ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಛತ್ತೀಸ್‌ಗಢದ ರಾಯ್‌ಪುರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

- Advertisement -

ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಶನಿವಾರ ಮಾನಾ ಪೊಲೀಸ್ ಠಾಣೆಯಲ್ಲಿ ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 196(ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 197 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಕೇಂದ್ರ ಗೃಹ ಸಚಿವ ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲೆ ಇಡಬೇಕು: ಮಹುವಾ ಮೊಯಿತ್ರಾ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಪತ್ರಕರ್ತರು ಸಂಸದೆ ಮೊಯಿತ್ರಾಗೆ ರಾಜ್ಯದಲ್ಲಿ ಅಕ್ರಮ ಒಳನುಸುಳುವಿಕೆಯ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ್ದ ಮೊಯಿತ್ರಾ, “ಬಾಂಗ್ಲಾದೇಶದಿಂದ ನುಸುಳುವಿಕೆಯನ್ನು ತಡೆಯುವಲ್ಲಿ ಅಮಿತ್ ಶಾ ವಿಫಲರಾಗಿದ್ದು, ಅವರ ತಲೆಯನ್ನು ಕತ್ತರಿಸಿ ಮೇಜಿನ ಮೇಲೆ ಇಡಬೇಕು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಮೊಯಿತ್ರಾ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹೇಳಿಕೆಯು ಆಕ್ಷೇಪಾರ್ಹ ಮತ್ತು ಸಂವಿಧಾನಬಾಹಿರ ಎಂದು ದೂರುದಾರ ಗೋಪಾಲ್ ಸಮಂತೋ ಆರೋಪಿಸಿದ್ದಾರೆ. 1971ರಲ್ಲಿ ರಾಯ್‌ಪುರದ ಮಾನಾ ಕ್ಯಾಂಪ್ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಬಾಂಗ್ಲಾದೇಶಿ ನಿರಾಶ್ರಿತರು ನೆಲೆಸಿದ್ದರು. ಮೊಯಿತ್ರಾ ಅವರ ಹೇಳಿಕೆಯು ಅವರಲ್ಲಿ ಭಯವನ್ನು ಸೃಷ್ಟಿಸಿದೆ. ಏಕೆಂದರೆ ಮೊಯಿತ್ರಾ ಅವರ ಹೇಳಿಕೆಯು ಅವರ ವಿರುದ್ಧ ಆಕ್ರೋಶಕ್ಕೆ ಕಾರಣವಾಗಬಹುದು ಎಂದು ಅಧಿಕಾರಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ...

ನಮ್ಮ ದೇಶದಲ್ಲಿ ಅಲ್ಲದೆ ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೇ?; ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ...

CEC ರಾಜೀನಾಮೆಗೆ ಆಗ್ರಹ; ಅ.23ರಂದು ಸಂಯುಕ್ತ ಕಿಸಾನ್‌ ಮೋರ್ಚಾದಿಂದ ದೆಹಲಿ ಚಲೋ

SIR ಪ್ರಕ್ರಿಯೆಯನ್ನು ವಿರೋಧಿಸಿ, CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...