ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಕುರಿತು ರಾಜ್ಯ ನಾಯಕರು ನಿರ್ಧರಿಸುತ್ತಾರೆ : ಮಲ್ಲಿಕಾರ್ಜುನ ಖರ್ಗೆ

Date:

Advertisements

ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಮಾರ್ಚ್‌ 22) ಬಿಡುಗಡೆ ಮಾಡುವುದಾಗಿ ಹೇಳಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, “ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಕುರಿತು ರಾಜ್ಯ ನಾಯಕರು ನಿರ್ಧರಿಸುತ್ತಾರೆ” ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಮಾರ್ಚ್‌ 22) ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ, ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯನ್ನು ಮುಂದೂಡಿದೆ.

ರಾಜ್ಯ ವಿಧಾನಸಭಾ ಚುನಾವಣೆ ಮತ್ತು ಟಿಕೆಟ್‌ ಹಂಚಿಕೆಯ ವಿಚಾರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದರು. ಅಲ್ಲಿ ಹೈಕಮಾಂಡ್‌ ಜೊತೆಗೆ ಸಭೆ ನಡೆಸಿ, 125 ಕ್ಷೇತ್ರಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದರು.

ದೆಹಲಿಯಿಂದ ರಾಜ್ಯಕ್ಕೆ ವಾಪಾಸಾದ ಬಳಿಕ, ಯುಗಾದಿಯಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಕೈ ನಾಯಕರು ಹೇಳಿದ್ದರು. ಆದರೆ, ಕಾಂಗ್ರೆಸ್ ಟಿಕೆಟ್‌ ಹಂಚಿಕೆಯ ಕುರಿತು ತಿಳಿದುಕೊಳ್ಳಬೇಕಾದರೆ ಇನ್ನೂ ಕೆಲವು ದಿನಗಳು ಕಾಯಬೇಕಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, “ಇವತ್ತು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಹಬ್ಬಕ್ಕಾಗಿ ಎಐಸಿಸಿ ಅಧ್ಯಕ್ಷ ಖರ್ಗೆ ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ 2-3 ದಿನದಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಆಗಲಿದೆ” ಎಂದಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಕೀಯ ವಿಕೃತಿ | ಖರ್ಗೆ ಅವರ ಅನಾರೋಗ್ಯ – ನಂಜು ಕಾರುತ್ತಿರುವ ಬಿಜೆಪಿಗರು

ಖರ್ಗೆ ಅವರು ದಲಿತ ಸಮುದಾಯದಿಂದ ಬಂದವರು. ಆ ಕಾರಣಕ್ಕಾಗಿಯೇ ಬಿಜೆಪಿ ಮತ್ತು...

ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ...

ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ: ಪ್ರತಿಪಕ್ಷ ನಾಯಕ ಆರ್‌ ಅಶೋಕ

ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಎಲ್ಲರೂ ಜಾತಿ...

ಈದಿನ ಗ್ರೌಂಡ್‌ ರಿಪೋರ್ಟ್‌ | ಪ್ರವಾಹ ಇಳಿದುಹೋದ ಮೇಲೆ… ಬದುಕೆಲ್ಲ ಬರಿದಾಗಿದೆ!

ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ...

Download Eedina App Android / iOS

X