ಹನುಮ ಧ್ವಜ ಹಾರಿಸಿದ ಪ್ರಕರಣ; ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್‌

Date:

ಅನುಮತಿ ಪಡೆಯದೆ ಸಾವರ್ಕರ್ ನಾಮಫಲಕ ಹಾಕಿ, ಹನುಮ ಧ್ವಜ ಹಾರಿಸಿದ್ದ ಪ್ರಕರಣದಲ್ಲಿ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಸೇರಿದಂತೆ 21 ಮಂದಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

ಇತ್ತೀಚೆಗೆ, ಭಟ್ಕಳದ ತೆಂಗಿನಗುಂಡಿ ಗ್ರಾಮದಲ್ಲಿ ಬಿಜೆಪಿ ಮತ್ತು ಹಿಂದುತ್ವವಾದಿ ಕೋಮು ಕಾರ್ಯಕರ್ತರು ಸರ್ಕಾರಿ ಸ್ಥಳದಲ್ಲಿ ಹನುಮ ಧ್ವಜ ಹಾರಿಸಿದ್ದರು. ಅನುಮತಿ ಪಡೆಯದ ಕಾರಣ, ಪಂಚಾಯತಿ ಅಧಿಕಾರಿಗಳು ಅದನ್ನು ತೆರವುಗೊಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಸಭೆ ನಡೆಸಿದ್ದರು. ಸಭೆಯಲ್ಲಿ ಭಾಗಿಯಾಗಿದ್ದ ಸಂಸದ ಅನಂತ ಕುಮಾರ್ ಹೆಗಡೆ, ತನ್ನ ಬೆಂಬಲಿಗರನ್ನು ಕರೆದೊಯ್ದು, ತೆರವುಗೊಳಿಸಿದ್ದ ಸ್ಥಳದಲ್ಲೇ ಮತ್ತೆ ಹನುಮ ಧ್ವಜ ಹಾರಿಸಿ, ಸಾವರ್ಕರ್ ಫೋಟೋ ಇದ್ದ ನಾಮಫಲಕ ಹಾಕಿದ್ದರು.

ತೆರವುಗೊಳಿಸಿದ್ದ ಜಾಗದಲ್ಲೇ ಮತ್ತೆ ಕೋಮುವಾದಿಗಳ ಬಾವುಟ ಹಾರಿಸಿದ ಆರೋಪದ ಮೇಲೆ ಅನಂತ ಕುಮಾರ್ ಹೆಗಡೆ ಮತ್ತು ಇತರ 20 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮೋದಿ ‘ಚಂದಾ ದಂಧೆ’; ನಿಜ ಮುಖ ಮುಚ್ಚಿಡಲು ಕೊನೆಯ ಪ್ರಯತ್ನ ಎಂದ ರಾಹುಲ್ ಗಾಂಧಿ

ಕಳೆದ ನಾಲ್ಕುವರೆ ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಣೆಯಾಗಿದ್ದ ಅನಂತ ಕುಮಾರ್ ಹೆಗಡೆ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಪ್ರತ್ಯಕ್ಷರಾಗಿದ್ದಾರೆ. ಮುಸ್ಲಿಂ ವಿರೋಧಿ ಹೇಳಿಕೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ನಿಂದಿಸಿ, ವಿವಾದ ಸೃಷ್ಟಿಸಿಕೊಂಡು ಸುದ್ದಿಯಾಗುತ್ತಿದ್ದಾರೆ.

ಈ ಬಾರಿಯೂ, ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಪಡೆಯಲು ಹವಣಿಸುತ್ತಿದ್ದಾರೆ. ಆದರೆ, ಈ ಬಾರಿ, ಅವರಿಗೆ ಬಿಜೆಪಿ ಟಿಕೆಟ್‌ ಸಿಗುವ ಸಾಧ್ಯತೆಗಳಿಲ್ಲ ಎಂದು ಹೇಳಲಾಗುತ್ತಿದೆ. ಅಲ್ಲದೆ, ಟಿಕೆಟ್‌ ಸಿಕ್ಕರೂ, ಅವರು ಗೆಲ್ಲುವುದು ಅನುಮಾನ ಎಂಬ ಮಾತುಗಳೂ ಇವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....