ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸಚಿವ ಸ್ಥಾನ

Date:

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್ 9ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಅವರ ಜತೆಗೆ, ಕರ್ನಾಟಕದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಗೆದ್ದು ಸಂಸದರಾದವರ ಪೈಕಿ ಐವರು ಸಂಸದರು ನೂತನ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ.

- Advertisement -

ಕೇಂದ್ರ ಸಂಪುಟದಲ್ಲಿ ಕರ್ನಾಟಕಕ್ಕೆ ಐದು ಸಚಿವ ಸ್ಥಾನ ಸಿಕ್ಕಿರುವುದು ಖಾತರಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇನ್ನು ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಕಂಡಿದ್ದ ವಿ.ಸೋಮಣ್ಣ ಅವರಿಗೂ ಕೂಡ ಕೇಂದ್ರ ಸಚಿವ ಸ್ಥಾನ ಪಕ್ಕಾ ಆಗಿದೆ. ಅಲ್ಲದೇ, ಜನರಿಂದ ಹಾಗೂ ಸ್ವತಃ ಬಿಜೆಪಿ ಕಾರ್ಯಕರ್ತರಿಂದ ‘ಗೋ ಬ್ಯಾಕ್’ ಚಳುವಳಿ ಎದುರಿಸಿದ್ದ ಬೆಂಗಳೂರು ಉತ್ತರ ಸಂಸದೆ ಶೋಭಾ ಕರಾಂದ್ಲಾಜೆ ಕೂಡ ಮತ್ತೊಮ್ಮೆ ಸಚಿವ ಗಾದಿ ಹಿಡಿಯಲಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್, ಹುಬ್ಬಳ್ಳಿ-ಧಾರವಾಡ ಸಂಸದ ಪ್ರಹ್ಲಾದ ಜೋಶಿ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈಗ ಕರ್ನಾಟಕದಿಂದ ಸಚಿವರಾಗಿ ಆಯ್ಕೆಯಾದವರ ಪೈಕಿ ಮೂವರು ಈ ಹಿಂದೆಯೂ ಸಚಿವರಾಗಿದ್ದರು. ಈ ಹಿಂದಿನ ಮೋದಿ ಸರ್ಕಾರದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿದ್ದರೆ, ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಶೋಭಾ ಕರಾಂದ್ಲಾಜೆ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾಗಿ ಪ್ರಹ್ಲಾದ ಜೋಶಿ ಇದ್ದರು. ಈಗ ಮತ್ತೆ ಅವರನ್ನೇ ಸಚಿವ ಸಂಪುಟದಲ್ಲಿ ಮುಂದುವರಿಸಲಾಗಿದೆ.

ಇನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಮತ್ತು ಬಸವರಾಜ್ ಬೊಮ್ಮಾಯಿ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿ ಗೆಲುವು ಕಂಡಿದ್ದಾರೆ. ಅವರಿಗೆ ಮೋದಿ ಸಂಪುಟದಲ್ಲಿ ಅವಕಾಶ ಸಿಗಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಅವರನ್ನೂ ಮೀರಿ ವಿ.ಸೋಮಣ್ಣ ಅಚ್ಚರಿಯ ರೀತಿಯಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರವಿವಾರ ಮಧ್ಯಾಹ್ನವೇ ಬಿರುಗಾಳಿ ಸಹಿತ ಜೋರು ಮಳೆ

“ನನಗೆ ಕೇಂದ್ರ ಸಚಿವನಾಗುವ ಅವಕಾಶ ಸಿಕ್ಕಿದೆ. ಪ್ರಧಾನಿ, ಅಮಿತ್ ಶಾ, ಜೆ.ಪಿ.ನಡ್ಡಾ ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ಕರ್ನಾಟಕದ 5 ಜನರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ” ಎಂದು ದೆಹಲಿಯಲ್ಲಿ ಮಾತನಾಡಿದ ಸೋಮಣ್ಣ ಹೇಳಿದ್ದಾರೆ.

ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಜೂನ್ 9ರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಿಎಂ ಮೋದಿ ಜೊತೆಗೆ ಹಲವು ಸಂಸದರು ಸಚಿವರಾಗಿ ಸಂಪುಟ ಸೇರಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...