ಸುಳ್ಳು ಸುದ್ದಿ ಪ್ರಸಾರ ಮಾಡಿದ ‘ಆಜ್‌ ತಕ್‌’ನ ಸುಧೀರ್ ಚೌಧರಿ ವಿರುದ್ಧ ಎಫ್ಐಆರ್

Date:

ಕರ್ನಾಟಕ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ ‘ಆಜ್‌ ತಕ್’ ವಾಹಿನಿಯ ಪ್ರಧಾನ ಸಂಪಾದಕ ಸುಧೀರ್ ಚೌಧರಿಯ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

- Advertisement -

ಸುಳ್ಳು ಸುದ್ದಿ ಮಾತ್ರವಲ್ಲದೆ, ದುರುದ್ದೇಶಪೂರ್ವಕವಾಗಿ ಕೋಮು ಪ್ರಚೋದನೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯಿದೆ 1860 (U/s-505,153A) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಎಫ್ಐಆರ್ ನಲ್ಲಿ ‘ಆಜ್‌ ತಕ್’ ವಾಹಿನಿಯ ಪ್ರಧಾನ ಸಂಪಾದಕ ಎ1 ಆರೋಪಿಯಾಗಿ ಹಾಗೂ ‘ಆಜ್‌ ತಕ್’ ವಾಹಿನಿ ಎ2 ಆರೋಪಿಗಳಾಗಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಾಯಕ ಆಡಳಿತಾಧಿಕಾರಿ ಶಿವಕುಮಾರ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ದೂರಿನಲ್ಲಿ ಏನಿದೆ?

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆ ಕುರಿತು ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡಿರುವ ಬಗ್ಗೆ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ‘ಆಜ್ ತಕ್’ ರಾಷ್ಟ್ರೀಯ ಸುದ್ದಿ ವಾಹಿನಿ ಹಾಗೂ ಆ ವಾಹಿನಿಯ ಮುಖ್ಯ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸಹಾಯಕ ಆಡಳಿತಾಧಿಕಾರಿ ಶಿವಕುಮಾರ್ ದೂರು ದಾಖಲಿಸಿದ್ದರು.

ನಿರುದ್ಯೋಗಿ ಯುವಕರಿಗೆ ಸ್ವಾವಲಂಬಿ ಬದುಕಿಗೆ ಆಟೋ, ಗೂಡ್ಸ್, ಟ್ಯಾಕ್ಸಿ ಖರೀದಿಗೆ ಶೇ.50 ರಷ್ಟು ಅಂದರೆ ಗರಿಷ್ಠ 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡುವ ಯೋಜನೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಅಷ್ಟೇ ಅಲ್ಲದೆ ದೇವರಾಜ ಅರಸು ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲೂ ಇದೆ. ಅಲ್ಪಸಂಖ್ಯಾತ ಸಮುದಾಯ ಅಷ್ಟೇ ಅಲ್ಲದೆ ಹಿಂದುಳಿದ, ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸೇರಿ ಹಿಂದೂ ಸಮುದಾಯದ ನಿರುದ್ಯೋಗಿ ಯುವಕರಿಗೂ ಈ ಸಾಲ ಸೌಲಭ್ಯವಿದೆ. ಈ ಯೋಜನೆ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಜಾರಿ ಮಾಡಿದ್ದಲ್ಲ, ಹಿಂದಿನ ಬಿಜೆಪಿ ಸರ್ಕಾರದಲ್ಲೇ ಜಾರಿಯಲ್ಲಿತ್ತು.

ಆದರೆ ಸುದ್ದಿ ವಾಹಿನಿಯಲ್ಲಿ ಇದನ್ನು ತಿರುಚಿ ಕೇವಲ ಅಲ್ಪಸಂಖ್ಯಾತರ ಅದರಲ್ಲೂ ಮುಸ್ಲಿಂ ಸಮುದಾಯಕ್ಕೆ ಮಾತ್ರ ಜಾರಿಯಲ್ಲಿದೆ, ಹಿಂದೂಗಳಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಸುದ್ದಿ ಪ್ರಸಾರ ಮಾಡಲಾಗಿದೆ. ಇದು ಸುಳ್ಳು ಹಾಗೂ ದುರುದ್ದೇಶದಿಂದ ಕೂಡಿದೆ. ಇದು ಸಮಾಜದಲ್ಲಿ ಕೋಮು ಭಾವನೆ ಕೆರಳುವಂತೆ ಮಾಡುವ ಉದ್ದೇಶ ಹೊಂದಿದೆ. ಹೀಗಾಗಿ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...