ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಮಾರ್ಚ್ 22) ಬಿಡುಗಡೆ ಮಾಡುವುದಾಗಿ ಹೇಳಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, “ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಕುರಿತು ರಾಜ್ಯ ನಾಯಕರು ನಿರ್ಧರಿಸುತ್ತಾರೆ” ಎಂದು ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಮಾರ್ಚ್ 22) ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ, ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯನ್ನು ಮುಂದೂಡಿದೆ.
ರಾಜ್ಯ ವಿಧಾನಸಭಾ ಚುನಾವಣೆ ಮತ್ತು ಟಿಕೆಟ್ ಹಂಚಿಕೆಯ ವಿಚಾರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದರು. ಅಲ್ಲಿ ಹೈಕಮಾಂಡ್ ಜೊತೆಗೆ ಸಭೆ ನಡೆಸಿ, 125 ಕ್ಷೇತ್ರಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದರು.
ದೆಹಲಿಯಿಂದ ರಾಜ್ಯಕ್ಕೆ ವಾಪಾಸಾದ ಬಳಿಕ, ಯುಗಾದಿಯಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಕೈ ನಾಯಕರು ಹೇಳಿದ್ದರು. ಆದರೆ, ಕಾಂಗ್ರೆಸ್ ಟಿಕೆಟ್ ಹಂಚಿಕೆಯ ಕುರಿತು ತಿಳಿದುಕೊಳ್ಳಬೇಕಾದರೆ ಇನ್ನೂ ಕೆಲವು ದಿನಗಳು ಕಾಯಬೇಕಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, “ಇವತ್ತು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಹಬ್ಬಕ್ಕಾಗಿ ಎಐಸಿಸಿ ಅಧ್ಯಕ್ಷ ಖರ್ಗೆ ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ 2-3 ದಿನದಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಆಗಲಿದೆ” ಎಂದಿದ್ದಾರೆ.