್‌ನಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿದೆ” ಎಂದು ಮೆಹಬೂಬಾ ಮುಫ್ತ ಆರೋಪಿಸಿದರು.

“ತನ್ನ ಪಕ್ಷದ ಕಾರ್ಯಕರ್ತರು ಮತ್ತು ಮತಗಟ್ಟೆ ಏಜೆಂಟರನ್ನು ಬಂಧಿಸಿರುವುದನ್ನು ವಿರೋಧಿಸಿ ಪಿಡಿಪಿ ಪ್ರತಿಭಟಿಸಿದೆ. ಆದರೆ ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಪಿಡಿಪಿ ಕಾರ್ಯಕರ್ತರ ಬೃಹತ್ ಗುಂಪು ಮುಖ್ಯ ರಸ್ತೆಯನ್ನು ತಡೆದು ಒಂದು ಗಂಟೆಗೂ ಅಧಿಕ ಕಾಲ ಪ್ರತಿಭಟಿಸಿದೆ. ಇದು ಕ್ಷೇತ್ರದಲ್ಲಿ ವಿಧಿಸಲಾದ ಸೆಕ್ಷನ್ 144 ಸಿಆರ್‌ಪಿಸಿ ಉಲ್ಲಂಘನೆಯಾಗಿದೆ” ಎಂದು ಎಫ್‌ಐಆರ್ ಹೇಳಿದೆ.

ಚುನಾವಣಾ ಕಾರಣ ಮೇ 23ರಂದು ಸಂಜೆ 6 ರಿಂದ ಮೇ 25 ರ ಸಂಜೆ 6ರವರೆಗೆ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಸೆಕ್ಷನ್‌ ಕಾನೂನುಬಾಹಿರ ಸಭೆ ಮತ್ತು ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಮೆರವಣಿಗೆ ಮಾಡುವುದಕ್ಕೆ ನಿಷೇಧ ಹೇರುತ್ತದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ...

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...